MVA Crisis: ವಿಶ್ವಾಸಮತ ಯಾಚನೆಗೆ ಮೈತ್ರಿ ಸರ್ಕಾರದ ಸಿದ್ಧತೆ, ಶರದ್ ಪವಾರ್ ಉರುಳಿಸುವ ದಾಳದ ಬಗ್ಗೆ ಕುತೂಹಲ

ಸರ್ಕಾರಕ್ಕೆ ಬಹುಮತ ಇದೆಯೋ, ಇಲ್ಲವೋ ಎನ್ನುವುದು ವಿಧಾನಸಭೆಯಲ್ಲಿ ಸಾಬೀತಾಗಬೇಕು’ ಎಂದು ಎನ್​ಸಿಪಿ ನಾಯಕ ಶರದ್​ ಪವಾರ್ ಸವಾಲು ಹಾಕಿರುವುದು ಇದೀಗ ಚರ್ಚೆಯ ಕೇಂದ್ರವಸ್ತುವಾಗಿದೆ

MVA Crisis: ವಿಶ್ವಾಸಮತ ಯಾಚನೆಗೆ ಮೈತ್ರಿ ಸರ್ಕಾರದ ಸಿದ್ಧತೆ, ಶರದ್ ಪವಾರ್ ಉರುಳಿಸುವ ದಾಳದ ಬಗ್ಗೆ ಕುತೂಹಲ
ಶರದ್ ಪವಾರ್, ಏಕನಾಥ ಶಿಂಧೆ ಮತ್ತು ಉದ್ಧವ್ ಠಾಕ್ರೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 24, 2022 | 10:16 AM

ಮುಂಬೈ: ಮಹಾರಾಷ್ಟ್ರದ ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರವು (Maharashtra Vikas Aghadi – MVA) ಪತನದ ಅಂಚಿಗೆ ಬಂದು ನಿಂತಿದೆ. ಶಿವಸೇನೆ ನಾಯಕ ಏಕನಾಥ ಶಿಂಧೆ ಬಂಡಾಯದ ನಂತರ ಬಹುಮತ ಕಳೆದುಕೊಂಡಿರುವ ಸರ್ಕಾರವು ಇದೀಗ ವಿಶ್ವಾಸಮತ ಸಾಬೀತು ಪಡಿಸಬೇಕಾದ ಅನಿವಾರ್ಯತೆಗೆ ಸಿಲುಕಿದೆ. ‘ಸರ್ಕಾರಕ್ಕೆ ಬಹುಮತ ಇದೆಯೋ, ಇಲ್ಲವೋ ಎನ್ನುವುದು ವಿಧಾನಸಭೆಯಲ್ಲಿ ಸಾಬೀತಾಗಬೇಕು’ ಎಂದು ಎನ್​ಸಿಪಿ (Nationalist Congress Party – NCP) ನಾಯಕ ಶರದ್​ ಪವಾರ್ ಸವಾಲು ಹಾಕಿರುವುದು ಇದೀಗ ಚರ್ಚೆಯ ಕೇಂದ್ರವಸ್ತುವಾಗಿದೆ. ಶಿವಸೇನೆಯ ಹಲವು ಶಾಸಕರು ಇದೀಗ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದು, ಬಿಜೆಪಿಯೊಂದಿಗೆ (Bharatiya Janata Party – BJP) ಮೈತ್ರಿ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಶಿವಸೇನೆಯ ಉದ್ಧವ್ ಠಾಕ್ರೆ ಬೆಂಬಲಿಗರ ಸಭೆ ಕರೆದಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡದಿದ್ದರೆ ವಿಶ್ವಾಸಮತ ಯಾಚಿಸಿ, ಬಹುಮತ ಸಾಬೀತುಪಡಿಸುವುದು ಅನಿವಾರ್ಯವಾಗುತ್ತದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ. ವಿಶ್ವಾಸಮತ ಯಾಚನೆಗೆ ಏಕನಾಥ ಶಿಂಧೆ ನೇತೃತ್ವದ ಬಂಡುಕೋರರ ಗುಂಪು ಮತ್ತು ಎನ್​ಸಿಪಿ-ಕಾಂಗ್ರೆಸ್-ಶಿವಸೇನೆಯ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಸಿದ್ಧತೆ ಆರಂಭಿಸಿದೆ.

ಮಹಾರಾಷ್ಟ್ರದಲ್ಲಿ ವಿಶ್ವಾಸಮತ ಯಾಚನೆಯ ವಿಶೇಷ ಅಧಿವೇಶನ ಕೊನೆಯ ಬಾರಿ ನಡೆದದ್ದು 1978ರಲ್ಲಿ. ಅಂದು ಶರದ್ ಪವಾರ್ ಅವರು ಕಾಂಗ್ರೆಸ್​ನಿಂದ ಸಿಡಿದು ಹೊರಬಂದು ಜನತಾ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದರು. ಸದನದಲ್ಲಿ ಬಹುಮತ ಸಾಬೀತುಪಡಿಸುವುದರೊಂದಿಗೆ ರಾಜ್ಯದ ಕಿರಿಯ ಮುಖ್ಯಮಂತ್ರಿಯಾಗಿ ಅಧಿಕಾರ ಉಳಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ವಿಶ್ವಾಸಮತ ಯಾಚನೆಯ ಪರಿಸ್ಥಿತಿಗೆ ಮಹಾರಾಷ್ಟ್ರ ವಿಧಾನಸಭೆ ಬಂದಿದ್ದು, ಶರದ್ ಪವಾರ್ ಅವರೇ ಮುಖ್ಯಪಾತ್ರ ನಿರ್ವಹಿಸುತ್ತಿದ್ದಾರೆ. ತಮ್ಮ ಪಕ್ಷದ ಶಾಸಕರು ಅಧಿವೇಶನಕ್ಕೆ ಸಿದ್ಧರಾಗಿರಬೇಕು ಎಂದು ಗುರುವಾರವೇ (ಜೂನ್ 24) ಶರದ್ ಪವಾರ್ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ
Image
Siddaramaiah: ಭ್ರಷ್ಟಾಚಾರದ ಹಣ ಬಳಸಿ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ: ಸಿದ್ದರಾಮಯ್ಯ ಟೀಕೆ
Image
MVA Crisis: ಮಹಾರಾಷ್ಟ್ರ ಸರ್ಕಾರ ಪತನ ಸನ್ನಿಹಿತ, ಏಕನಾಥ ಶಿಂಧೆ ಬಣಕ್ಕೆ ಶಿವಸೇನೆಯ 42 ಶಾಸಕರ ಬೆಂಬಲ
Image
MVA Crisis: ಸಿಎಂ ಅಧಿಕೃತ ನಿವಾಸ ತೊರೆದ ಉದ್ಧವ್ ಠಾಕ್ರೆ, ಶಿವಸೈನಿಕರಿಂದ ಅಭೂತಪೂರ್ವ ಬೆಂಬಲ
Image
MVA crisis ಎನ್​​ಸಿಪಿ, ಕಾಂಗ್ರೆಸ್ ಜತೆಗಿನ ಅಸಹಜ ಮೈತ್ರಿಯಿಂದ ಹೊರಬನ್ನಿ ಎಂದು ಶಿವಸೇನಾಗೆ ಶಿಂಧೆ ಸಲಹೆ; ಮಾತೋಶ್ರೀಗೆ ಉದ್ಧವ್ ಠಾಕ್ರೆ ಶಿಫ್ಟ್

ಉದ್ಧವ್ ಠಾಕ್ರೆ ರಾಜೀನಾಮೆ ನೀಡಬಹುದು ಎಂದು ಕಾಯುತ್ತಿರುವ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಾಸಕರು, ಒಂದು ವೇಳೆ ಉದ್ಧವ್ ರಾಜೀನಾಮೆ ನೀಡದಿದ್ದರೆ ರಾಜ್ಯಪಾಲರಿಗೆ ಪತ್ರಬರೆದು, ಅಘಾಡಿ ಮೈತ್ರಿಕೂಟದ ಬಹುಮತವನ್ನು ಪ್ರಶ್ನಿಸಬಹುದು. ಆಗ ರಾಜ್ಯಪಾಲರು ಮುಖ್ಯಮಂತ್ರಿಗೆ ಸದನದಲ್ಲಿ ಬಹುಮಾತ ಸಾಬೀತುಪಡಿಸಲು ಸೂಚಿಸುತ್ತಾರೆ. ಸಭಾಪತಿ ಅಥವಾ ಅವರ ಅನುಪಸ್ಥಿತಿಯಲ್ಲಿ ಉಪ-ಸಭಾಪತಿ ವಿಶ್ವಾಸಮತ ಯಾಚನೆ ಅಧಿವೇಶನವನ್ನು ನಿರ್ವಹಿಸುತ್ತಾರೆ.

2019ರಲ್ಲಿ ಸುಪ್ರೀಂಕೋರ್ಟ್​ ನೀಡಿದ್ದ ತೀರ್ಪಿನ ಆಧಾರದ ಮೇಲೆಯೇ ಈ ಬಾರಿಯೂ ವಿಶ್ವಾಸಮತ ಯಾಚನೆ ಅಧಿವೇಶನಕ್ಕೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ. ಎನ್​ಸಿಪಿಯಿಂದ ಬಂಡಾಯವೆದ್ದಿದ್ದ ಶಾಸಕ ಅಜಿತ್ ಪವಾರ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ತರಾತುರಿಯಲ್ಲಿ ಸರ್ಕಾರ ರಚಿಸಿತ್ತು. ವಿಶ್ವಾಸಮತ ಯಾಚನೆಗೆ ಹೆಚ್ಚು ಸಮಯಾವಕಾಶ ನೀಡಬೇಕು ಎನ್ನುವ ಬಿಜೆಪಿಯ ಮನವಿಯನ್ನು ತಳ್ಳಿಹಾಕಿದ್ದ ಸುಪ್ರೀಂಕೋರ್ಟ್ ತಕ್ಷಣ ಅಧಿವೇಶನ ನಡೆಸಲು ಸೂಚಿಸಿತ್ತು. ಇದೇ ಆದೇಶದ ಅನ್ವಯ ಈಗಲೂ ನಿರ್ಧಾರಗಳನ್ನು ತೆಗೆದುಕೊಂಡರೆ ಶಿವಸೇನೆಗೆ ತನ್ನ ಬಂಡುಕೋರ ಶಾಸಕರ ಮನವೊಲಿಸಲು ಹೆಚ್ಚು ಸಮಯ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಬಿಜೆಪಿ ಸರ್ಕಾರ ರಚನೆ ಸಾಧ್ಯತೆ

ಸದ್ಯದ ಪರಿಸ್ಥಿತಿಯಲ್ಲಿ ಏಕನಾಥ ಶಿಂಧೆ ಬಣಕ್ಕೇ ಶಿವಸೇನೆಯ ಚಿಹ್ನೆ ಸಿಗುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿದೆ. ಶಿವಸೇನೆಯ 55 ಶಾಸಕರ ಪೈಕಿ 42 ಮಂದಿ ಪ್ರಸ್ತುತ ಏಕನಾಥ ಶಿಂಧೆ ಬಣದಲ್ಲಿದ್ದಾರೆ. ಅಂಕಿಸಂಖ್ಯೆಗಳ ಲೆಕ್ಕಾಚಾರದಲ್ಲಿ ಏಕನಾಥ ಶಿಂಧೆ ಬಣದ ಕೈ ಮೇಲಾಗಿದೆ. ಮಹಾರಾಷ್ಟ್ರದ ವಿಧಾನಸಭೆಯ 106 ಬಿಜೆಪಿ ಶಾಸಕರ ಜೊತೆಗೆ ಏಕನಾಥ ಶಿಂಧೆ ಬಣದ 42 ಮಂದಿ ಬೆಂಬಲ ಸೇರಿದರೇ 148ಕ್ಕೆ ಸಂಖ್ಯಾಬಲ ಹೆಚ್ಚಾಗುತ್ತದೆ. ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 145 ಸದಸ್ಯ ಬಲ ಸಾಕು. ಹೀಗಾಗಿ ಶಿವಸೇನೆಯ ಬಂಡಾಯದ ಲಾಭ ಪಡೆದುಕೊಂಡ ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆ ಕಂಡು ಬರುತ್ತಿದೆ.

ಮಹಾರಾಷ್ಟ್ರದ ವಿಧಾನಸಭೆಯ ಓರ್ವ ಶಾಸಕರು ಮೃತಪಟ್ಟಿದ್ದಾರೆ. ಎನ್​ಸಿಪಿಯ ಅನಿಲ್ ದೇಶಮುಖ್ ಮತ್ತು ನವಾಬ್ ಮಲ್ಲಿಕ್ ಜೈಲುಪಾಲಾಗಿದ್ದಾರೆ. ಹೀಗಾಗಿ ವಿಶ್ವಾಸಮತ ಯಾಚನೆ ವೇಳೆ ಮತಚಲಾಯಿಸಲು ಇವರಿಬ್ಬರಿಗೂ ಅವಕಾಶ ಸಿಗುವುದಿಲ್ಲ. ಈ ಹಿಂದೆ ರಾಜ್ಯಸಭಾ ಚುನಾವಣೆ, ವಿಧಾನಪರಿಷತ್ ಚುನಾವಣೆ ವೇಳೆಯೂ ಇಬ್ಬರಿಗೆ ಮತ ಚಲಾಯಿಸಲು ಕೋರ್ಟ್ ಅವಕಾಶ ಕೊಟ್ಟಿರಲಿಲ್ಲ. ಹೀಗಾಗಿ ವಿಧಾನಪರಿಷತ್ ವಿಶ್ವಾಸಮತ ಯಾಚನೆ ವೇಳೆ ಒಟ್ಟು ಮೂರು ಶಾಸಕರ ಮತಗಳು ಪರಿಗಣನೆಗೆ ಬರುವುದಿಲ್ಲ. ಹೀಗಾಗಿ ಮಹಾರಾಷ್ಟ್ರದ ವಿಧಾನ ಸಭೆಯ ಒಟ್ಟು ಸಂಖ್ಯಾಬಲ 288ರಿಂದ 285ಕ್ಕೆ ಕುಸಿಯಲಿದೆ.

ಇದಕ್ಕೆ ಅನುಗುಣವಾಗಿ ಸರ್ಕಾರ ರಚಿಸಲು ಬೇಕಿರುವ ಸಂಖ್ಯೆ 143. ಸದ್ಯ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಎನ್​ಡಿಎ ಮೈತ್ರಿಕೂಟ 113 ಸಂಖ್ಯಾಬಲ ಹೊಂದಿದೆ. ಇದೀಗ ಏಕನಾಥ ಶಿಂಧೆ ಬಣದಲ್ಲಿ ಪಕ್ಷೇತರ ಶಾಸಕರು ಸೇರಿದಂತೆ 48 ಶಾಸಕರು ಗುರುತಿಸಿಕೊಂಡಿದ್ದಾರೆ. ಇದರಿಂದಾಗಿ ಎನ್​​ಡಿಎ ಮತ್ತು ಏಕನಾಥ ಶಿಂಧೆ‌ ಬಣದ ಶಾಸಕರ ಸಂಖ್ಯೆ 161ಕ್ಕೆ ಹೆಚ್ಚಾಗಿದೆ. ಇದೇ ಹೊತ್ತಿಗೆ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸಂಖ್ಯಾಬಲವು 124ಕ್ಕೆ ಕುಸಿತ ಕಂಡಿದೆ. ವಿಧಾನಸಭೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ಬಹುಮತ ಕಳೆದುಕೊಳ್ಳುವ ಸಾಧ್ಯತೆ ನಿಚ್ಚಳ ಎನಿಸಿದೆ.

Published On - 7:30 am, Fri, 24 June 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್