ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ನಾಳೆ ಏಕನಾಥ್ ಶಿಂಧೆ ನೇತೃತ್ವದ  ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ವರದಿ ಮಾಡಿವೆ.

ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
ಏಕನಾಥ್ ಶಿಂಧೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 09, 2022 | 7:55 AM

ಬಹುನಿರೀಕ್ಷಿತ ಮಹಾರಾಷ್ಟ್ರ ಸಚಿವ ಸಂಪುಟ (Maharashtra cabinet expansion) ವಿಸ್ತರಣೆ ನಾಳೆ (ಮಂಗಳವಾರ, ಆಗಸ್ಟ್ 9)ರಂದು ಬೆಳಗ್ಗೆ 11ಗಂಟೆಗೆ ಮಹಾರಾಷ್ಟ್ರ ರಾಜ್ ಭವನ್​​ನಲ್ಲಿ ನಡೆಯಲಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ನಾಳೆ ಬೆಳಗ್ಗೆ ಮುಂಬೈಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ, ಯಾರು ಸಚಿವ ಸಂಪುಟಕ್ಕೆ ಸೇರುತ್ತಾರೆ ಎಂಬುದೂ ಗೊತ್ತಿಲ್ಲ ಎಂದು ಬಿಜೆಪಿಯ ಹಿರಿಯ ನೇತಾರ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಫಡ್ನವಿಸ್ ಮತ್ತು ಶಿಂಧೆ (Eknath Shinde) ಹಲವಾರು ಬಾರಿ ದೆಹಲಿಗೆ ಭೇಟಿ ನೀಡಿದ್ದಾರೆ. ಈ ವಾರವೇ ಮಹಾರಾಷ್ಟ್ರ ಸಿಎಂ ಶಿಂಧೆ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, 15 ಸಚಿವರನ್ನು ಸಂಪುಟಕ್ಕೆ ಸೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಗೃಹಖಾತೆಯನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿರುವುದರಿಂದ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗಿಲ್ಲ ಮತ್ತು ಶೀಘ್ರದಲ್ಲಿಯೇ ಹೆಚ್ಚಿನ ಸಚಿವರನ್ನು ಸೇರ್ಪಡೆಗೊಳಿಸಲಾಗುವುದು ಎಂದು ಶಿಂಧೆ ಶನಿವಾರ ಹೇಳಿದ್ದಾರೆ.

ಇಬ್ಬರು ಸಚಿವರು ಸಚಿವ ಸಂಪುಟದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಎನ್‌ಸಿಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಟೀಕಿಸಿದ್ದಾರೆ. ಅಜಿತ್ ಪವಾರ್ ವಿರೋಧ ಪಕ್ಷದ ನಾಯಕ. ಅವರು  ಅಂತಹ ವಿಷಯಗಳನ್ನು ಹೇಳಬೇಕಾಗುತ್ತದೆ. ಅಜಿತ್ ದಾದಾ ಅವರು ಸರ್ಕಾರದಲ್ಲಿದ್ದಾಗ ಮೊದಲ 32 ದಿನಗಳವರೆಗೆ ಕೇವಲ ಐದು ಮಂತ್ರಿಗಳಿದ್ದರು ಎಂಬುದನ್ನು ಮರೆತುಬಿಡುತ್ತಾರೆ ಎಂದು ಫಡ್ನವಿಸ್ ಭಾನುವಾರ ಹೇಳಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳು ಸತತ ಗೆಲುವಿನ ಹಾದಿಯನ್ನು ಹೊಂದಿರುವ 16 ಸಂಸದೀಯ ಕ್ಷೇತ್ರಗಳನ್ನು ಗುರುತಿಸುವ ಮೂಲಕ ಬಿಜೆಪಿ ತನ್ನ ಹೆಜ್ಜೆಗುರುತನ್ನು ಸುಧಾರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಫಡ್ನವಿಸ್ ಹೇಳಿದ್ದಾರೆ. ಈ ಕ್ಷೇತ್ರಗಳು ಈಗ ಶಿಂಧೆ ಪಾಳಯಕ್ಕೆ ಸೇರ್ಪಡೆಗೊಂಡಿರುವ ಶಿವಸೇನಾ ನಾಯಕರ ಹಿಡಿತದಲ್ಲಿವೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 6 ದಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕರೆ ನ್ಯಾಯಾಂಗ ವಿಷಯಗಳನ್ನು ಹೊರತುಪಡಿಸಿ ಕಾರ್ಯದರ್ಶಿಗಳಿಗೆ ಯಾವುದೇ ಮಂತ್ರಿ ಮಟ್ಟದ ಅಧಿಕಾರವನ್ನು ನೀಡಲಾಗಿಲ್ಲ ಎಂದು ಹೇಳಿದ್ದಾರೆ.  ಮುಖ್ಯಮಂತ್ರಿಗಳು ಇಬ್ಬರು ಸದಸ್ಯರ ಸಂಪುಟದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಅಧಿಕಾರಶಾಹಿಗಳಿಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ನೀಡಿದ್ದಾರೆ ಎಂದು ವಿರೋಧ ಪಕ್ಷವು ಆರೋಪಿಸಿತ್ತು.

ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದಲ್ಲಿ ಬಂಡಾಯವೆದ್ದು ಸರ್ಕಾರ ಪತನಗೊಳಿಸಿದ ನಂತರ ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಜೂನ್ 30ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಅಲ್ಲಿಂದ ಇಲ್ಲಿಯವರೆಗೆ ಸಚಿವ ಸಂಪುಟಕ್ಕೆ ಯಾವುದೇ ಸಚಿವರನ್ನು ಸೇರಿಸಿಲ್ಲ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Mon, 8 August 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?