ಮಂಡ್ಯ ಹನುಮ ಧ್ವಜ ವಿವಾದ: ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದ ಕುಮಾರಸ್ವಾಮಿ

Mandya Hanuman Flag Controversy: ಗೌರಿ ಶಂಕರ್ ಟ್ರಸ್ಟ್​ಗೆ ನವೆಂಬರ್ ತಿಂಗಳಲ್ಲಿ ಅನುಮತಿ ನೀಡಲಾಗಿತ್ತು. ಇಂಥದ್ದೇ ಧ್ವಜ ಎಂದು ಎಲ್ಲಿಯೂ ಉಲ್ಲೇಖಿಸಿರಲಿಲ್ಲ. 2023ರ ಡಿಸೆಂಬರ್ 29ರಂದು ಮತ್ತೆ ಹೊಸ ಅರ್ಜಿ ತೆಗೆದುಕೊಂಡಿದ್ದಾರೆ. ಅದನ್ನು ತಿದ್ದಿಕೊಂಡಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಮಂಡ್ಯ ಹನುಮ ಧ್ವಜ ವಿವಾದ: ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Jan 30, 2024 | 12:41 PM

ಬೆಂಗಳೂರು, ಜನವರಿ 30: ಮಂಡ್ಯ (Mandya) ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಸಚಿವ ಎನ್​ ಚಲುವರಾಯಸ್ವಾಮಿ (N Chaluvaraya Swamy) ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕೆರಗೋಡಿನ ಬಸ್ ನಿಲ್ದಾಣದ ಧ್ವಜಸ್ತಂಭ ಸ್ಥಾಪನೆಗೆ ಮನವಿ ಮಾಡಿದ್ದ ಗೌರಿ ಶಂಕರ್ ಸೇವಾ ಟ್ರಸ್ಟ್, ಯಾವ ಧ್ವಜ ಅಂತ ಹೇಳಿರಲಿಲ್ಲ. ಅದಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರ್ಕಾರವೇ ನಕಲಿ ದಾಖಲೆ ಸರ್ಕಾರ ಸೃಷ್ಟಿ ಮಾಡಿಕೊಂಡು ಆರೋಪ ಮಾಡುತ್ತಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಗೌರಿ ಶಂಕರ್ ಟ್ರಸ್ಟ್​ಗೆ ನವೆಂಬರ್ ತಿಂಗಳಲ್ಲಿ ಅನುಮತಿ ನೀಡಲಾಗಿತ್ತು. ಇಂಥದ್ದೇ ಧ್ವಜ ಎಂದು ಎಲ್ಲಿಯೂ ಉಲ್ಲೇಖಿಸಿರಲಿಲ್ಲ. 2023ರ ಡಿಸೆಂಬರ್ 29ರಂದು ಮತ್ತೆ ಹೊಸ ಅರ್ಜಿ ತೆಗೆದುಕೊಂಡಿದ್ದಾರೆ. ಅದನ್ನು ತಿದ್ದಿಕೊಂಡಿದ್ದಾರೆ. ಇದರಲ್ಲಿ ತ್ರಿವರ್ಣ ಧ್ವಜ, ಕನ್ನಡ ಧ್ವಜ ಹಾಕಲು ಅನುಮತಿ ನೀಡಿದ್ದೇವೆ ಎಂದಿದೆ. ಜನವರಿ ತಿಂಗಳಲ್ಲಿ ಪತ್ರ ಸೃಷ್ಟಿ ಮಾಡಿಕೊಳ್ಳಲಾಗಿದೆ. ಮುಚ್ಚಳಿಕೆಯಲ್ಲಿರುವ ಹೆಸರು, ಅರ್ಜಿಗಳಲ್ಲಿ ಬೇರೆ ಹೆಸರುಗಳು ಇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೆಂಪೇಗೌಡ, ಕುವೆಂಪು ಪ್ರತಿಮೆ ಸ್ಥಾಪನೆ ಸಂಬಂಧ ಅರ್ಜಿ ಹಾಕಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಇನ್ನೂ ಬುದ್ಧಿ ಬಂದಿಲ್ಲ. 5/1 ಕ್ಕೆ ಒಂದು‌ ಷರತ್ತು ಹಾಕಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಸೋಮವಾರದ ಭಾಷಣದಲ್ಲಿ ಬೆಂಕಿ‌‌ ಹಚ್ಚಿ‌, ಫ್ಲೆಕ್ಸ್ ಹರಿಯಿರಿ ಅಂತ ಹೇಳಿಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂಬುದಾಗಿ ಆಗ್ರಹಿಸಿದ್ದೆ ಅಷ್ಟೆ. ಕೆರೆಗೋಡಿನ ಜನತೆ ಜನವರಿ 26 ರಂದು ರಾಷ್ಟ್ರ ಧ್ವಜ ಹಾರಿಸಿದ್ದಾರೆಯೇ ವಿನಃ ಸರ್ಕಾರ ಅಲ್ಲ. ಕಾಂಗ್ರೆಸ್ ಶಾಸಕರನ್ನು ಕರೆದಿಲ್ಲ ಎಂದು ಈ ಗಲಾಟೆ ಆರಂಭ ಆಗಿದೆ ಎಂದು ಅವರು ದೂರಿದ್ದಾರೆ.

ನಿಮ್ಮಿಂದ ಕಲಿಯಬೇಕಾ ಚಲುವರಾಯಸ್ವಾಮಿ ಅವರೇ: ಕುಮಾರಸ್ವಾಮಿ

ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರಿಗೆ ನಮಸ್ಕಾರ. ನಾನು ನಿಮ್ಮಿಂದ ಕಲಿಯಬೇಕಾ? 200 ಜನ ರೈತರು ಆತ್ಮಹತ್ಯೆ ಮಾಡಿಕೊಂಡರು. ನೀವು ಒಂದು ರೂಪಾಯಿ ಕೂಡ ಬಿಚ್ಚಿಲ್ಲ. ನನ್ನ ದುಡಿಮೆ ಹಣ ಕೊಟ್ಟು ಬಂದಿದ್ದೇನೆ. ಅದೂ ಸಹ ವರ್ಗಾವಣೆ ದಂಧೆಯಿಂದ ಬಂದ‌ ಹಣ ಅಲ್ಲ. ನಿಮ್ಮಿಂದ ವಿನಯ ಕಲಿಯಬೇಕಿಲ್ಲ. ನಾನು ಜಿಲ್ಲೆ ಹಾಳು ಮಾಡೋಕೆ‌ ಬಂದಿದ್ದೇನೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಅಲ್ಲದೆ, ಚಲುವರಾಯಸ್ವಾಮಿ ಆರೋಪಗಳಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಹನುಮ ಧ್ವಜ ವಿವಾದ ಶುರುವಾಗಿದ್ಹೇಗೆ? ಯಾಕೆ? ಇಲ್ಲಿದೆ ಘಟನೆ ಹಿನ್ನೆಲೆ

ಕಳೆದ ಎರಡು ದಿನಗಳಿಂದ ಮಂಡ್ಯದಲ್ಲಿ ಆರಂಭ ಆಗಿರುವ ಒಂದು ಘಟನೆಯಿಂದಾಗಿ ಈ‌ ಸರ್ಕಾರದ ಕೆಲ ನಡವಳಿಕೆ ಬಗ್ಗೆ ‌ಮತನಾಡಲೇಬೇಕಿದೆ. ಮಾಜಿ ಸಿಎಂ ದಿ. ದೇವರಾಜು ಅರಸು ಅವರಿಗಿಂತ ಸಿಎಂ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದೆ ಹೋಗಿ ಶೋಷಿತರ ಧ್ವನಿಯಾಗಿ ಚಿತ್ರದುರ್ಗದಲ್ಲಿ ಮಾಡಿದ ವೀರಾವೇಷದ ಭಾಷಣ ಕೇಳಿದ್ದೇನೆ. ಮತ್ತೊಂದೆಡೆ, ಮಂಡ್ಯದಲ್ಲಿ ನಮ್ಮ ಹಳೆಯ ಸ್ನೇಹಿತ ಮಾತನಾಡಿರುವುದನ್ನೂ ಕೇಳಿದ್ದೇನೆ. ಮಂಡ್ಯವನ್ನು ಹಾಳು ಮಾಡಲು ಕುಮಾರಸ್ವಾಮಿ ಬಂದಿದ್ದಾರೆ ಎಂದಿದ್ದಾರೆ. ಮಂಡ್ಯದಲ್ಲಿ ನೆಡೆದ ಘಟನೆಗೂ ನನಗೂ ಏನೂ ಸಂಬಂಧ ಎಂದು ಸಿಎಂ ಮತ್ತು ಉಸ್ತುವಾರಿ ಸಚಿವರನ್ನು ಕೇಳುತ್ತೇನೆ. ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ನಾನು ಕೊನೆ ಹಂತದಲ್ಲಿ ಭಾಗಿಯಾಗಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೇಸರಿ ಶಾಲು ಹಾಕುವುದು ತಪ್ಪೇ: ಕುಮಾರಸ್ವಾಮಿ ಪ್ರಶ್ನೆ

ಪಾಪ ಹಳೆಯ ಸ್ನೇಹಿತರು (ಚಲುವರಾಯಸ್ವಾಮಿ) ಹೇಳಿದ್ದಾರೆ, ಕುಮಾರಸ್ವಾಮಿ ಕೇಸರಿ ಶಾಲು‌‌ ಹಾಕಿಕೊಂಡು ಜೆಡಿಎಸ್ ಕಾರ್ಯಕರ್ತರ ಶಕ್ತಿ ಕೊನೆಗೊಳಿಸಲು ಹೊರಟಿದ್ದಾರೆ ಎಂದು. ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾನ್ ಅಪರಾಧವಾ? ಕಾಂಗ್ರೆಸ್​​ನವರಿಗೆ ಕೇಸರಿ ಮೇಲೆ ಯಾಕೆ ಸಂಕುಚಿತ ಮನೋಭಾವ? ಮಂಡ್ಯ ಉಸ್ತುವಾರಿ ಸಚಿವರಿಂದ ನಾನು ನನ್ನ ಪಕ್ಷವನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದನ್ನು ಕಲಿಯಬೇಕಿಲ್ಲ. ನನಗೆ ಜನ ಕೊಟ್ಟಿರುವ ಪ್ರೀತಿ ಇದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ ಹನುಮ ಧ್ವಜ ವಿವಾದ: ಜನರ ನೆಮ್ಮದಿ ಹಾಳು ಮಾಡಲು ಮುಂದಾದ ಕುಮಾರಸ್ವಾಮಿ; ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ ಸಕ್ಕರೆ ಕಾರ್ಖಾನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಚಲುವರಾಯಸ್ವಾಮಿ ದೂರಿದ್ದಾರೆ. ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್​​ನವರು ಕೆಲಸ ಮಾಡಲು ಬಿಡಲಿಲ್ಲ. ನಮ್ಮ ಕೊಡುಗೆ ಮಂಡ್ಯಗೆ ಏನೂ ಅಂತ ಜನ ನಿರ್ಧಾರ ಮಾಡುತ್ತಾರೆ. ನಿಮ್ಮ ಸರ್ಟಿಫಿಕೇಟ್ ಬೇಕಿಲ್ಲ. ಸೋಮವಾರ ನಡೆದ ಅಹಿತಕರ ಘಟನೆಗೆ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ. ಮೊದಲು ನಿಮ್ಮ ಮಂಡ್ಯ ಶಾಸಕರಿಗೆ ಯಾವ ರೀತಿ ನೆಡೆದುಕೊಳ್ಳಬೇಕು ಎಂದು ಪಾಠ ಮಾಡಿ ಎಂದು ಅವರು ಕಿಡಿಕಾರಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್