ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ

ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್​ ಭದ್ರಕೋಟಯನ್ನು ಛಿದ್ರಗೊಳಿಸುರುವ ಕಾಂಗ್ರೆಸ್, ಇದೀಗ ಮನ್ಮುಲ್ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸಿದೆ.

ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ
ಜೆಡಿಎಸ್​​, ಕಾಂಗ್ರೆಸ್​
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ರಮೇಶ್ ಬಿ. ಜವಳಗೇರಾ

Updated on: Jul 03, 2023 | 2:34 PM

ಮಂಡ್ಯ: ಮಂಡ್ಯದ ಮನ್ಮುಲ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 6ರಂದು ಮನ್ಮುಲ್(Mandya Manmul) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮನ್ಮುಲ್ ಹಾಲು ಒಕ್ಕೂಟ  12 ನಿರ್ದೇಶಕರನ್ನು ಹೊಂದಿದ್ದು, 12ರಲ್ಲಿ 7 ಜೆಡಿಎಸ್ ಬೆಂಬಲಿತ ಹಾಗೂ 3 ಕಾಂಗ್ರೆಸ್ ಬೆಂಬಲಿತ ಇಬ್ಬರು ಬಿಜೆಪಿ ಬೆಂಬಲಿತ ನಿರ್ದೇಶಕರು ಇದ್ದು, ಅಧ್ಯಕ್ಷ ಸ್ಥಾನಕ್ಕೆ ಮೂವರು ಸರ್ಕಾರಿ ಅಧಿಕಾರಿಗಳು ಹಾಗೂ 1 ನಾಮನಿರ್ದೇಶಿತ ಸದಸ್ಯ ಸೇರಿ ಒಟ್ಟು 16 ಜನರಿಗೆ ಮತದಾನದ ಹಕ್ಕು ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಭದ್ರಕೋಟೆಯಾಗಿದ್ದ ಮಂಡ್ಯವನ್ನು ಛಿದ್ರಗೊಳಿಸಿರುವ ಕಾಂಗ್ರೆಸ್, ಇದೀಗ ಮಂಡ್ಯದ ಮನ್ಮುಲ್ ವಶಕ್ಕೆ ಪಡೆದುಕೊಳ್ಳಲು ರಣತಂತ್ರ ರೂಪಿಸಿದೆ.

ಇದನ್ನೂ ಓದಿ: ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್

ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಪೈಪೋಟಿ ಶುರುವಾಗಿದ್ದು, 2 ಪಕ್ಷಗಳಿಗೂ ಬಿಜೆಪಿ ಬೆಂಬಲಿತರ ನಿರ್ದೇಶಕರ ಬೆಂಬಲ ಅನಿವಾರ್ಯವಾಗಿದೆ. ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್​ ಉಮ್ಮಡಹಳ್ಳಿ ಶಿವಪ್ಪಗೆ ಜೆಡಿಎಸ್​ನ ​ನೆಲ್ಲಿಗೆರೆ ಬಾಲು ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

2018ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಕ್ಲೀನ್​ ಸ್ವಿಪ್​ ಮಾಡಿದ್ದ ಜೆಡಿಎಸ್‌, ಈಗ ಒಂದು ಸ್ಥಾನಕ್ಕೆ ಕುಸಿದು ತನ್ನ ಪ್ರಾಬಲ್ಯವನ್ನು ಕಳೆದುಕೊಂಡಿದೆ. ಇದರ ಮಧ್ಯೆ ಇದೀಗ ಮನ್‌ಮುಲ್‌ ಆಡಳಿತ ಚುಕ್ಕಾಣಿಯನ್ನುಕಳೆದುಕೊಳ್ಳುವ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ