ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

|

Updated on: Jul 18, 2023 | 3:56 PM

ನಮ್ಮ ಉದ್ದೇಶ ನಮಗಾಗಿ ಅಧಿಕಾರ ವಹಿಸಿಕೊಳ್ಳುವುದಲ್ಲ. ಇದು ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸುವುದು. ರಾಜ್ಯ ಮಟ್ಟದಲ್ಲಿ ನಮ್ಮ ನಡುವೆ ಕೆಲವು ಭಿನ್ನಾಭಿಪ್ರಾಯಗಳಿವೆ. ಆದರೆ ಈ ಭಿನ್ನತೆ ಅಷ್ಟು ದೊಡ್ಡದಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ

ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us on

ಬೆಂಗಳೂರು ಜುಲೈ 18: ತಮ್ಮ ಪಕ್ಷಕ್ಕೆ ಪ್ರಧಾನಿ ಹುದ್ದೆ ಬಗ್ಗೆ ಆಸಕ್ತಿಯಿಲ್ಲ. ಆದರೆ ಭಾರತ, ಸಂವಿಧಾನ, ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ಕಲ್ಪನೆಯನ್ನು ರಕ್ಷಿಸುವಲ್ಲಿ ಆಸಕ್ತಿ ಇದೆ ಎಂದು ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಮಂಗಳವಾರ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ (BJP) ವಿರುದ್ದ ಚುನಾವಣಾ ರಣತಂತ್ರಕ್ಕಾಗಿ ಸಾಮಾನ್ಯ ವೇದಿಕೆಯನ್ನು ರೂಪಿಸುವ ಪ್ರಯತ್ನದ ಭಾಗವಾಗಿ ವಿರೋಧ ಪಕ್ಷಗಳ ಎರಡನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ರಾಜ್ಯ ಮಟ್ಟದಲ್ಲಿ ವಿವಿಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೆ ಜನರನ್ನು ರಕ್ಷಿಸುವ ಸಲುವಾಗಿ ಭಿನ್ನಾಭಿಪ್ರಾಯಗಳನ್ನು ಬದಿಗಿಡಬೇಕು ಎಂದು ಹೇಳಿದ್ದಾರೆ.


ನಮ್ಮ ಉದ್ದೇಶ ನಮಗಾಗಿ ಅಧಿಕಾರ ವಹಿಸಿಕೊಳ್ಳುವುದಲ್ಲ. ಇದು ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸುವುದು. ರಾಜ್ಯ ಮಟ್ಟದಲ್ಲಿ ನಮ್ಮ ನಡುವೆ ಕೆಲವು ಭಿನ್ನಾಭಿಪ್ರಾಯಗಳಿವೆ. ಆದರೆ ಈ ಭಿನ್ನತೆ ಅಷ್ಟು ದೊಡ್ಡದಲ್ಲ. ನಿರುದ್ಯೋಗದಿಂದ ಬಳಲುತ್ತಿರುವ ಯುವಕರು ಮತ್ತು ಬಡವರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕಲು ನಾವು ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಬಹುದು ಎಂದು ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: Unstable Prime Ministerial candidate! ಬೆಂಗಳೂರಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ, ರಸ್ತೆಯಲ್ಲಿ ನಿತೀಶ್ ಕುಮಾರ್ ವಿರುದ್ಧ ಕುಹಕದ ಪೋಸ್ಟರ್​ಗಳು!

ಸಭೆಯಲ್ಲಿ ಭಾಗವಹಿಸುವ 26 ಪಕ್ಷಗಳು 11 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಕಾರಣ ಸಾಕಷ್ಟು ರಾಜಕೀಯ ಬಲ ಹೊಂದಿವೆ ಎಂದು ಖರ್ಗೆ ಹೇಳಿದರು. ಮೈತ್ರಿಯ ಮಹತ್ವವನ್ನು ಅವರು ಒತ್ತಿ ಹೇಳಿದ ಅವರು ಬಿಜೆಪಿಗೆ (2019 ರ ಚುನಾವಣೆಯಲ್ಲಿ) 303 ಸ್ಥಾನಗಳು ಬಂದಿಲ್ಲ. ಅದು ತನ್ನ ಮಿತ್ರಪಕ್ಷಗಳ ಮತಗಳನ್ನು ಬಳಸಿಕೊಂಡು ಅಧಿಕಾರಕ್ಕೇರಿತು. ನಂತರ ಅವುಗಳನ್ನು ತಿರಸ್ಕರಿಸಿತು. ಇಂದು, ಬಿಜೆಪಿ ಅಧ್ಯಕ್ಷರು ಮತ್ತು ಅವರ ನಾಯಕರು ತಮ್ಮ ಹಳೆಯ ಮಿತ್ರರನ್ನು ಸರಿಪಡಿಸಲು ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 2:44 pm, Tue, 18 July 23