Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಅಮಿತ್ ಶಾರಂತಹ ನೂರು ಜನ ಬರಲಿ, 2024ರಲ್ಲಿ ಕಾಂಗ್ರೆಸ್​ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ: ಮಲ್ಲಿಕಾರ್ಜುನ ಖರ್ಗೆ

ನರೇಂದ್ರ ಮೋದಿ, ಅಮಿತ್​ ಶಾರಂತಹ ನೂರು ಮಂದಿ ಬರಲಿ, 2024ರ ಚುನಾವಣೆ ಬಳಿಕ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮೋದಿ, ಅಮಿತ್ ಶಾರಂತಹ ನೂರು ಜನ ಬರಲಿ, 2024ರಲ್ಲಿ ಕಾಂಗ್ರೆಸ್​ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us
ನಯನಾ ರಾಜೀವ್
|

Updated on: Feb 22, 2023 | 3:11 PM

ನರೇಂದ್ರ ಮೋದಿ, ಅಮಿತ್​ ಶಾರಂತಹ ನೂರು ಮಂದಿ ಬರಲಿ, 2024ರ ಚುನಾವಣೆ ಬಳಿಕ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೇಶವನ್ನು ಉತ್ತಮ ರೀತಿಯಲ್ಲಿ ಕೊಂಡೊಯ್ಯುವ ವ್ಯಕ್ತಿ ತಾನೊಬ್ಬನೇ, ಬೇರೆ ಯಾರಿಗೂ ನನ್ನ ಜಾಗಕ್ಕೆ ತಲುಪಲು ಸಾಧ್ಯವಿಲ್ಲ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಅವರ ಎಲ್ಲಾ ನಂಬಿಕೆಗಳು ಬುಡಮೇಲಾಗಲಿದೆ ಎಂದರು. ನೀವು ಸರ್ವಾಧಿಕಾರಿ ಅಲ್ಲ, ನೀವು ಜನರಿಂದ ಆಯ್ಕೆಯಾಗಿದ್ದೀರಿ ಮತ್ತು ಜನರು ನಿಮಗೆ ಪಾಠ ಕಲಿಸುತ್ತಾರೆ ಎಂದು ನಾಗಾಲ್ಯಾಂಡ್‌ನಲ್ಲಿ ಚುನಾವಣಾ ಜಾಥಾದಲ್ಲಿ ಹೇಳಿದರು.

ದೇಶದಲ್ಲಿ ಸಮಾನತೆ, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಯಬೇಕಾದರೆ, ಬಿಜೆಪಿ ಅಧಿಕಾರದಿಂದ ತೊಲಗಬೇಕು. ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ರಾಜಕೀಯ ಪಕ್ಷಗಳು ಒಂದಾಗಲೇಬೇಕು. ಈ ಮಹಾಮೈತ್ರಿಕೂಟಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ ನಾಯಕತ್ವ ನೀಡಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಾಗಾಲ್ಯಾಂಡ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರು ಹಲವಾರು ಬಾರಿ, ದೇಶ ಒಪ್ಪಿಕೊಂಡ ಏಕೈಕ ನಾಯಕ ನಾನಾಗಿದ್ದು, ಬೇರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ಎಂದು ಹೇಳಿದ್ದಾರೆ. ಯಾವುದೇ ಪ್ರಜಾಪ್ರಭುತ್ವವಾದಿ ಹೀಗೆ ಹೇಳುವುದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

ಮತ್ತಷ್ಟು ಓದಿ: ವಿಚಿತ್ರವಾಗಿ ವರ್ತಿಸುತ್ತಿರುವ ಸರ್ಕಾರವನ್ನು ನಿಯಂತ್ರಿಸಿ: ಕೇಂದ್ರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಭಾರತವು ಪ್ರಜಾತಂತ್ರ ವ್ಯವಸ್ಥೆಯನ್ನು ಹೊಂದಿದ್ದು, ನೀವು ನಿರಂಕುಶಾಧಿಕಾರಿ ಅಲ್ಲ ಎಂಬುದನ್ನು ಪ್ರಧಾನಿ ಮೋದಿ ಅವರಿಗೆ ನಾವು ಮನವರಿಕೆ ಮಾಡಿಕೊಡುತ್ತೇವೆ. ಪ್ರಧಾನಿ ಮೋದಿ ಅವರು ಜನರಿಂದ ಆಯ್ಕೆಯಾಗಿದ್ದಾರೆಯೇ ಹೊರತು, ಅವರು ಸರ್ವಾಧಿಕಾರಿ ಅಲ್ಲ. ನಿಮ್ಮ ಸರ್ವಾಧಿಕಾರಿ ವರ್ತನೆಗೆ ಈ ದೇಶದ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಖರ್ಗೆ ಹರಿಹಾಯ್ದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನd ರಕ್ಷಣೆಗೆ ನಾವು ಒಂದಾಗಲೇಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದರು. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಬರಲಿದೆ. ನಾವು ಈಗಾಗಲೇ ಸಮಾನ ಮನಸ್ಕ ರಾಜಕೀಯ ಪಕ್ಷಗಳೊಂದಿಗೆ ಚರ್ಚೆ ಆರಂಭಿಸಿದ್ದೇವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!