ಈಗಾಗಲೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದೇಶಾದ್ಯಂತ ಒಟ್ಟು ಏಳು ಹಂತದಲ್ಲಿ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಹಾಗಾದ್ರೆ, ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಯಾವ್ಯಾವ ಪಕ್ಷದಿಂದ ಯಾರು-ಯಾರು ಸ್ಪರ್ಧೆ ಮಾಡುತ್ತಿದ್ದಾರೆ ಎನ್ನುವ ವಿವರ ಇಲ್ಲಿದೆ.
Ad
Follow us on
ಬೆಂಗಳೂರು, (ಮಾರ್ಚ್ 30): ಕರ್ನಾಟಕದಲ್ಲಿ(Karnataka) ಲೋಕಸಭಾ ಚುನಾವಣೆ (Loksabha Elections 2024) ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್(Congress) ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ(BJP) ಮೈತ್ರಿ ಮಾಡಿಕೊಂಡಿವೆ. ಇನ್ನು ರಾಜ್ಯದ 28 ಲೋಕಸಭಾ ಕ್ಷೇತ್ರಕ್ಕೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿವೆ. ಕಾಂಗ್ರೆಸ್ 28 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಮೈತ್ರಿ ಪಕ್ಷಗಳಾದ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಕಣಕ್ಕಿಳಿದಿದೆ. ಹಾಗಾದ್ರೆ, ಯಾವ್ಯಾವ ಲೋಕಸಭಾ ಕ್ಷೇತ್ರದಿಂದ ಅಂತಿಮವಾಗಿ ಕಣಕ್ಕಿಳಿದ ಅಭ್ಯರ್ಥಿಗಳು ಯಾರು ? ಯಾರಿಗೆ ಯಾರು ಎದುರಾಳಿ ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ.