ಏಕನಾಥ್ ಶಿಂಧೆ ಬಣದ 40, ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ಅನರ್ಹತೆ ಅರ್ಜಿ ಸಂಬಂಧ ನೋಟಿಸ್

ಕಳೆದ ವರ್ಷ ಶಿವಸೇನಾದ ಉದ್ಧವ್ ಠಾಕ್ರೆ ಬಣದಿಂದ ಟಿಕೆಟ್‌ನಲ್ಲಿ ಅಂಧೇರಿ (ಪೂರ್ವ) ಉಪಚುನಾವಣೆಯಲ್ಲಿ ಗೆದ್ದಿದ್ದ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಮತ್ತು ರುತುಜಾ ಲಟ್ಕೆ ಅವರಿಗೆ ನೋಟಿಸ್ ನೀಡಲಾಗಿಲ್ಲ.

ಏಕನಾಥ್ ಶಿಂಧೆ ಬಣದ 40, ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ಅನರ್ಹತೆ ಅರ್ಜಿ ಸಂಬಂಧ ನೋಟಿಸ್
ಉದ್ದವ್ ಠಾಕ್ರೆ- ಏಕನಾಥ್ ಶಿಂಧೆ
Follow us
|

Updated on:Jul 08, 2023 | 7:30 PM

ಮಹಾರಾಷ್ಟ್ರ (Maharashtra) ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ (Rahul Narwekar) ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ  (Eknath Shinde)ನೇತೃತ್ವದ ಶಿವಸೇನಾ (Shiv sena) ಬಣದ 40 ಶಾಸಕರು ಮತ್ತು ಉದ್ಧವ್ ಠಾಕ್ರೆ (Uddhav Thackeray) ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ. ಶಾಸಕರಿಗೆ ಪ್ರತಿಕ್ರಿಯೆ ನೀಡಲು ಏಳು ದಿನಗಳ ಕಾಲಾವಕಾಶ ನೀಡಲಾಗಿದ್ದು, ಅನರ್ಹತೆಯ ವಿರುದ್ಧದ ಕ್ರಮವನ್ನು ತಪ್ಪಿಸಲು ಅಗತ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ಸಲ್ಲಿಸಬೇಕು. ಚುನಾವಣಾ ಆಯೋಗದಿಂದ (EC) ಶಿವಸೇನಾಸಂವಿಧಾನದ ಪ್ರತಿಯನ್ನು ಸ್ವೀಕರಿಸಿದ್ದೇನೆ ಎಂದು ನಾರ್ವೇಕರ್ ಹೇಳಿದ ನಂತರ ಈ ಬೆಳವಣಿಗೆ ನಡೆದಿದೆ. ಏಕನಾಥ್ ಶಿಂಧೆ ಸೇರಿದಂತೆ  ಶಿವಸೇನಾದ 16 ಶಾಸಕರ ಅನರ್ಹತೆ ಅರ್ಜಿಗಳ ವಿಚಾರಣೆಯು ಶೀಘ್ರದಲ್ಲೇ ನಡೆಯಲಿದೆ.

ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ಇಬ್ಬರನ್ನೂ ಸ್ಪೀಕರ್ ಅವರು ಸಾಕ್ಷ್ಯಾಧಾರಗಳೊಂದಿಗೆ ತಮ್ಮ ಅಭಿಪ್ರಾಯಗಳನ್ನು ನೀಡಲು ಕರೆಯುವ ಸಾಧ್ಯತೆ ಇದೆ. ಏತನ್ಮಧ್ಯೆ, ಕಳೆದ ವರ್ಷ ಶಿವಸೇನಾದ ಉದ್ಧವ್ ಠಾಕ್ರೆ ಬಣದಿಂದ ಟಿಕೆಟ್‌ನಲ್ಲಿ ಅಂಧೇರಿ (ಪೂರ್ವ) ಉಪಚುನಾವಣೆಯಲ್ಲಿ ಗೆದ್ದಿದ್ದ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಮತ್ತು ರುತುಜಾ ಲಟ್ಕೆ ಅವರಿಗೆ ನೋಟಿಸ್ ನೀಡಲಾಗಿಲ್ಲ.

ಇದಕ್ಕೂ ಮುನ್ನ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಶಾಸಕ ಸುನೀಲ್ ಪ್ರಭು ಅವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಏಕನಾಥ್ ಶಿಂಧೆ ಸೇರಿದಂತೆ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ತೆಲಂಗಾಣದ ವಾರಂಗಲ್​​​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ; ಚಿತ್ರಗಳಲ್ಲಿ ನೋಡಿ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಹೊತ್ತಿರುವ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನಾದ 16 ಶಾಸಕರ ಭವಿಷ್ಯವನ್ನು ನಿರ್ಧರಿಸುವಂತೆ ಮೇ 11ರಂದು ಸುಪ್ರೀಂಕೋರ್ಟ್ ಸ್ಪೀಕರ್‌ಗೆ ಸೂಚಿಸಿತ್ತು.ಕಳೆದ ವರ್ಷ ಜೂನ್‌ನಲ್ಲಿ, ಏಕನಾಥ್ ಶಿಂಧೆ ಮತ್ತು ಇತರ 15 ಶಾಸಕರು ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವನ್ನು ನಡೆಸಿದರು, ಇದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು. ಇದಾದ ನಂತರ ಶಿಂಧೆ ಮತ್ತು ಬಂಡಾಯ ಶಾಸಕರು ಹೊಸ ಸರ್ಕಾರ ರಚಿಸಲು ಬಿಜೆಪಿ ಜೊತೆ ಕೈಜೋಡಿಸಿದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Sat, 8 July 23

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು