Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಮತ ಹಾಕದವರಿಗೆ ಸಹಿ ಕೂಡ ಮಾಡಲ್ಲ ಎಂದ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡುವುದಿಲ್ಲವೆಂದು ಹೇಳಿಕೆ ನೀಡಿದ್ದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಗೆ ಈಗ ಸಂಕಷ್ಟ ಎದುರಾಗಿದೆ.

ನನಗೆ ಮತ ಹಾಕದವರಿಗೆ ಸಹಿ ಕೂಡ ಮಾಡಲ್ಲ ಎಂದ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು
ಎನ್.ಚಲುವರಾಯಸ್ವಾಮಿ
Follow us
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 2:24 PM

ಮಂಡ್ಯ: ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡುವುದಿಲ್ಲವೆಂದು ಹೇಳಿಕೆ ನೀಡಿದ್ದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬಿಜೆಪಿ ವಕ್ತಾರ ಸಿ.ಟಿ ಮಂಜುನಾಥ್ ಎನ್ನುವರು ಮಂಡ್ಯ ಜಿಲ್ಲಾಧಿಕಾರಿಗಳ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಗ, ದ್ವೇಷ, ತಾರತಮ್ಯ ಮಾಡದೆ ಸಂವಿಧಾನದ ಆಶಯದಂತೆ ಕೆಲಸ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ರು ತಾರತಮ್ಯದ ಮಾತುಗಳನ್ನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಜುನಾಥ್ ಪತ್ರದ ಮೂಲಕ ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: “ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್ ಅಷ್ಟೇ” ವೈರಲ್​ ಆದ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಚಿವ ಚಲುವರಾಯಸ್ವಾಮಿ

ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡುವುದಿಲ್ಲವೆಂದು ಇತ್ತೀಚೆಗೆ ನಾಗಮಂಗಲದ ಕೃತಜ್ಞತಾ ಸಮಾರಂಭದದಲ್ಲಿ ಚಲುವರಾಯಸ್ವಾಮಿ ಹೇಳಿದ್ದು, ಈ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾವಗಿತ್ತು. ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳದಲ್ಲಿ ಆಕ್ರೋಶಕ್ಕೆ ಕಾರವಾಗಿತ್ತು. ಮೊದಲ ಬಾರಿಗೆ ಮಂಗಳವಾರ ನಾಗಮಂಗಲಕ್ಕೆ ಭೇಟಿ ನೀಡಿದ್ದ ಎನ್‌.ಚಲುವರಾಯಸ್ವಾಮಿ, ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

ರಾಜಕೀಯ ಅಂದ ಮೇಲೆ ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಒಂದು ಪಕ್ಷ ಸೋಲಬೇಕು, ಇನ್ನೊಂದು ಪಕ್ಷ ಗೆಲ್ಲಬೇಕು. ಚುನಾವಣೆಯಲ್ಲಿ ಒಂದು ಪಕ್ಷವನ್ನು ಪ್ರತಿನಿಧಿಸುವ ಅಭ್ಯರ್ಥಿ, ಗೆದ್ದು ಬಂದ ಬಳಿಕ ಒಂದು ಪಕ್ಷದ ಅಭ್ಯರ್ಥಿ ಆಗಿ ಉಳಿಯುವುದಿಲ್ಲ. ಒಂದು ಕ್ಷೇತ್ರದ ಜನಪ್ರತಿನಿಧಿಯಾಗಿ ನಿಲ್ಲುತ್ತಾರೆ. ಹೀಗಾಗಿ ಗೆಲುವು ಕಂಡ ಜನಪ್ರತಿನಿಧಿ ಇಡೀ ಕ್ಷೇತ್ರದ ಅಭಿವೃದ್ಧಿಗೆ ಶ್ರಮ ಪಡಬೇಕು. ಒಂದು ವೇಳೆ ಸಚಿವ ಸ್ಥಾನ ಸಿಕ್ಕರೆ ಇಡೀ ರಾಜ್ಯದ ಅಭಿವೃದ್ಧಿಗೆ ಕಟಿಬದ್ಧರಾಗಿ ದುಡಿಯಬೇಕು. ಅಂತಿಮವಾಗಿ ರಾಜ್ಯದ ಜನರ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಬೇಕು. ಆದರೆ ನಾಗಮಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್‌‌ ಪಕ್ಷದಿಂದ ಗೆದ್ದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕೃಷಿ ಸಚಿವರಾಗಿರುವ ಎನ್‌. ಚಲುವರಾಯಸ್ವಾಮಿ ಸಣ್ಣದೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ