Maharashtra Politics: ಸುಪ್ರೀಂಕೋರ್ಟ್ ಕದ ತಟ್ಟಿದ ಶಿವಸೇನೆ ಬಣ ಬಿಕಟ್ಟು: ಇಂದು ವಿಚಾರಣೆ

Supreme Court: ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ.ಬಿ.ಪರ್ದಿವಾಲಾ ಅವರಿರುವ ನ್ಯಾಯಪೀಠವು ಈ ಸಂಬಂಧ ಸಲ್ಲಿಕೆಯಾಗಿರುವ ಎರಡು ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿದೆ.

Maharashtra Politics: ಸುಪ್ರೀಂಕೋರ್ಟ್ ಕದ ತಟ್ಟಿದ ಶಿವಸೇನೆ ಬಣ ಬಿಕಟ್ಟು: ಇಂದು ವಿಚಾರಣೆ
ಶಿವಸೇನೆ ನಾಯಕ ಏಕನಾಥ್ ಶಿಂಧೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 27, 2022 | 7:42 AM

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ (Shiv Sena) ಶಾಸಕರು ಬಂಡಾಯ ಏಳುವುದರೊಂದಿಗೆ ಆರಂಭವಾಗಿರುವ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಮಹಾರಾಷ್ಟ್ರ (Maharashtra Politics) ವಿಧಾನಸಭೆಯ ಉಪಸಭಾಧ್ಯಕ್ಷರು ನೀಡಿರುವ ಅನರ್ಹತೆಗೆ ಸಂಬಂಧಿಸಿದ ನೊಟೀಸ್​​ ಅನ್ನು ಏಕನಾಥ್ ಶಿಂಧೆ (Eknath Shinde) ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಇಂದು (ಜೂನ್ 27) ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ.ಬಿ.ಪರ್ದಿವಾಲಾ ಅವರಿರುವ ನ್ಯಾಯಪೀಠವು ಈ ಸಂಬಂಧ ಸಲ್ಲಿಕೆಯಾಗಿರುವ ಎರಡು ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿದೆ. ಈ ಪೈಕಿ ಒಂದು ಅರ್ಜಿಯನ್ನು ಶಿಂದೆ ಸಲ್ಲಿಸಿದ್ದರೆ, ಮತ್ತೊಂದು ಅರ್ಜಿಯನ್ನು 15 ಭಿನ್ನಮತೀಯ ಶಾಸಕರ ಗುಂಪಿನ ಪರವಾಗಿ ಭರತ್ ಗೊಗಾವಾಲೆ ಸಲ್ಲಿಸಿದ್ದಾರೆ. ಬಂಡಾಯವೆದ್ದಿರುವ 16 ಶಾಸಕರಿಗೆ ಮಹಾರಾಷ್ಟ್ರದ ಶಾಸಕಾಂಗ ಸಚಿವಾಲಯವು ಸಮನ್ಸ್ ಜಾರಿ ಮಾಡಿದೆ. ಅವರಿಗೆ ನೀಡಿರುವ ಅನರ್ಹತೆ ನೊಟೀಸ್​ಗೆ ಜೂನ್ 27ರ ಒಳಗೆ ಉತ್ತರ ನೀಡಬೇಕು ಎಂದು ಡೆಪ್ಯುಟಿ ಸ್ಪೀಕರ್ ಸೂಚಿಸಿದ್ದಾರೆ.

ಡೆಪ್ಯುಟಿ ಸ್ಪೀಕರ್ ನರಹರಿ ಝಿರ್​ವಾಲ್ ಅವರ ಪದಚ್ಯುತಿ ವಿಚಾರ ಅಂತಿಮಗೊಳ್ಳುವವರೆಗೆ ತಮಗೆ ಜಾರಿಗೊಳಿಸಿರುವ ಅನರ್ಹತೆ ನೊಟೀಸ್​ಗಳನ್ನು ತಡೆಹಿಡಿಯಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ. ತಮ್ಮ ಪದಚ್ಯುತಿ ವಿಚಾರ ಬಾಕಿಯಿರುವ ಡೆಪ್ಯುಟಿ ಸ್ಪೀಕರ್ ಹೇಗೆ ತಮ್ಮ ಅಧಿಕಾರ ಬಳಸಿ ಇತರರಿಗೆ ನೊಟೀಸ್ ಜಾರಿಮಾಡಲು ಸಾಧ್ಯ? ಅವರಿಗೆ ಆ ಅಧಿಕಾರವಿಲ್ಲ ಎಂದು ಶಾಸಕರು ವಾದಿಸಿದ್ದಾರೆ.

‘ಡೆಪ್ಯುಟಿ ಸ್ಪೀಕರ್ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ. ಸರ್ಕಾರ ಹೇಳಿದಂತೆ ಕೇಳುತ್ತಿದ್ದಾರೆ. ಅರ್ಜಿದಾರರು (ಶಿಂದೆ) ಮತ್ತು ಅವರ ಬೆಂಬಲಿಗರನ್ನು ಅನರ್ಹಗೊಳಿಸಲು ಯತ್ನಿಸುತ್ತಿದ್ದಾರೆ’ ಎಂದು ಶಿಂದೆ ತಮ್ಮ ಅರ್ಜಿಯಲ್ಲಿ ಆರೋಪ ಮಾಡಿದ್ದಾರೆ. ವಿಧಾನಸಭೆಯ ಆವರಣದ ಹೊರಗೆ ನಡೆಯುವ ಸಭೆಯಲ್ಲಿ ಪಾಲ್ಗೊಂಡರೆ ಪಕ್ಷಾಂತರ ನಿಷೇಧ ಕಾಯ್ದೆಯ ಅನ್ವಯ ಅನರ್ಹತೆಯ ನೊಟೀಸ್ ನೀಡಲು ಅವಕಾಶ ಇರುವುದಿಲ್ಲ’ ಎಂದು ಅವರು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
MVA Crisis: ಬಾಳಾಸಾಹೇಬರ ಹೆಸರು ಬಿಡಿ, ನಿಮ್ಮಪ್ಪನ ಹೆಸರು ಬಳಸಿಕೊಳ್ಳಿ: ಬಂಡಾಯ ಶಾಸಕರಿಗೆ ಸಂಜಯ್ ರಾವುತ್ ಸವಾಲು
Image
ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಉದ್ಧವ್ ಠಾಕ್ರೆಗೆ ನೀಡಿ ನಿರ್ಣಯ ಅಂಗೀಕರಿಸಿದ ಶಿವಸೇನಾ
Image
Maharashtra Political Analysis: ಶಿವಸೇನೆ ಪಕ್ಷದ ಇಬ್ಭಾಗ ಖಚಿತ; ಏಕನಾಥ್ ಶಿಂಧೆ ಬಣದ ಜೊತೆ ಸರ್ಕಾರ ರಚನೆಗೆ ಬಿಜೆಪಿ ಕಾತರ
Image
MVA Crisis: ವಿಶ್ವಾಸಮತ ಯಾಚನೆಗೆ ಮೈತ್ರಿ ಸರ್ಕಾರದ ಸಿದ್ಧತೆ, ಶರದ್ ಪವಾರ್ ಉರುಳಿಸುವ ದಾಳದ ಬಗ್ಗೆ ಕುತೂಹಲ

ಅನರ್ಹತೆಗೆ ಸಂಬಂಧಿಸಿದ ಇಂಥ ನೊಟೀಸ್​ಗಳಿಗೆ ಉತ್ತರಿಸಲು ಶಾಸಕರಿಗೆ ಕನಿಷ್ಠ 7 ದಿನಗಳ ಅವಕಾಶ ನೀಡಬೇಕು ಎಂದು ವಿಧಾನಸಭೆಗೆ ಸಂಬಂಧಿಸಿದ ನಿಯಮಗಳು ತಿಳಿಸುತ್ತವೆ. ಡೆಪ್ಯೂಟಿ ಸ್ಪೀಕರ್ ನೀಡಿರುವ ನೊಟೀಸ್ ಈ ನಿಯಮಗಳನ್ನು ಉಲ್ಲಂಘಿಸಿ, ಕೇವಲ 48 ಗಂಟೆಗಳ ಕಾಲಾವಕಾಶ ನೀಡಲಾಗಿದೆ. ಇದು ಶಾಸಕರಿಗೆ ನೀಡಿರುವ ಹಕ್ಕುಗಳ ಉಲ್ಲಂಘನೆ ಎಂದು ಏಕನಾಥ್ ಶಿಂದೆ ಸಲ್ಲಿಸಿರುವ ಅರ್ಜಿ ವಾದಿಸಿದೆ. ಜೂನ್ 26ರಂದು ಜಾರಿ ಮಾಡಿರುವ ನೊಟೀಸ್ ಕೇವಲ ಕಣ್ಣೊರೆಸುವ ತಂತ್ರ. ಇದು ಸಂವಿಧಾನದ 14ನೇ ವಿಧಿಯನ್ನು ಸಾರಾಸಗಟಾಗಿ ಉಲ್ಲಂಘಿಸುತ್ತದೆ. ಶಾಸಕರನ್ನು ಅಕ್ರಮವಾಗಿ ಅನರ್ಹಗೊಳಿಸಬೇಕು ಎನ್ನುವ ಏಕೈಕ ಉದ್ದೇಶವನ್ನು ಇದು ಹೊಂದಿದೆ ಎಂದು ಶಿಂದೆ ತಮ್ಮ ಅರ್ಜಿಯಲ್ಲಿ ಆರೋಪ ಮಾಡಿದ್ದಾರೆ.

ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ಮತ್ತು ಮುಖ್ಯ ಸಚೇತಕರಾಗಿ ಸುನಿಲ್ ಪ್ರಭು ಅವರ ನೇಮಕಾತಿಗೆ ಅನುಮೋದನೆ ನೀಡಲು ಉಪಸಭಾಧ್ಯಕ್ಷ ಝಿರ್​ವಾಲ್ ಅವರಿಗೆ ಅಧಿಕಾರವಿಲ್ಲ ಎಂದು ಅರ್ಜಿಯು ವಾದಿಸಿದೆ. ಶಿವಸೇನೆಯ 38 ಸದಸ್ಯರು ಸರ್ಕಾರಕ್ಕೆ ತಮ್ಮ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ ಮಹಾವಿಕಾಸ ಅಘಾಡಿ ಮೈತ್ರಿ ಸರ್ಕಾರವು ಬಹುಮತ ಕಳೆದುಕೊಂಡಿದೆ. ಆದರೆ ಉಪಸಭಾಧ್ಯಕ್ಷರ ಕಚೇರಿಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿರುವ ಸರ್ಕಾರವು ಹೇಗಾದರೂ ಮಾಡಿ ಅಧಿಕಾರ ಉಳಿಸಿಕೊಳ್ಳಬೇಕು ಎನ್ನುವ ಸ್ವಾರ್ಥ ತೋರಿಸುತ್ತಿದೆ ಎಂದು ಶಿಂದೆ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ತಮ್ಮ ಕುಟುಂಬಗಳಿಗೆ ಅಗತ್ಯ ಭದ್ರತೆ ಒದಗಿಸಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಬೇಕು ಎಂದು 16 ಶಾಸಕರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರವು ತಮಗೆ ಮತ್ತು ತಮ್ಮ ಕುಟುಂಬಗಳಿಗೆ ನೀಡಿದ್ದ ಭದ್ರತೆಯನ್ನು ಅಕ್ರಮವಾಗಿ ಹಿಂಪಡೆದಿದೆ ಎಂದು ಅವರು ದೂರಿದ್ದಾರೆ. ತಮ್ಮ ಕುಟುಂಬಗಳಿಗೆ ನೀಡಿರುವ ಭದ್ರತೆ ಹಿಂಪಡೆದಿರುವುದು ಅಷ್ಟೇ ಅಲ್ಲದೆ, ಎಂವಿಎ ಮೈತ್ರಿ ಸರ್ಕಾರದ ಹಿರಿಯ ನಾಯಕರು ಕಾರ್ಯಕರ್ತರನ್ನು ಪ್ರಚೋದಿಸುವಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಂಕಿಅಂಶದ ಲೆಕ್ಕಾಚಾರ

ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಸದಸ್ಯ ಬಲವು 288. ಈ ಪೈಕಿ ಒಂದು ಸ್ಥಾನವು ತೆರವಾಗಿದೆ. ಹೀಗಾಗಿ ಸದ್ಯ 287 ಸದಸ್ಯರಿದ್ದಾರೆ. ಶಿವಸೇನೆಯ 55 ಸದಸ್ಯರಿದ್ದು, ಎನ್​ಸಿಪಿ 53, ಕಾಂಗ್ರೆಸ್ 44 ಸದಸ್ಯ ಬಲ ಹೊಂದಿದೆ. ಮೂರು ಸಣ್ಣ ಪಕ್ಷಗಳು ಮತ್ತು 9 ಪಕ್ಷೇತರರ ಬೆಂಬಲದೊಂದಿಗೆ ಮಹಾ ವಿಕಾಸ ಅಘಾಡಿ ಮೈತ್ರಿ 166 ಸದಸ್ಯ ಬಲದ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಬಿಜೆಪಿ 106 ಸದಸ್ಯ ಬಲ ಹೊಂದಿದ್ದು, ಎರಡು ಮಿತ್ರ ಪಕ್ಷಗಳು ಮತ್ತು ನಾಲ್ವರ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ 112 ಮಂದಿ ತನ್ನ ಪರ ಇರುವುದಾಗಿ ಹೇಳಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬೇಕಿರುವ ಸದಸ್ಯರ ಸಂಖ್ಯೆ 143. ಸದ್ಯ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಎನ್​ಡಿಎ ಮೈತ್ರಿಕೂಟ 113 ಸಂಖ್ಯಾಬಲ ಹೊಂದಿದೆ. ಇದೀಗ ಏಕನಾಥ ಶಿಂಧೆ ಬಣದಲ್ಲಿ ಪಕ್ಷೇತರ ಶಾಸಕರು ಸೇರಿದಂತೆ 48 ಶಾಸಕರು ಗುರುತಿಸಿಕೊಂಡಿದ್ದಾರೆ. ಇದರಿಂದಾಗಿ ಎನ್​​ಡಿಎ ಮತ್ತು ಏಕನಾಥ ಶಿಂಧೆ‌ ಬಣದ ಶಾಸಕರ ಸಂಖ್ಯೆ 161ಕ್ಕೆ ಹೆಚ್ಚಾಗಿದೆ. ಇದೇ ಹೊತ್ತಿಗೆ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸಂಖ್ಯಾಬಲವು 124ಕ್ಕೆ ಕುಸಿತ ಕಂಡಿದೆ. ವಿಧಾನಸಭೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ಬಹುಮತ ಕಳೆದುಕೊಳ್ಳುವ ಸಾಧ್ಯತೆ ನಿಚ್ಚಳ ಎನಿಸಿದೆ.

Published On - 7:41 am, Mon, 27 June 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ