ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್; ಹೆಚ್​ಡಿ ಕುಮಾರಸ್ವಾಮಿ, ಅಮಿತ್ ಶಾ ಮಾತುಕತೆ

ದೆಹಲಿಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಮತ್ತು ಅಮಿತ್ ಶಾ ಮಾತು ಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್ ಎಂದು ಅಮಿತ್ ಶಾ ಮಾತುಕೊಟ್ಟಿದ್ದು ಮಂಡ್ಯ, ಹಾಸನದಲ್ಲಿ ನಿಮ್ಮ ಶಾಸಕರಿಂದಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ.

ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್; ಹೆಚ್​ಡಿ ಕುಮಾರಸ್ವಾಮಿ, ಅಮಿತ್ ಶಾ ಮಾತುಕತೆ
ನಿಖಿಲ್ ಕುಮಾರಸ್ವಾಮಿ, ಹೆಚ್​ಡಿ ಕುಮಾರಸ್ವಾಮಿ, ಅಮಿತ್ ಶಾ
Follow us
Sunil MH
| Updated By: ಆಯೇಷಾ ಬಾನು

Updated on: Feb 22, 2024 | 12:14 PM

ಮಂಡ್ಯ, ಫೆ.22: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಹೆಚ್ಚು ಸ್ಥಾನ ಗೆಲ್ಲಲು ಈಗಾಗಲೇ ಜೆಡಿಎಸ್ (JDS)ರಂಗ ತಾಲೀಮು ಆರಂಭಿಸಿದೆ. ಆದರೆ ಕ್ಷೇತ್ರ ಹಂಚಿಕೆ ಮಾತ್ರ ಅಂತಿಮವಾಗಿಲ್ಲ ಹೀಗಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ (HD Kumaraswamy) ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ. ಕೇಂದ್ರ ಸಚಿವ ಅಮಿಶ್ ಶಾ (Amit Sha) ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ ವಿಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ. ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಹೈಕಮಾಂಡ್ ಹೆಚ್​ಡಿಕೆಗೆ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಅತಿ ಹೆಚ್ಚು ಸ್ಥಾನ ಗೆದ್ದು ಮತ್ತೊಮ್ಮೆ ಪ್ರಧಾನಿ ಕೈ ಬಲಪಡಿಸಲು ಬಿಜೆಪಿ ಜೆಡಿಎಸ್ ಒಂದಾಗಿದೆ. ಜೆಡಿಎಸ್ ಎನ್​ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯದಲ್ಲಿ ಕ್ಷೇತ್ರ ಹಂಚಿಕೆ ಅಂತಿಮವಾಗಿರಲಿಲ್ಲ. ಹೀಗಾಗಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆ ದಿಢೀರ್ ದೆಹಲಿಗೆ ತೆರಳಿದ್ದು ಕುಮಾರಸ್ವಾಮಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯದ ಸದ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ‌ಮಾಹಿತಿ‌ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟು ಅವಧಿಗೆ ಮುಖ್ಯಮಂತ್ರಿ ಅಂತ ಕೇವಲ ನಾಲ್ವರಿಗೆ ಮಾತ್ರ ಗೊತ್ತು: ಪ್ರಿಯಾಂಕ್ ಖರ್ಗೆ

ನಾವು ಎನ್​ಡಿಎ ಮೈತ್ರಿ‌ಕೂಟ ಸೇರಿರೋದು ಕಾಂಗ್ರೆಸ್​ನ ಸೋಲಿಸಬೇಕಂತಾ. ಆದರೆ ಮಂಡ್ಯ ಮತ್ತು ಹಾಸನದಲ್ಲಿ ನಿಮ್ಮ ಪಕ್ಷದ ಶಾಸಕರೇ ಭಿನ್ನಾಭಿಪ್ರಾಯ ವ್ಯಕ್ತಪಡಿಸ್ತಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ಅಮಿತ್ ಶಾ ಬಲಿ ದೂರು ಹೇಳಿದ್ದಾರೆ. ಇನ್ನು ಮಂಡ್ಯ, ಹಾಸನ, ಕೋಲಾರ ಜೆಡಿಎಸ್​ಗೆ ಫಿಕ್ಸ್. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಹೈಕಮಾಂಡ್ ಹೆಚ್​ಡಿಕೆಗೆ ತಿಳಿಸಿದ್ದಾರೆ. ರಾಜ್ಯ ನಾಯಕರೊಂದಿಗೆ ಚರ್ಚೆ ಮಾಡಿ ಉಳಿದ ಕ್ಷೇತ್ರಗಳ ಬಗ್ಗೆ ಫೈನಲ್ ಮಾಡೋಣಾ ಎಂದು ಅಮಿತ್ ಶಾ ಹೇಳಿದ್ದಾರೆ. ಹಾಸನ, ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಅನಗತ್ಯ ಹೇಳಿಕೆ ಕೊಡ್ತಿದ್ದಾರೆ ಇದರ ಬಗ್ಗೆ ಗಮನ ಹರಿಸುವಂತೆಯೂ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲ್ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ