ಮಂಡ್ಯ ಕ್ಷೇತ್ರಕ್ಕಾಗಿ ಬಿಜೆಪಿ ನಾಯಕರ ಬಿಗಿ ಪಟ್ಟು: ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ತೀರ್ಮಾನ

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರದ ಟಿಕೆಟ್​ಗಾಗಿ ಮೈತ್ರಿ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ನಡುವೆ ಮಂಡ್ಯದಲ್ಲಿ ಅಲರ್ಟ್ ಆದ ಬಿಜೆಪಿ ಇಂದು ಕಾರ್ಯಕಾರಿಣಿ ಸಭೆ ಮಾಡಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ತೀರ್ಮಾನವಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಮಂಡ್ಯ ಕ್ಷೇತ್ರಕ್ಕಾಗಿ ಬಿಜೆಪಿ ನಾಯಕರ ಬಿಗಿ ಪಟ್ಟು: ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ತೀರ್ಮಾನ
ಮಂಡ್ಯ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Feb 04, 2024 | 4:40 PM

ಮಂಡ್ಯ, (ಫೆಬ್ರವರಿ 04): ಮಂಡ್ಯ ಲೋಕಸಭಾ (Mandya Loksabha) ಅಖಾಡ ಮತ್ತೆ ಸದ್ದು ಮಾಡತೊಡಗಿದೆ. ಬಿಜೆಪಿ (BJP) ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್(JDS)​, ಮಂಡ್ಯವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಈ ಬಗ್ಗೆ ಬಿಜೆಪಿ ಹೈಕಮಾಂಡ್​ ಜೊತೆ ಚರ್ಚಿಸಿದೆ. ಮೂಲಗಳ ಪ್ರಕಾರ ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್​ ತೀರ್ಮಾನಿಸಿದೆ. ಆದ್ರೆ, ಇತ್ತ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರು ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟು ಕೊಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಮಂಡ್ಯದ ಪಾಂಡವಪುರದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಸಭೆಯಲ್ಲಿ ಮಂಡ್ಯ ಕ್ಷೇತ್ರವನ್ನ ಬಿಜೆಪಿಯೇ ಉಳಿಸಿಕೊಳ್ಳಲು ಒತ್ತಾಯ ಕೇಳಿಬಂದಿದೆ.

ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಡದಂತೆ ಬಹುತೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕ ಪ್ರೀತಂ ಗೌಡರಿಂದಲೂ ಒತ್ತಾಯ ಕೇಳಿ ಬಂದಿದೆ. ಎಲ್ಲರ ಅಭಿಪ್ರಾಯದಂತೆ ಕ್ಷೇತ್ರ ಉಳಿಸಿಕೊಳ್ಳುವಂತೆ ರಾಜ್ಯ ನಾಯಕರ ಗಮನಕ್ಕೆ ತರಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ರಾಜ್ಯಾಧ್ಯಕ್ಷರ ಗಮನಕ್ಕೆ ತರುತ್ತೇನೆ ಎಂದು ಪ್ರೀತಂಗೌಡ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ ಕ್ಷೇತ್ರ ಬಹುತೇಕ ಜೆಡಿಎಸ್​​ಗೆ ಫಿಕ್ಸ್​: ಮೈತ್ರಿ ಅಭ್ಯರ್ಥಿ ಯಾರು? ಸುಮಲತಾ ಅಂಬರೀಶ್ ಮುಂದಿನ ನಡೆ ಏನು?

ಈಗಾಗಲೇ ನಾರಾಯಣಗೌಡ ಸೇರಿದಂತೆ ಹಲವು ಮುಖಂಡರು ಕ್ಷೇತ್ರವನ್ನು ಜೆಡಿಎಸ್​ಗೆ ಕ್ಷೇತ್ರ ಬಿಟ್ಟು ಕೊಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಜಿಲ್ಲೆಯ ಬಿಜೆಪಿ ನಾಯಕರು ಈಗಾಗಲೇ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಯಾವುದೇ ಕಾರಣಕ್ಕೂ ಮಂಡ್ಯವನ್ನು ಜೆಡಿಎಸ್​ಗೆ ಕೊಡಬಾರದು. ಬದಲಾಗಿ ಬಿಜೆಪಿಯಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್​ ನೀಡಬೇಕೆಂಬ ಕೂಗು ಕೇಳಿಬಂದಿವೆ.

ಮಂಡ್ಯ ಬಹುತೇಕ ಜೆಡಿಎಸ್ ಪಾಲು

ಹೌದು…ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್​ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ನಡೆಸಿದ ಸರ್ವೆ ವರದಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಂತರೆ ಮಂಡ್ಯದಲ್ಲಿ ಗೆಲುವು ಫಿಕ್ಸ್ ಎಂದು ರಿಪೋರ್ಟ್ ಬಂದಿದೆ. ಇದರಿಂದಾಗಿ ಬಿಜೆಪಿ ಹೈಕಮಾಂಡ್​ ಮಂಡ್ಯ ಕ್ಷೇತ್ರವನ್ನು ದಳಪತಿಗಳಿಗೆ ಬಿಟ್ಟು ಕೊಡಲು ನಿರ್ಧರಿಸಿದೆ. ಅಲ್ಲದೇ ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಾಗೇ ಜಿಲ್ಲೆಯ ಮುಖಂಡರು ಸಹ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್ ಗೆ ಸಾಕಷ್ಟು ಹಿನ್ನಡೆ ಆಗಿದೆ. ಇದರಿಂದ ಕಾರ್ಯಕರ್ತರು ಮತ್ತು ಮುಖಂಡರು ಉತ್ಸಾಹ ಕಳೆದುಕೊಂಡಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ರೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬರುತ್ತದೆ. ಅಲ್ಲದೇ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ರೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಕೂಡ ಸಂಪೂರ್ಣ ಬೆಂಬಲ ನೀಡುತ್ತಾರೆ ಎನ್ನುವುದು ಬಿಜೆಪಿ ಹೈಕಮಾಂಡ್​ನ ಅಭಿಪ್ರಾಯವಾಗಿದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!