Maharashtra Politics: ಗೋವಾದಿಂದ ಬಂಡಾಯ ಶಾಸಕರನ್ನು ಕರೆತರಲು ತೆರಳಿದ ಸಿಎಂ ಏಕನಾಥ್ ಶಿಂಧೆ

ಜುಲೈ 2ರಿಂದ ಮಹಾರಾಷ್ಟ್ರ ವಿಧಾನಸಭೆಯ 2 ದಿನಗಳ ವಿಶೇಷ ಅಧಿವೇಶನ ನಡೆಯಲಿದೆ. ಈ ಮಧ್ಯೆ, ಬಂಡಾಯ ಶಾಸಕರು ಬೀಡುಬಿಟ್ಟಿರುವ ಗೋವಾಕ್ಕೆ ತೆರಳಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ವಾಪಾಸ್ ಕರೆತರಲಿದ್ದಾರೆ.

Maharashtra Politics: ಗೋವಾದಿಂದ ಬಂಡಾಯ ಶಾಸಕರನ್ನು ಕರೆತರಲು ತೆರಳಿದ ಸಿಎಂ ಏಕನಾಥ್ ಶಿಂಧೆ
ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವಿಸ್
Image Credit source: NDTV
TV9kannada Web Team

| Edited By: Sushma Chakre

Jul 01, 2022 | 10:17 AM

ಮುಂಬೈ: ಯಾರೂ ಊಹಿಸದ ರೀತಿಯಲ್ಲಿ ಮಹಾರಾಷ್ಟ್ರದಲ್ಲಿ (Maharashtra) ಅಚ್ಚರಿಯ ಬೆಳವಣಿಗೆ ನಡೆದಿದ್ದು, ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ (Eknath Shinde) ಗುರುವಾರ ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಏಕನಾಥ್ ಶಿಂಧೆ ಅವರ ಬಣವು 31 ತಿಂಗಳ ಉದ್ಧವ್ ಠಾಕ್ರೆ ಸರ್ಕಾರವನ್ನು ಪದಚ್ಯುತಗೊಳಿಸಲು ಬಿಜೆಪಿಯೊಂದಿಗೆ ಕೈಜೋಡಿಸಿತು. ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ಬಳಿಕ ಏನೇನು ಬೆಳವಣಿಗೆಗಳು ನಡೆಯಿತು ಎಂಬ 10 ಮುಖ್ಯಾಂಶಗಳು ಇಲ್ಲಿವೆ.

ಇದನ್ನೂ ಓದಿ

  1. ಜುಲೈ 2ರಿಂದ ಮಹಾರಾಷ್ಟ್ರ ವಿಧಾನಸಭೆಯ 2 ದಿನಗಳ ವಿಶೇಷ ಅಧಿವೇಶನ ನಡೆಯಲಿದೆ. ಈ ಮಧ್ಯೆ, ಬಂಡಾಯ ಶಾಸಕರು ಬೀಡುಬಿಟ್ಟಿರುವ ಗೋವಾಕ್ಕೆ ತೆರಳಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ವಾಪಾಸ್ ಕರೆತರಲಿದ್ದಾರೆ.
  2. ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಹುದ್ದೆಗೆ ಏರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ತಾವು ಈ ಸರ್ಕಾರದಿಂದ ಹೊರಗುಳಿಯುವುದಾಗಿ ಘೋಷಿಸಿದ್ದರು. ಅದಾದ ಕೇವಲ ಮೂರು ಗಂಟೆಗಳಲ್ಲಿ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
  3. ದೇವೇಂದ್ರ ಫಡ್ನವಿಸ್ ಅವರು ಸಿಎಂ ಸ್ಥಾನವನ್ನು ಬಿಟ್ಟುಕೊಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಈ ನಿರ್ಧಾರವು ಮಹಾರಾಷ್ಟ್ರದ ಬಗ್ಗೆ ಅವರ ನಿಜವಾದ ಸಮರ್ಪಣೆ ಮತ್ತು ಸೇವಾ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಲ್ಲದೆ, ಏಕನಾಥ್ ಶಿಂಧೆ ಅವರಿಗೆ ಬಿಜೆಪಿಯ ಸಂಪೂರ್ಣ ಬೆಂಬಲ ಸಿಗಲಿದೆ ಎಂದು ಘೋಷಿಸಿದ್ದಾರೆ.
  4. ಏಕನಾಥ್ ಶಿಂಧೆ ಅವರು ಪ್ರಧಾನಿ ನರೇಂದ್ರ ಮೋದಿ, ದೇವೇಂದ್ರ ಫಡ್ನವಿಸ್ ಮತ್ತು ಇತರ ಬಿಜೆಪಿ ನಾಯಕರಿಗೆ ಧನ್ಯವಾದ ಅರ್ಪಿಸಿದರು. ಇದು ಬಿಜೆಪಿಯ ದೊಡ್ಡತನ. ಅವರು ದೊಡ್ಡ ಜನಾದೇಶವನ್ನು ಹೊಂದಿದ್ದರೂ ನನ್ನನ್ನು ಮುಖ್ಯಮಂತ್ರಿ ಮಾಡಿದರು. ಈ ರೀತಿ ಬೇರೆ ಯಾರು ಮಾಡುತ್ತಾರೆ? ಎಂದು ಅವರು ಹೇಳಿದ್ದರು.
  5. ದೇವೇಂದ್ರ ಫಡ್ನವೀಸ್ ಸಂತೋಷದಿಂದ ಉಪಮುಖ್ಯಮಂತ್ರಿ ಸ್ಥಾನವನ್ನು ಸ್ವೀಕರಿಸಲಿಲ್ಲ ಎಂದು ಉದ್ಧವ್ ಠಾಕ್ರೆ ಸರ್ಕಾರದ ಭಾಗವಾಗಿದ್ದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿರುವ ಹಿರಿಯ ರಾಜಕಾರಣಿ ಶರದ್ ಪವಾರ್ ಹೇಳಿದ್ದಾರೆ.
  6. 31 ತಿಂಗಳ ಮಹಾ ವಿಕಾಸ್ ಅಘಾಡಿ (MVA) ಸರ್ಕಾರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ 24 ಗಂಟೆಗಳ ನಂತರ 58 ವರ್ಷದ ಏಕನಾಥ್ ಶಿಂಧೆ ಅವರು ಮುಂಬೈನ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
  7. ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಬೇಕು ಎಂಬ ಶಿವಸೇನೆಯ ಶಾಸಕರ ಬೇಡಿಕೆಯನ್ನು ಉದ್ಧವ್ ಠಾಕ್ರೆ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಏಕನಾಥ್ ಶಿಂಧೆ 39 ಶಿವಸೇನೆ ಶಾಸಕರೊಂದಿಗೆ ಬಂಡಾಯ ಎದ್ದಿದ್ದರು. ಅದಾದ ಬಳಿಕ ಬುಧವಾರ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು.
  8. ಶಿವಸೇನೆಯು ಬಾಳಾಸಾಹೇಬರು ತಮ್ಮ ಜೀವನದುದ್ದಕ್ಕೂ ಯಾರ ವಿರುದ್ಧ ಪ್ರತಿಭಟಿಸುತ್ತಾರೋ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಶಿವಸೇನೆ ನಿರ್ಧರಿಸಿದೆ. ಶಿವಸೇನೆಯು ಜನರ ಆದೇಶವನ್ನು ಅವಮಾನಿಸಿದೆ‘ ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದರು.
  9. ನಿಜವಾದ ಶಿವಸೇನೆ ಯಾರು ಎಂಬುದು ಪ್ರಶ್ನೆಯಲ್ಲ, ನಮಗೆ ಕಾನೂನು ಬಹುಮತವಿದೆ. ಹೀಗಾಗಿ ನಮ್ಮದು ಶಾಸಕಾಂಗ ಪಕ್ಷ ಎಂದು ಏಕನಾಥ್ ಶಿಂಧೆ ಹೇಳಿದ್ದರು.
  10. ಉದ್ಧವ್ ಠಾಕ್ರೆ ಸರ್ಕಾರದಲ್ಲಿ ಹಿರಿಯ ಸಚಿವರಾಗಿದ್ದ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ರಾಜ್ಯದ ಅಭಿವೃದ್ಧಿಗಾಗಿ 50 ಶಾಸಕರ ಬೆಂಬಲದೊಂದಿಗೆ ನಿರ್ಧಾರ ತೆಗೆದುಕೊಂಡಿದ್ದರು. ಇದು ಯಾವುದೇ ವೈಯಕ್ತಿಕ ಹಿತಾಸಕ್ತಿಯನ್ನು ಒಳಗೊಂಡಿಲ್ಲ ಎಂದು ಹೇಳಿದ್ದರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada