AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Speaker Election Result: ಮಹಾರಾಷ್ಟ್ರ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನರ್ವೇಕರ್​​ ಆಯ್ಕೆ

ಕೊಲಾಬಾ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ವರ್​ವೆಕರ್ ಅವರನ್ನು ಆಡಳಿತಾರೂಢ ಮೈತ್ರಿಕೂಟವು ತನ್ನ ಅಭ್ಯರ್ಥಿಯಾಗಿ ಘೋಷಿಸಿತ್ತು.

Maharashtra Speaker Election Result: ಮಹಾರಾಷ್ಟ್ರ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನರ್ವೇಕರ್​​ ಆಯ್ಕೆ
ಮಹಾರಾಷ್ಟ್ರದ ನೂತನ ಸ್ಪೀಕರ್ ರಾಹುಲ್ ನರ್​ವೆಕರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 03, 2022 | 3:38 PM

Share

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ (Maharashtra Assembly) ಬಹುನಿರೀಕ್ಷಿತ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಭಾನುವಾರ ನಡೆಯಿತು. ಮುಖ್ಯಮಂತ್ರಿಯಾಗಿ ಏಕನಾಥ್ ಶಿಂದೆ (Eknath Shinde) ಮತ್ತು ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್  (Devendra Fadnavis) ಪ್ರಮಾಣ ವಚನ ಸ್ವೀಕರಿಸಿದ ನಂತರ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಿತು. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿಯ ರಾಹುಲ್ ನರ್ವೇಕರ್ ಅವರ ಉಮೇದುವಾರಿಕೆಗೆ ಹೆಚ್ಚಿನವರ ಬೆಂಬಲ ಸಿಕ್ಕಿದೆ. ಮತಎಣಿಕೆ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದೆ. ಅವರ ಪರವಾಗಿ 164 ಮತ್ತು ವಿರುದ್ಧವಾಗಿ 107 ಮತಗಳು ಚಲಾವಣೆಯಾಗಿದ್ದವು.

ಎರಡು ದಿನಗಳ ವಿಶೇಷ ಅಧಿವೇಶನವು ಆರಂಭವಾದ ತಕ್ಷಣ ಸ್ಪೀಕರ್ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿತು. ಕೊಲಾಬಾ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ನರ್ವೇಕರ್ ಅವರನ್ನು ಆಡಳಿತಾರೂಢ ಮೈತ್ರಿಕೂಟವು ತನ್ನ ಅಭ್ಯರ್ಥಿಯಾಗಿ ಘೋಷಿಸಿತು. ನರ್ವೇಕರ್ ಅವರ ಹೆಸರು ಸೂಚನೆಯಾದ ಬಗ್ಗೆ ಹಲವರಲ್ಲಿ ಅಚ್ಚರಿ ಮೂಡಿತ್ತು.

ನರ್​ವೆಕರ್ ಅವರ ಎದುರಾಳಿಯಾಗಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್ ಮೈತ್ರಿಕೂಟವು ಉದ್ಧವ್ ಠಾಕ್ರೆ ಅವರ ಕಟ್ಟರ್ ಬೆಂಬಲಿಗ ರಾಜನ್ ಸಾಲ್​ವಿ ಅವರನ್ನು ಹೆಸರಿಸಿತ್ತು. ಈ ಮೊದಲು 2019ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಮೈತ್ರಿ ಸರ್ಕಾರವು ಸ್ಥಾನ ಹಂಚಿಕೆ ಒಪ್ಪಂದ್ಕೆ ಅನುಗುಣವಾಗಿ ಕಾಂಗ್ರೆಸ್​ನ ಶಾಸಕರಿಗೆ ಸ್ಪೀಕರ್ ಸ್ಥಾನ ಬಿಟ್ಟುಕೊಟ್ಟಿತ್ತು. ಆದರೆ ಉದ್ಧವ್ ಠಾಕ್ರೆ ಅವರ ತಿರುಗಿಬಿದ್ದ ಶಿವಸೇನೆ ಶಾಸಕರು ಮೈತ್ರಿ ಸರ್ಕಾರ ಕೆಡವಿದರು.

ನಿಲುವಳಿ ಮಂಡನೆಯ ನಂತರ ಡೆಪ್ಯುಟಿ ಸ್ಪೀಕರ್ ನರಹರಿ ಝಿರ್​ವಾಲ್ ಮತಗಳನ್ನು ಎಣಿಸುವಂತೆ ಸೂಚನೆ ನೀಡಿದರು. ಬಿಜೆಪಿಯ ಇಬ್ಬರು ಶಾಸಕರಾದ ಗೋವರ್ದನ್ ಶರ್ಮಾ ಮತ್ತು ಪ್ರಕಾಶ್ ಪಾಟೀಲ್ ಭರ್​ಸಖಾಲೆ ಅವರ ಮತಗಳ ಬಗ್ಗೆ ಗೊಂದಲ ಮೂಡಿದ್ದರಿಂದ ಕೆಲ ಸಮಯ ಮತಎಣಿಕೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ನಂತರ ಮತ್ತೆ ಆರಂಭವಾಯಿತು.

ಮಹಾ ವಿಕಾಸ್ ಅಘಾಡಿ ಸರ್ಕಾರವು ಪತನಗೊಂಡ ನಂತರ ನಂತರ ಇದೇ ಮೊದಲ ಬಾರಿಗೆ ಎಲ್ಲ ಪಕ್ಷಗಳ ಶಾಸಕರು ವಿಧಾನಸಭೆ ಅಧಿವೇಶನದಲ್ಲಿ ಸೇರಿದ್ದಾರೆ. ತಮ್ಮ ಪಕ್ಷದ ಉಮೇದುವಾರರಿಗೆ 170 ಮತಗಳು ಸಿಗಬಹುದು ಎಂದು ಮಹಾರಾಷ್ಟ್ರದ ಬಿಜೆಪಿ ನಾಯಕ ಸುಧೀರ್ ಮುನ್​ಗಂಟಿವಾರ್ ಎಎನ್​ಐ ಸುದ್ದಿಸಂಸ್ಥೆಗೆ ಇಂದು ಮುಂಜಾನೆ ಪ್ರತಿಕ್ರಿಯಿಸಿದ್ದರು.

ಬಂಡಾಯ ಶಾಸಕರು ತಮ್ಮದೇ ನಿಜವಾದ ಶಿವಸೇನೆ, ಬಹುತೇಕ ಶಾಸಕರ ತಮಗೇ ಇದೆ ಎಂದು ಪ್ರತಿಪಾದಿಸಿದ್ದಾರೆ. ಮಹಾವಿಕಾಸ್ ಅಘಾಡಿ ಸರ್ಕಾರದ ಡೆಪ್ಯುಟಿ ಸ್ಪೀಕರ್ ನರಹರಿ ಝಿರ್​ವಾಲ್ ಅವರು 16 ಬಂಡಾಯ ಶಾಸಕರ ವಿರುದ್ಧ ಅನರ್ಹತೆಯ ವಿಧಿವಿಧಾನಗಳನ್ನು ಆರಂಭಿಸಿದ್ದಾರೆ. ಈ ಪ್ರಕರಣದ ವಿಚಾರಣೆಯು ಇನ್ನೂ ಸುಪ್ರೀಂಕೋರ್ಟ್​ನಲ್ಲಿ ಬಾಕಿಯಿದೆ. ಬಂಡಾಯ ಶಾಸಕರಿಗೆ ಪ್ರತಿಕ್ರಿಯಿಸಿಸಲು ಡೆಪ್ಯುಟಿ ಸ್ಪೀಕರ್ ನೀಡಿದ್ದ 48 ಗಂಟೆಗಳ ಕಾಲಮಿತಿಯನ್ನು ಸುಪ್ರೀಂಕೋರ್ಟ್ ಜುಲೈ 12ರವರೆಗೆ ವಿಸ್ತರಿಸಿತ್ತು.

Published On - 12:52 pm, Sun, 3 July 22

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?