AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಬಿಜೆಪಿ ಸಂಸದರು ಬರೀ ಶೋಪೀಸ್‌ಗಳು, ಯಾರೂ ಗಂಡಸರಲ್ಲ: ಬಾಲಕೃಷ್ಣ ವಾಗ್ದಾಳಿ

ಮಾಗಡಿಯ ಕಾಂಗ್ರೆಸ್‌ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಕೆಲವು ದಿನದ ಹಿಂದಷ್ಟೇ ಸಂಸತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಬಿಜೆಪಿಯ ಸಂಸದರೆಲ್ಲರೂ ಶೋಪೀಸ್‌ಗಳು, ಅದರ ನಾಯಕರು ಯಾರೂ ಗಂಡಸರಲ್ಲ ಎಂದು ವಿವಾದಾತ್ಮಕ ಹೇಳಿಕೆನೀಡಿದ್ದಾರೆ .

ರಾಜ್ಯದ ಬಿಜೆಪಿ ಸಂಸದರು ಬರೀ ಶೋಪೀಸ್‌ಗಳು, ಯಾರೂ ಗಂಡಸರಲ್ಲ: ಬಾಲಕೃಷ್ಣ ವಾಗ್ದಾಳಿ
ಕಾಂಗ್ರೆಸ್‌ ಶಾಸಕ ಎಚ್.ಸಿ. ಬಾಲಕೃಷ್ಣ
TV9 Web
| Edited By: |

Updated on: Feb 05, 2024 | 5:56 PM

Share

ರಾಮನಗರ, (ಫೆಬ್ರವರಿ 05): ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಪಾಲನ್ನು ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್​ನ ಶಾಸಕರು, ಸಚಿವರು ದೆಹಲಿಯ ಜಂತರ್‌ ಮಂತರ್​ ನಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಮಾಗಡಿ ಕಾಂಗ್ರೆಸ್​ ಶಾಸಕ ಎಚ್​ಸಿ ಬಾಲಕೃಷ್ಣ(Congress MLA HC Balakrishna ), ಜೆಪಿಯ ಸಂಸದರೆಲ್ಲರೂ ಶೋಪೀಸ್‌ಗಳು, ಅದರ ನಾಯಕರು ಯಾರೂ ಗಂಡಸರಲ್ಲ ಎಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಗರದ ನಾಗರಕಲ್ಲುದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಎಚ್.ಸಿ.ಬಾಲಕೃಷ್ಣ, ನಮ್ಮ ಹೋರಾಟ ನೋಡಿಯಾದರೂ ಬಿಜೆಪಿಯ ಗಂಡಸರು ಹೋರಾಟ ಮಾಡುತ್ತಾರಾ ನೋಡೋಣ.. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ. ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಅರ್ಥ ಎಂದು ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕರ್ನಾಟಕದ ಪಾಲಿನ ಹಣ ನೀಡದ ಕೇಂದ್ರದ ವಿರುದ್ಧ ದೆಹಲಿಯಲ್ಲಿ ಧರಣಿ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಹೆಚ್ಚು ಟ್ಯಾಕ್ಸ್ ಕಟ್ಟುವ ಎರಡನೇ ರಾಜ್ಯ ನಮ್ಮದು. ನಮಗೆ ಕೊಡಬೇಕಾದ ಅನಯದಾನವನ್ನ ನಮಗೆ ಕೊಡುತ್ತಿಲ್ಲ. ಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ. ಆದರೆ ವೈಯಕ್ತಿಕ ವರ್ಚಸ್ಸು ಇಲ್ಲ. ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ. ಬಿಜೆಪಿ ಸಂಸದರೆಲ್ಲಾ ಶೋ ಪೀಸ್ ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಕೊಂಡು ಬರೋದು ಅಷ್ಟೇ ಇವರ ಕೆಲಸ. ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಕೆಲವು ದಿನದ ಹಿಂದಷ್ಟೇ ಇದೇ ಮಾಗಡಿಯ ಕಾಂಗ್ರೆಸ್‌ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಸಂಸತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಬಿಜೆಪಿಯ ಸಂಸದರೆಲ್ಲರೂ ಶೋಪೀಸ್‌ಗಳು, ಅದರ ನಾಯಕರು ಯಾರೂ ಗಂಡಸರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ .

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!