ರಾಜಕೀಯ ಮುನಿಸು ಮರೆತ ನಾರಾಯಣಗೌಡ – ಕುಮಾರಸ್ವಾಮಿ: ಹೆಚ್​ಡಿಕೆಯ ಹಾಡಿಹೊಗಳಿದ ಮಾಜಿ ಸಚಿವ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸುವುದು ಅಧಿಕೃತವಾದ ಬೆನ್ನಲ್ಲೇ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ಜತೆ ಸಮನ್ವಯ ಸಾಧಿಸುವ ಕೆಲಸ ಆರಂಭಿಸಿದ್ದಾರೆ. ಇದರ ಮೊದಲ ಯತ್ನವಾಗಿ ಮಾಜಿ ಸಚಿವ ಕೆಸಿ ನಾರಾಯಣಗೌಡ ಜತೆ ಸಂಧಾನ ನಡೆಸಿ ಯಶಸ್ವಿಯಾಗಿದ್ದಾರೆ. ಕುಮಾರಸ್ವಾಮಿ ಬಗ್ಗೆ ನಾರಾಯಣಗೌಡ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. ಅದೇನೆಂದು ಮುಂದೆ ಓದಿ.

ರಾಜಕೀಯ ಮುನಿಸು ಮರೆತ ನಾರಾಯಣಗೌಡ - ಕುಮಾರಸ್ವಾಮಿ: ಹೆಚ್​ಡಿಕೆಯ ಹಾಡಿಹೊಗಳಿದ ಮಾಜಿ ಸಚಿವ
ನಾರಾಯಣಗೌಡ & ಕುಮಾರಸ್ವಾಮಿ
Follow us
Sunil MH
| Updated By: Ganapathi Sharma

Updated on: Mar 27, 2024 | 9:58 AM

ಬೆಂಗಳೂರು, ಮಾರ್ಚ್​ 27: ಲೋಕಸಭೆ ಚುನಾವಣೆಗೆ (Lok Sabha Elections) ಬಿಜೆಪಿ ಜೆಡಿಎಸ್ ಮೈತ್ರಿ (BJP JDA Alliance) ಅಭ್ಯರ್ಥಿಯಾಗಿ ಹೆಚ್​ಡಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವುದು ಖಚಿತವಾದ ಬೆನ್ನಲ್ಲೇ ಮಂಡ್ಯ (Mandya) ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಂಡ್ಯ ಲೋಕಸಭಾ ಕ್ಷೇತ್ರ ಗೆಲ್ಲಲು ಸಂಧಾನ ಸೂತ್ರಕ್ಕೆ ಕುಮಾರಸ್ವಾಮಿ ಮೊರೆಹೋಗಿದ್ದಾರೆ. ವಿಶೇಷವೆಂದರೆ, ರಾಜಕೀಯವಾಗಿ ಮುನಿಸಿಕೊಂಡಿದ್ದ ಬಿಜೆಪಿ ನಾಯಕ ಕೆಸಿ ನಾರಾಯಣಗೌಡ ಹಾಗೂ ಕುಮಾರಸ್ವಾಮಿ ಇದೀಗ ಒಂದಾಗಿದ್ದಾರೆ. ಅಷ್ಟೇ ಏಕೆ, ನನ್ನ ರಾಜಕೀಯ ಜೀವನ ಆರಂಭವಾಗಿದ್ದೇ ನಿಮ್ಮಿಂದ, ನಿಮ್ಮ ಗೆಲುವಿಗೆ ಶ್ರಮಿಸುವೆ ಎಂದು ಕುಮಾರಸ್ವಾಮಿಗೆ ಮಾಜಿ ಸಚಿವ ಕೆಸಿ ನಾರಾಯಣಗೌಡ ಭರವಸೆ ನೀಡಿದ್ದಾರೆ!

ಕುಮಾರಸ್ವಾಮಿ ಮತ್ತು ನಾರಾಯಣಗೌಡ ನಡುವೆ ಸಂಧಾನ ಯಶಸ್ವಿಯಾಗಿದೆ. ಜೆಡಿಎಸ್​ನ ಸಿಎಸ್ ಪುಟ್ಟರಾಜು, ಅಶ್ವಥ್ ನಾರಾಯಣ್ ಉಭಯ ನಾಯಕರ ನಡುವೆ ಸಂಧಾನ ಮಾಡಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ, ಮಂಡ್ಯದಲ್ಲಿ ಕಾಂಗ್ರೆಸ್ ಓಟಕ್ಕೆ ತಡೆಯೊಡ್ಡಲು ಬಿಜೆಪಿಯ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ. ಇದರ ಮೊದಲ ಭಾಗವಾಗಿಯೇ ಮಾಜಿ ಸಚಿವ ನಾರಾಯಣಗೌಡ ಮನವೊಲಿಕೆ ಮಾಡಲಾಗಿದೆ.

ಏನಂದರು ನಾರಾಯಣಗೌಡ?

ಎಲ್ಲರೂ ಒಟ್ಟಾಗಿ ನಿಮ್ಮನ್ನು ಗೆಲ್ಲಿಸಲು ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿಗೆ ನಾರಾಯಣಗೌಡ ಭರವಸೆ ನೀಡಿದ್ದಾರೆ. ಮಂಡ್ಯದಲ್ಲಿ ಬೃಹತ್ ಜಂಟಿ ಸಮಾವೇಶ ಮಾಡುವ ಮೂಲಕ ಸಮನ್ವಯ ಸಂದೇಶ ನೀಡೋಣ ಎಂದು ಸಲಹೆಯನ್ನೂ ನೀಡಿದ್ದಾರೆ. ಇದೇ ವೇಳೆ, ನನ್ನ ಗೆಲುವಿಗಿಂತ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ ಮಂಡ್ಯ ಎನ್​​​ಡಿಎ ಉಸ್ತುವಾರಿಯನ್ನು ಜೆಡಿಎಸ್ ನಾಯಕನ ಜೊತೆ ನೀವು ವಹಿಸಿಕೊಳ್ಳಿ ಎಂದು ಕುಮಾರಸ್ವಾಮಿ ನಾರಾಯಣಗೌಡರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನಾರಾಯಣಗೌಡ, ನೀವು ನನಗೆ ಮನವಿ ಮಾಡಬೇಡಿ. ನನ್ನ ರಾಜಕೀಯ ಆರಂಭವಾಗಿದ್ದೇ ನಿಮ್ಮಿಂದ. ನಿಮ್ಮ ಗೆಲುವಿಗಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಸ್ಪರ್ಧೆ ಹಿಂದೆ ಕುಮಾರಸ್ವಾಮಿಯ ಹಲವು ರಾಜಕೀಯ ಲೆಕ್ಕಾಚಾರ!

ಮುಂದೆ ಹಾಲಿ ಸಂಸದೆ ಸುಮಲತಾ ಜತೆಗೂ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಕುಮಾರಸ್ವಾಮಿ ಉದ್ದೇಶಿಸಿದ್ದಾರೆ. ಶೀಘ್ರದಲ್ಲೇ ಸಂಸದೆ ಸುಮಲತಾ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ. ಈ ಮಧ್ಯೆ, ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವಿಗೆ ಪಣತೊಟ್ಟಿರುವ ಜೆಡಿಎಸ್ ಮುಖಂಡರು ಸುಮಲತಾ ಮಾತ್ರವಲ್ಲದೆ, ಸಂಘರ್ಷವಿರುವ ಎಲ್ಲಾ ಬಿಜೆಪಿ ಮುಖಂಡರ ಸಂಧಾನಕ್ಕೆ ಭಾರಿ ಪ್ರಯತ್ನ ಮಾಡುತ್ತಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ನಡೆದಿತ್ತು ವಾಕ್ಸಮರ

ಕಳೆದ ವರ್ಷ ವಿಧಾನಸಭೆ ಚುನಾವಣೆ ನಾರಾಯಣಸ್ವಾಮಿ ಮತ್ತು ಕುಮಾರಸ್ವಾಮಿ ಮಧ್ಯೆ ತೀವ್ರ ವಾಕ್ಸಮರ ಏರ್ಪಟ್ಟಿದ್ದು ಕೂಡ ಗಮನಾರ್ಹ

ಇದನ್ನೂ ಓದಿ: ಟಿಕೆಟ್​​ ಕೊಡಿಸಿದ್ದು ನಾನು, ಕುತ್ತಿಗೆ ಕೊಯ್ದು ಹೋದವನು ನೀನು: ಸಚಿವ ನಾರಾಯಣಗೌಡ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ