Karnataka Cabinet expansion: ಮಧುಗಿರಿ ಶಾಸಕ ಕೆಎನ್ ರಾಜಣ್ಣರಿಗೆ ಒಲಿದ ಸಚಿವ ಸ್ಥಾನ

ಮಧುಗಿರಿ ಕಾಂಗ್ರೆಸ್​ ಶಾಸಕರಾಗಿರುವ ಕೆಎನ್ ರಾಜಣ್ಣರಿಗೆ ಸಚಿವ ಸ್ಥಾನ ಒಲಿದಿದೆ. ಅದರಂತೆ ಇಂದು(ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ಇವರ ರಾಜಕೀಯ, ಶಿಕ್ಷಣ ಕುರಿತು ಮಾಹಿತಿ ಇಲ್ಲಿದೆ.

Karnataka Cabinet expansion: ಮಧುಗಿರಿ ಶಾಸಕ ಕೆಎನ್ ರಾಜಣ್ಣರಿಗೆ ಒಲಿದ ಸಚಿವ ಸ್ಥಾನ
ಕೆ ಎನ್​ ರಾಜಣ್ಣ
Follow us
|

Updated on:May 27, 2023 | 1:21 PM

ತುಮಕೂರು: ಮಧುಗಿರಿ ಕಾಂಗ್ರೆಸ್​ ಶಾಸಕರಾಗಿರುವ ಕೆಎನ್ ರಾಜಣ್ಣ(KN Rajanna)ರಿಗೆ ಸಚಿವ ಸ್ಥಾನ ಒಲಿದಿದೆ. ಅದರಂತೆ ಇಂದು(ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ತುಮಕೂರು ತಾಲೂಕಿನ ಕ್ಯಾತಸಂದ್ರದಲ್ಲಿ 1951 ಏಪ್ರಿಲ್​ 13 ರಂದು ಜನಿಸಿದ ಇವರು ಬಿಎಸ್ಸಿ, ಎಲ್​ಎಲ್​ಬಿ ಮುಗಿಸಿದ್ದಾರೆ. ಬಳಿಕ ವಕೀಲ ವೃತ್ತಿ ಮಾಡುತ್ತ ಕೃಷಿಯಲ್ಲಿ ತೊಡಗಿಕೊಂಡರು. ನಂತರ ಶ್ರೀಮತಿ ಎಸ್​ ಆರ್​ ಶಾಂತಲಾ ಅವರನ್ನ ಮದುವೆಯಾದರು. ಇವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬಳು ಮಗಳಿದ್ದಾಳೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ರಾಜಣ್ಣ, ಪ್ರಬಲ ಸಚಿವ ಆಕಾಂಕ್ಷಿಯಾಗಿದ್ದರು. ಕೊನೆಗೂ ಸಚಿವ ಸ್ಥಾನ ಪಡೆಯುವಲ್ಲಿ ಸಕ್ಸಸ್ ಆಗಿದ್ದಾರೆ. ಸಹಕಾರಿ ಖಾತೆಯ ಮೇಲೆ ಕಣ್ಣಿಟ್ಟಿರುವ ರಾಜಣ್ಣರಿಗೆ ಯಾವ ಖಾತೆ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

ಮುಖ್ಯಮಂತ್ರಿ ಫೈಟ್​ನಲ್ಲಿ ಸಿದ್ದರಾಮಯ್ಯನವರಿಗೆ ಮತ ಹಾಕಿದ್ದೇನೆ ಎಂದು ಬಹಿರಂಗಪಡಿಸಿದ್ದ ಕೆಎನ್ ರಾಜಣ್ಣ!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದ ಕಾಂಗ್ರೆಸ್‌ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ದೊಡ್ಡ ಕಗ್ಗಂಟಾಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಯಾರು ಸಿಎಂ ಆಗಬೇಕು ಎಂಬ ಪ್ರಶ್ನೆ ಎದ್ದಿತ್ತು, ಈ ಕಾರಣಕ್ಕೆ ತಡರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿತ್ತು. ಬೆಂಗಳೂರಿನ ಹೋಟೆಲ್‌ನಲ್ಲಿ ಭಾನುವಾರ(ಮೇ.15) ತಡರಾತ್ರಿ ಆರಂಭವಾದ ಸಭೆ ಮಧ್ಯರಾತ್ರಿ 1.30ರವರೆಗೆ ನಡೆದಿತ್ತು. ಇದರಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲಾ 135 ಶಾಸಕರು ಭಾಗವಹಿಸಿದ್ದರು. ಮುಂದಿನ ಸಿಎಂ ಯಾರಾಗಬೇಕು ಎಂದು ಗುಪ್ತ ಮತದಾನ ಮಾಡಿರುವ ಶಾಸಕರು ಸುಮ್ಮನಿದ್ದರೇ ಮಧುಗಿರಿ ಶಾಸಕ ಕೆಎನ್ ರಾಜಣ್ಣ ಮಾತ್ರ ತಾವು ಸಿದ್ದರಾಮಯ್ಯಗೆ ಬೆಂಬಲ ನೀಡಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ:ನೂತನ 24 ಸಚಿವರ ಪಟ್ಟಾಭೀಷೇಕಕ್ಕೆ ರಾಜಭವನ ಹೇಗೆ ಸಿದ್ಧವಾಗಿದೆ ನೋಡಿ

ಹೌದು ಮತದಾನ ನಡೆಯುತ್ತಿರುವಾಗ ಮತ ಚಲಾಯಿಸಿ ಬಂದ ಕೆಎನ್ ರಾಜಣ್ಣ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದು, “ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೆ. ಆದರೆ, ಯಾರು ಮತ ಚಲಾಯಿಸಿದ್ದಾರೋ ಗೊತ್ತಿಲ್ಲ. ಆದರೆ, ನನ್ನ ಮತ ನಾನು ಸಿದ್ದರಾಮಯ್ಯ ಅವರಿಗೆ ಹಾಕಿದ್ದೇನೆ. ಹೆಚ್ಚು ಶಾಸಕರು ಸಿದ್ದರಾಮಯ್ಯ ಅವರಿಗೆ ಮತ ಹಾಕಿರುವ ಸಾಧ್ಯತೆಯಿದೆ ಎಂದು ಬಹಿರಂಗವಾಗಿ ಹೇಳಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆದರು. ಇದೀಗ ರಾಜಣ್ಣನಿಗೂ ಸಚಿವ ಸ್ಥಾನ ಸಿಕ್ಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sat, 27 May 23

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ