ಕೌತುಕ ಸೃಷ್ಟಿಸಿದ ಮಂಡ್ಯ ಲೋಕಸಭಾ ಅಖಾಡ; ಹೈಕಮಾಂಡ್​ ಘೋಷಣೆಗೂ ಮುನ್ನ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಒಂದೆಡೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಇನ್ನೊಂದೆಡೆ, ಹೈಕಮಾಂಡ್ ಘೋಷಣೆಗೂ ಮುನ್ನ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಅವರ ಪರ ಪ್ರಚಾರವನ್ನೂ ಆರಂಭಿಸಿದ್ದಾರೆ.

ಕೌತುಕ ಸೃಷ್ಟಿಸಿದ ಮಂಡ್ಯ ಲೋಕಸಭಾ ಅಖಾಡ; ಹೈಕಮಾಂಡ್​ ಘೋಷಣೆಗೂ ಮುನ್ನ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ
ಹೈಕಮಾಂಡ್​ ಘೋಷಣೆಗೂ ಮುನ್ನವೇ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ
Follow us
ಪ್ರಶಾಂತ್​ ಬಿ.
| Updated By: Rakesh Nayak Manchi

Updated on:Feb 22, 2024 | 8:33 AM

ಮಂಡ್ಯ, ಫೆ.22: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ (Mandya) ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಒಂದೆಡೆ ಬಿಜೆಪಿ-ಜೆಡಿಎಸ್ (BJP JDS) ಮೈತ್ರಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಇನ್ನೊಂದೆಡೆ, ಹೈಕಮಾಂಡ್ ಘೋಷಣೆಗೂ ಮುನ್ನ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ (Ravikumar Ganiga) ಅವರು ಮಂಡ್ಯದ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಅವರ ಪರ ಪ್ರಚಾರವನ್ನೂ ಆರಂಭಿಸಿದ್ದಾರೆ.

ನಾಗಮಂಗಲದ ಉದ್ಯಮಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕ್ಷೇತ್ರದ ಮತದಾರರಿಗೆ ಶಾಸಕರ ರವಿ ಗಣಿಗ ಅವರು ಪರಿಚಯ ಮಾಡಿಕೊಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಸ್ಟಾರ್ ಚಂದ್ರು ಅವರನ್ನು ನಿಲ್ಲಿಸುತ್ತಿದ್ದೇವೆ. ಆಶೀರ್ವಾದ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ರಂಗೇರಿದ ಲೋಕ ಅಖಾಡ; ಒಂದೇ ವೇದಿಕೆಯಲ್ಲಿ ಕಾಣಿಸ್ಕೊಂಡ ಮೂರು ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳು

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಟಾರ್ ಚಂದ್ರು

ಸ್ಟಾರ್ ಚಂದ್ರು ಅವರನ್ನು ಜನರಿಗೆ ಪರಿಚಯಿಸಲು ಸರ್ಕಾರಿ ಕಾರ್ಯಕ್ರಮಗಳನ್ನೂ ಶಾಸಕರು ಬಳಕೆ ಮಾಡುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರುವ ಸ್ಟಾರ್ ಚಂದ್ರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿದ್ದರು. ಗುದ್ದಲಿ ಪೂಜೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಶಾಸಕರು ತಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗುತ್ತಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Thu, 22 February 24

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್