ಜೆಡಿಎಸ್‌ನಿಂದ ಎಲ್.ಆರ್ ಶಿವರಾಮೇಗೌಡ ಉಚ್ಚಾಟನೆ; ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶ
ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಲ್.ಆರ್. ಶಿವರಾಮೇಗೌಡ ಉಚ್ಚಾಟನೆ ಮಾಡಲಾಗಿದೆ. ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟನೆ ಮಾಡಿ ಆದೇಶ ನೀಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ.
ಬೆಂಗಳೂರು: ಜೆಡಿಎಸ್‌ನಿಂದ ಎಲ್.ಆರ್. ಶಿವರಾಮೇಗೌಡ ಉಚ್ಚಾಟನೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಲ್.ಆರ್. ಶಿವರಾಮೇಗೌಡ ಉಚ್ಚಾಟನೆ ಮಾಡಲಾಗಿದೆ. ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟನೆ ಮಾಡಿ ಆದೇಶ ನೀಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ.
ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದರು. ಶಿವರಾಮೇಗೌಡ ಪಕ್ಷದಿಂದ ಹೊರಹಾಕಲು ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದರು ಎಂದು ತಿಳಿದುಬಂದಿತ್ತು. ನೋಟಿಸ್ ನೀಡಿ ಪಕ್ಷದಿಂದ ಹೊರಹಾಕಲು ಸೂಚನೆ ಕೊಡಲಾಗಿತ್ತು. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕುಮಾರಸ್ವಾಮಿ ಸೂಚನೆ ನೀಡಿದ್ದರು.
ಮಂಡ್ಯ ಜಿಲ್ಲೆಯ ದಿವಂಗತ ನಾಯಕರು ಹಾಗೂ ಒಕ್ಕಲಿಗ ಸಮುದಾಯದ ಹಿರಿಯರೂ ಆಗಿದ್ದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಲೋಕಸಭೆಯ ಮಾಜಿ ಸದಸ್ಯ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರ ಅನುಮತಿ ಪಡೆಯಲಾಗಿದ್ದು, ಶಿವರಾಮೇಗೌಡರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡುವಂತೆ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರಿಗೆ ಸೂಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು ಸಮುದಾಯದ ಹಿರಿಯ ನಾಯಕರು ಹಾಗೂ ಇಡೀ ರಾಜ್ಯವೇ ಗೌರವಿಸುತ್ತಿದ್ದ ಜಿ. ಮಾದೇಗೌಡರಂಥ ಹಿರಿಯರ ಬಗ್ಗೆ ಶಿವರಾಮೇಗೌಡರು ಅಸಭ್ಯವಾಗಿ ಮಾತನಾಡಿರುವುದು ಅಕ್ಷ್ಯಮ್ಯ. ಮಾದೇಗೌಡರ ಬಗ್ಗೆ ಅವರು ಮಾತನಾಡಿರುವ ಆಡಿಯೋವನ್ನು ನಾನೂ ಕಳಿದ್ದೇನೆ. ಇಂಥ ನಡವಳಿಕೆಯನ್ನು ಸಹಿಸುವ ಪ್ರಶ್ನೆ ಇಲ್ಲ ಎಂದು ಹೇಳಿದ್ದರು.
ಮಂಡ್ಯದ ರಾಜಕೀಯದ ಬಗ್ಗೆ ಮಾತನಾಡುತ್ತಾ ಶಿವರಾಮೇಗೌಡರು ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಅಸಭ್ಯವಾಗಿ ಅವರು ಮಾತನಾಡಿರುವ ಮೊಬೈಲ್ ಕರೆಯ ಆಡಿಯೋ ಈಗ ವೈರಲ್ ಆಗಿದೆ. ತಮಗೆ ಸಂಬಂಧವೇ ಇಲ್ಲದ ವಿಷಯಗಳನ್ನು ಅವರು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೆ, ಮಾದೇಗೌಡರ ಬಗ್ಗೆ ಅಂತಹ ಕೆಳಮಟ್ಟದ ಭಾಷೆ ಬಳಸುವ ಅಗತ್ಯ ಇರಲಿಲ್ಲ ಎಂದು ಕುಮಾರಸ್ವಾಮಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದರು.
ಮಾದೇಗೌಡರಿಗೂ ಹಾಗೂ ನಮ್ಮ ಪಕ್ಷಕ್ಕೂ ರಾಜಕೀಯವಾಗಿ ವಿಭಿನ್ನತೆ ಇತ್ತು ನಿಜ. ಹಾಗೆಂದು ಅವರ ಬಗ್ಗೆ ಅಗೌರವದಿಂದ ನಡೆದುಕೊಳ್ಳುವುದನ್ನು ಒಪ್ಪಲಾಗದು. ಅಲ್ಲದೆ, ಮಾದೇಗೌಡರು ಇಂದು ನಮ್ಮ ನಡುವೆ ಬದುಕಿಲ್ಲ. ದಿವಂಗತ ನಾಯಕರ ಹೆಸರನ್ನು ಶಿವರಾಮೇಗೌಡರು ಯಾಕೆ ತಂದರೋ ಗೊತ್ತಿಲ್ಲ. ಇಂತಹ ಮಾತುಗಳು ಯಾರಿಗೂ ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದರು.
ತಕ್ಷಣವೇ ಅವರ ವಿರುದ್ಧ ಕ್ರಮ ಜರುಗಿಸುವಂತೆ ನಮ್ಮ ಪಕ್ಷದ ಅಧ್ಯಕ್ಷರಿಗೆ ಸೂಚನೆ ಕೊಟ್ಟಿದ್ದೇನೆ. ಅಂತವರು ಪಕ್ಷದಲ್ಲಿ ಇದ್ದರೆ ಶೋಭೆ ಇರುವುದಿಲ್ಲ ಎಂದ ಕುಮಾರಸ್ವಾಮಿ ಅವರು; ಮಾತೆತ್ತಿದರೆ ಹಣದ ಬಗ್ಗೆ ಶಿವರಾಮೇಗೌಡ ಹಣದ ಬಗ್ಗೆ ಮಾತನಾಡುತ್ತಾರೆ. ಹಣವನ್ನು ಇವರೊಬ್ಬರೇ ಕಂಡಿಲ್ಲ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಹಣ ಖರ್ಚು ಮಾಡಿದ್ದೆ ಎಂದು ಹೇಳಿದ್ದಾರೆ. 30 ಕೋಟಿ ರೂ. ಖರ್ಚು ಮಾಡಿರೋದನ್ನು ಹೇಳಿಕೊಂಡಿದ್ದಾರೆ. ಅವರು ಅಷ್ಟು ಹಣವನ್ನು ಅದ್ಯಾರಿಗೆ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದರು.
ಪದೇ ಪದೆ ಶಿವರಾಮೇಗೌಡರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಇಲ್ಲಿಯವರೆಗೆ ಇಂಥ ಚಾಳಿಯನ್ನು ತಿದ್ದಿಕೊಳ್ಳುತ್ತಾರೆ ಅಂದುಕೊಂಡು ಸುಮ್ಮನಿದ್ದೆವು. ಆದರೆ ಅದು ಆಗಲಿಲ್ಲ. ಎಲ್ಲಕ್ಕೂ ಒಂದು ಇತಿಮಿತಿ ಇದೆ ಎಂದು ಅವರು ಹೇಳಿದ್ದರು.
ಶಿವರಾಮೇಗೌಡ ಪ್ರತಿಕೃತಿಯನ್ನು ದಹಿಸಿ ತೀವ್ರ ಆಕ್ರೋಶ
ಇತ್ತ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಕೆ.ಎಂ. ದೊಡ್ಡಿಯಲ್ಲಿ ಜಿ. ಮಾದೇಗೌಡ ಅಭಿಮಾನಿಗಳಿಂದ ಧರಣಿ ನಡೆಸಲಾಗಿದೆ. ಶಿವರಾಮೇಗೌಡ ಪ್ರತಿಕೃತಿಯನ್ನು ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಾದೇಗೌಡ ವಿರುದ್ಧ ಶಿವರಾಮೇಗೌಡ ಲಘುವಾಗಿ ಮಾತಾಡಿದ್ದರು. ಹೀಗಾಗಿ ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಅಷ್ಟೇ ಅಲ್ಲದೆ ಎಲ್.ಆರ್. ಶಿವರಾಮೇಗೌಡ ವಿರುದ್ಧ ಮಂಡ್ಯ ಎಸ್‌ಪಿಗೆ ದೂರು ನೀಡಲಾಗಿದೆ. ಜಿ.ಮಾದೇಗೌಡ ಅಭಿಮಾನಿಗಳಿಂದ ಎಸ್‌ಪಿಗೆ ದೂರು ನೀಡಲಾಗಿದೆ. ಜಿ.ಮಾದೇಗೌಡ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಶಿವರಾಮೇಗೌಡ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ದೂರು ನೀಡಲಾಗಿದೆ. ಮಾಜಿ ಸಂಸದ ಶಿವರಾಮೇಗೌಡ ಹೇಳಿಕೆ ಕಾನೂನುಬಾಹಿರ ಆಗಿದೆ ಎಂದು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ಆಗ್ರಹಿಸಲಾಗಿದೆ.
ಇದನ್ನೂ ಓದಿ: ವೈರಲ್ ಆಡಿಯೋ: ಮಾದೇಗೌಡ ವಿರುದ್ಧ ಅವಹೇಳನಕಾರಿ ಮಾತು ನನ್ನದೇ ಎಂದ ಶಿವರಾಮೇಗೌಡ -ಶಿಸ್ತುಕ್ರಮಕ್ಕೆ ಜೆಡಿಎಸ್ ತೀರ್ಮಾನ?
ಇದನ್ನೂ ಓದಿ: ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್
Published On - 5:07 pm, Mon, 31 January 22