Maharashtra Politics: ರೆಸಾರ್ಟ್​ ರಾಜಕೀಯದಿಂದ ಉದ್ಧವ್ ಠಾಕ್ರೆ ರಾಜೀನಾಮೆವರೆಗೆ; ಮಹಾರಾಷ್ಟ್ರ ರಾಜಕಾರಣದ ಮುಖ್ಯಾಂಶ ಇಲ್ಲಿದೆ

ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ ಪ್ರಮುಖ ಘಟ್ಟಕ್ಕೆ ಬಂದು ನಿಂತಿದೆ. ರೆಸಾರ್ಟ್​ ಸೇರಿದ್ದ ಬಂಡಾಯ ಶಾಸಕರ ಮನವೊಲಿಸಲು ವಿಫಲರಾಗಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ರಾಜಕಾರಣದಲ್ಲಿ ಏನೆಲ್ಲ ಆಯಿತು ಎಂಬ ಮುಖ್ಯಾಂಶಗಳು ಇಲ್ಲಿವೆ.

Maharashtra Politics: ರೆಸಾರ್ಟ್​ ರಾಜಕೀಯದಿಂದ ಉದ್ಧವ್ ಠಾಕ್ರೆ ರಾಜೀನಾಮೆವರೆಗೆ; ಮಹಾರಾಷ್ಟ್ರ ರಾಜಕಾರಣದ ಮುಖ್ಯಾಂಶ ಇಲ್ಲಿದೆ
ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆImage Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 30, 2022 | 1:13 PM

ಒಂದು ವಾರದ ರಾಜಕೀಯ ಪ್ರಕ್ಷುಬ್ಧತೆಯ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Maharashtra CM Uddhav Thackeray) ಬುಧವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಇಂದು ಕರೆದಿದ್ದ ಮಹಜರು ಪರೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದ ಬೆನ್ನಲ್ಲೇ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದು, ಬಂಡಾಯ ಶಾಸಕರ ಜೊತೆಗೂಡಿ ಬಿಜೆಪಿ ಸರ್ಕಾರ ರಚಿಸುವ ತಯಾರಿಯಲ್ಲಿದೆ. ನಿನ್ನೆ ರಾತ್ರಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಉದ್ಧವ್ ಠಾಕ್ರೆ, ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿದಿದ್ದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಾನು ಏನೇ ಮಾಡಿದರೂ ಮರಾಠಿಗರು ಮತ್ತು ಹಿಂದುತ್ವಕ್ಕಾಗಿ ಮಾಡಿದ್ದೇನೆ. ಇಂದು ಎಲ್ಲರ ಸಮ್ಮುಖದಲ್ಲಿ ರಾಜ್ಯದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು 15 ನಿಮಿಷಗಳ ಭಾಷಣದಲ್ಲಿ ತಿಳಿಸಿದ್ದರು. ಮಹಾರಾಷ್ಟ್ರ ರಾಜಕಾರಣದಲ್ಲಿ ಕಳೆದ 1 ವಾರದಿಂದ ಏನೆಲ್ಲ ಆಯಿತು ಎಂಬ ಮುಖ್ಯಾಂಶಗಳು ಇಲ್ಲಿವೆ.

  1. ಜೂನ್ 21ರಂದು ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಅಡ್ಡ ಮತದಾನದ ಅನುಮಾನದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಪ್ರಾರಂಭವಾಯಿತು. ಇದಾದ ಬಳಿಕ ಉದ್ಧವ್ ಠಾಕ್ರೆ ಶಿವಸೇನಾ ಶಾಸಕರ ತುರ್ತು ಸಭೆಗೆ ಕರೆ ನೀಡಿದರು. ಸಭೆಯಲ್ಲಿ ಶಿವಸೇನಾ ನಾಯಕ ಏಕನಾಥ್ ಶಿಂಧೆ ಮತ್ತು 11 ಶಾಸಕರು ಹಾಜರಾಗಲಿಲ್ಲ. ನಾಪತ್ತೆಯಾದ ಶಿವಸೇನಾ ನಾಯಕರು ಸೂರತ್, ಗುವಾಹಟಿ ಮತ್ತು ಈಗ ಗೋವಾದಲ್ಲಿ ಐಷಾರಾಮಿ ಹೋಟೆಲ್‌ಗಳಿಗೆ ತೆರಳಿ, ರೆಸಾರ್ಟ್​ ರಾಜಕಾರಣ ಆರಂಭಿಸಿದರು.
  2. ಅದರ ಮರುದಿನ 17 ನಿಮಿಷಗಳ ಸುದೀರ್ಘ ವಿಡಿಯೋ ಸಂದೇಶದಲ್ಲಿ ಉದ್ಧವ್ ಠಾಕ್ರೆ ತಮ್ಮ ಶಿವಸೇನೆಯ ಒಬ್ಬ ನಾಯಕ ಬಯಸಿದರೂ ತಾವು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಹೇಳಿದರು. ನಾನು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಆದರೆ ನಮ್ಮ ಬಂಡಾಯ ಶಾಸಕರಲ್ಲಿ ಒಬ್ಬರು ಮುಖ್ಯಮಂತ್ರಿಯಾಗಬೇಕು. ಮುಖ್ಯಮಂತ್ರಿ ಶಿವಸೇನೆಯವರೇ ಆಗಬೇಕು ಎಂದು ಹೇಳಿದ್ದರು.
  3. ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರ ಬಣಕ್ಕೆ ‘ಶಿವಸೇನಾ ಬಾಳಾಸಾಹೇಬ್’ ಎಂದು ಹೆಸರಿಡಲಾಯಿತು. ಇದಕ್ಕೂ ವಿರೋಧ ವ್ಯಕ್ತವಾಯಿತು. ಏಕನಾಥ್ ಶಿಂಧೆ ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವು ಬಹುಮತ ಹೊಂದಿಲ್ಲ ಎಂದು ಆರೋಪಿಸಿ ವಿಶ್ವಾಸಮತ ಯಾಚನೆಗೆ ಒತ್ತಾಯಿಸಿದರು. ಬಂಡಾಯ ಶಾಸಕರು ಉದ್ಧವ್ ಠಾಕ್ರೆ ರಾಜೀನಾಮೆಗೆ ಒತ್ತಾಯಿಸಿದರು.
  4. ಬಳಿಕ, NCP ಮುಖ್ಯಸ್ಥ ಶರದ್ ಪವಾರ್ ಎಲ್ಲಾ ಮೂರು MVA ಸಮ್ಮಿಶ್ರ ಪಾಲುದಾರರೊಂದಿಗೆ ಸಭೆಯನ್ನು ಕರೆದರು. ಬಂಡಾಯ ಶಾಸಕರಿಂದ ಸರ್ಕಾರಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದರು.
  5. ತಮ್ಮ ಪಕ್ಷದ ನಿಯಂತ್ರಣವನ್ನು ಮರಳಿ ಪಡೆಯುವ ಪ್ರಯತ್ನದಲ್ಲಿ, ಉದ್ಧವ್ ಠಾಕ್ರೆ ಶಿವಸೇನೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅದು ಪಕ್ಷಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಿತು. ಬಾಳಾಸಾಹೇಬ್ ಠಾಕ್ರೆ ಅವರ ಹೆಸರನ್ನು ಶಿವಸೇನೆ ಹೊರತುಪಡಿಸಿ ಬೇರೆಯವರಿಗೆ ಬಳಸಲು ಅವಕಾಶ ನೀಡಬಾರದು ಮತ್ತು ಬಂಡಾಯ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸೇರಿದಂತೆ ಆರು ನಿರ್ಣಯಗಳನ್ನು ಸಭೆಯಲ್ಲಿ ಅಂಗೀಕರಿಸಲಾಯಿತು.
  6. ಶಿವಸೇನಾ ಬಂಡಾಯ ಶಾಸಕರು ಸುದ್ದಿಗೋಷ್ಠಿ ನಡೆಸಿ, ತಮ್ಮ ನಿವಾಸಗಳು ಮತ್ತು ಕಚೇರಿಗಳಿಗೆ ಭದ್ರತೆಯನ್ನು ಒದಗಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕೇಳಿಕೊಂಡರು. ಕೆಲವು ಬಂಡಾಯ ಶಾಸಕರ ಒಡೆತನದ ಆಸ್ತಿಗಳು ಮತ್ತು ಕಚೇರಿಗಳ ವಿರುದ್ಧ ಹಿಂಸಾಚಾರ ಕೂಡ ನಡೆಯಿತು.
  7. ಹೆಚ್ಚುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MHA) 15 ಬಂಡಾಯ ಶಾಸಕರಿಗೆ ಕೇಂದ್ರ ಭದ್ರತೆಯನ್ನು ನೀಡಿತು. ಸೋಮವಾರ, ಮಹಾರಾಷ್ಟ್ರ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ವಿಧಾನಸಭೆಯಿಂದ ರೆಬೆಲ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಸೋಮವಾರ ಸಂಜೆಯೊಳಗೆ ಉತ್ತರಿಸುವಂತೆ ಬಂಡಾಯ ಶಾಸಕರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿತು. ಸುಪ್ರೀಂ ಕೋರ್ಟ್ ಜುಲೈ 12ರವರೆಗೆ ತಮ್ಮ ಉತ್ತರಗಳನ್ನು ಕಳುಹಿಸಲು ಸಮಯ ನೀಡಿದೆ.
  8. ಬುಧವಾರ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಗುರುವಾರ ಸದನದಲ್ಲಿ ಬಹುಮತವನ್ನು ಸಾಬೀತುಪಡಿಸುವಂತೆ ಸೂಚಿಸಿದರು. ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲು ಸೂಚಿಸಿದ್ದರು.
  9. ಆದರೆ, ಬಹುಮತಕ್ಕೆ ಬೇಕಾದ ಬೆಂಬಲವಿಲ್ಲ ಎಂಬ ಕಾರಣಕ್ಕೆ ಬುಧವಾರ ಸಂಜೆ ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದರು. ಅದಾದ ಕೆಲವೇ ನಿಮಿಷಗಳಲ್ಲಿ ಶಿವಸೇನೆಯ ಬಂಡಾಯ ಬಣ ಭಾರೀ ಭದ್ರತೆಯ ನಡುವೆ ಗೋವಾಕ್ಕೆ ಆಗಮಿಸಿತು.
  10. ನಾಳೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಬಂಡಾಯ ಶಾಸಕರ ಬಣದ ನಾಯಕ ಏಕನಾಥ್ ಶಿಂಧೆಗೆ ಉಪಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಬಿಜೆಪಿಯ ಪ್ರಮುಖ ಗುಂಪು ಶಿವಸೇನೆಯ ಬಂಡಾಯ ಶಾಸಕರ ಬಣದೊಂದಿಗೆ ಮಧ್ಯಾಹ್ನ 1.30ರ ಸುಮಾರಿಗೆ ಸಭೆ ಸೇರಲಿದೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ನಾಳೆ ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್