ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ ಆಯ್ಕೆಗೆ ಅಸಲಿ ಕಾರಣಗಳೇನು? ಇಲ್ಲಿದೆ ವಿವರ

ಆರ್ ಅಶೋಕ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಆಗಿ, ಕಂದಾಯ ಸಚಿವ, ಗೃಹ ಸಚಿವ, ಆರೋಗ್ಯ, ಸಾರಿಗೆ, ಪೌರಾಡಳಿತ ಸಚಿವರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಇನ್ನು ರಾಜಕೀಯ ಅನುಭವ ಕೂಡ ಚೆನ್ನಾಗಿದ್ದು, ಹೊಂದಾಣಿಕೆ ಮಾಡಿಕೊಂಡು ಹೋಗುವ ಕಲೆಯೂ ಇದೆ.

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ ಆಯ್ಕೆಗೆ ಅಸಲಿ ಕಾರಣಗಳೇನು? ಇಲ್ಲಿದೆ ವಿವರ
ಆರ್ ಅಶೋಕ
Follow us
| Updated By: ಗಣಪತಿ ಶರ್ಮ

Updated on: Nov 17, 2023 | 8:22 PM

ಬೆಂಗಳೂರು, ನವೆಂಬರ್ 17: ಕೊನೆಗೂ ಕರ್ನಾಟಕದ ಪ್ರತಿಪಕ್ಷ ನಾಯಕರನ್ನಾಗಿ (Karnataka Opposition Leader) ಮಾಜಿ ಉಪ ಮುಖ್ಯಮಂತ್ರಿ, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್​ ಅಶೋಕ (R Ashoka) ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಶೋಕ ಅವರ ಆಯ್ಕೆಗೆ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಶಾಸಕರಿಂದ ಪ್ರಬಲ ವಿರೋಧ ವ್ಯಕ್ತವಾದ ಹೊರತಾಗಿಯೂ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಜೆಪಿಯ ಈ ನಿರ್ಧಾರದ ಹಿಂದೆ ಹಲವು ಲೆಕ್ಕಾಚಾರಗಳಿವೆ.

ಆರ್ ಅಶೋಕ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಆಗಿ, ಕಂದಾಯ ಸಚಿವ, ಗೃಹ ಸಚಿವ, ಆರೋಗ್ಯ, ಸಾರಿಗೆ, ಪೌರಾಡಳಿತ ಸಚಿವರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಇನ್ನು ರಾಜಕೀಯ ಅನುಭವ ಕೂಡ ಚೆನ್ನಾಗಿದ್ದು, ಹೊಂದಾಣಿಕೆ ಮಾಡಿಕೊಂಡು ಹೋಗುವ ಕಲೆಯೂ ಇದೆ. ಇಷ್ಟು ವರ್ಷಗಳ ಕಾಲ ವಿಧಾನಸಭೆಯಲ್ಲಿ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಉತ್ತಮ ಸಂಸದೀಯ ಪಟು ಎಂದು ಹೇಳಬಹುದು. ಇವರು ಪ್ರತಿಪಕ್ಷ ನಾಯಕನಾದ್ರೆ ಪ್ರಮುಖವಾಗಿ ಜೆಡಿಎಸ್ ಜೊತೆಗೆ ಹೋಂದಾಣಿಕೆ ಮಾಡಿಕೊಳ್ಳುವುದಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಎನ್ನಲಾಗಿದೆ. ಕುಮಾರಸ್ವಾಮಿ ಅಧಿಕೃತ ವಿರೋಧ ಪಕ್ಷದ ನಾಯಕ ಅಲ್ಲದಿದ್ದರೂ ಅಧಿಕೃತ ವಿರೋಧ ಪಕ್ಷವಾಗಿಯೇ ಕೆಲಸ ಮಾಡುತ್ತಾರೆ. ಕುಮಾರಸ್ವಾಮಿ ಹೋರಾಟಕ್ಕೆ ಆರ್ ಅಶೋಕ್ ಸಾಥ್ ಕೊಟ್ಟರೆ ಸಾಕು ಎನ್ನುವುದು ಬಿಜೆಪಿಯ ಲೆಕ್ಕಾಚಾರ ಎನ್ನಲಾಗಿದೆ. ಇಷ್ಟೇ ಅಲ್ಲದೆ, ಇನ್ನೂ ಹಲವು ಲೆಕ್ಕಾಚಾರಗಳನ್ನು ಬಿಜೆಪಿ ಹೈಕಮಾಂಡ್ ಮಾಡಿದೆ. ಅವುಗಳು ಹೀಗಿವೆ;

ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ರೂ ಒಕ್ಕಲಿಗರಿಗೆ ಮಣೆ ಹಾಕಿದ ಬಿಜೆಪಿ

ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದರೂ ಬಿಜೆಪಿ ಒಕ್ಕಲಿಗ ನಾಯಕನಿಗೆ ಮಣೆ ಹಾಕಿದೆ. ಇದಕ್ಕೆ ಕಾರಣವೆಂದರೆ, ಮುಂದಿನ ದಿನಗಳಲ್ಲಿ ಪಕ್ಷದಲ್ಲೇ ಒಕ್ಕಲಿಗ ನಾಯಕತ್ವ ಬೆಳವಣಿಗೆಗೆ ಮಣೆ ಹಾಕುವುದಾಗಿದೆ. ಹಳೇ ಮೈಸೂರು ಭಾಗವನ್ನ ಮುಂದಿಟ್ಟುಕೊಂಡು ಒಕ್ಕಲಿಗೆ ನಾಯಕತ್ವಗೆ ಮನ್ನಣೆ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಮೈತ್ರಿಯಿಂದ ದೂರ ಆದರೂ ಒಕ್ಕಲಿಗ ನಾಯಕತ್ವ ಉಳಿದು, ಬೆಳೆಯಲಿದೆ ಎಂಬ ಲೆಕ್ಕಾಚಾರ ಬಿಜೆಪಿಯದ್ದಾಗಿದೆ.

ಇದನ್ನೂ ಓದಿ: ಆರ್ ಅಶೋಕ ಪ್ರತಿಪಕ್ಷ ನಾಯಕ: ಒಕ್ಕಲಿಗ ನಾಯಕನಿಗೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್

ಒಕ್ಕಲಿಗ ಪ್ರಾಬಲ್ಯದ ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ ಭಾಗದಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಮುಂದಿನ ದಿನಗಳಲ್ಲಿ ಒಕ್ಕಲಿಗೆ ನಾಯಕತ್ವ ಜೆಡಿಎಸ್​​​ಗೆ ಹೊರಗುತ್ತಿಗೆ ನೀಡಿದ್ರೆ ಸಮಸ್ಯೆ ಆಗಬಹುದು. ಜೆಡಿಎಸ್ ಪಕ್ಷದ ನಾಯಕತ್ವದ ಬಲಿಷ್ಠವಾಗಿ ಬಿಜೆಪಿ ಅವಲಂಬಿತವಾಗಬಹುದು. ಹೀಗಾಗಿ ಒಕ್ಕಲಿಗೆ ಸಮುದಾಯದ ಆರ್. ಅಶೋಕ ಮೂಲಕ ಒಕ್ಕಲಿಗ ಮತಗಳನ್ನು ಹಿಡಿದಿಡುವ ಪ್ರಯತ್ನ ಮಾಡುತ್ತಿದೆ ಬಿಜೆಪಿ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್