AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sumalatha Ambareesh on BJP: ಮೋದಿಗೆ ಜೈ ಎಂದ ಸುಮಲತಾ, ಬಿಜೆಪಿಗೆ ಅಧಿಕೃತ ಬಾಹ್ಯ ಬೆಂಬಲ ಘೋಷಿಸಿದ ಪಕ್ಷೇತರ ಸಂಸದೆ

ಬಿಜೆಪಿ ಸೇರುತ್ತಾರೆ ಇಲ್ಲ ಕಾಂಗ್ರೆಸ್​ ಸೇರ್ಪಡೆಯಾಗುತ್ತಾರೆ ಎನ್ನುವ ಚರ್ಚೆ, ಗೊಂದಲಗಳಿಗೆ ಸುಮಲತಾ ಅಂಬರೀಶ್​ ತೆರೆ ಎಳೆದಿದ್ದಾರೆ. ಮಂಡ್ಯದಲ್ಲಿ ಪ್ರತಿಕಾಗೋಷ್ಠಿ ಮೂಲಕ ತಮ್ಮ ಮುಂದಿನ ರಾಜಕೀಯ ನಿಲುವು ಪ್ರಕಟಿಸಿದರು. ಹಾಗಾದ್ರೆ ಸುಮಲತಾ ಅಂಬರೀಶ್ ಏನೆಲ್ಲ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 10, 2023 | 2:57 PM

ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಅವರ ರಾಜಕೀಯ ನಡೆ ಬಹಿರಂಗವಾಗಿದ್ದು, ಸದ್ಯಕ್ಕೆ ಬಾಹ್ಯ ಬೆಂಬಲ ಘೋಷಿಸಿದರು. ಇಂದು(ಮಾರ್ಚ್ 10) ಮಂಡ್ಯದ ಚಾಮುಂಡೇಶ್ವರಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಮಲತಾ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ. ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಮೋದಿ ನಾಯಕತ್ವವನ್ನು ನಾನು ನಂಬಿದ್ದೇನೆ. ಈ ಕಾರಣಕ್ಕಾಗಿ ನಾನು ಬಿಜೆಪಿಗೆ ನಾನು ಬೆಂಬಲಿಸುವುದಾಗಿ ಬಹಿರಂಗವಾಗಿ ಘೋಷಿಸಿದರು. ಒಂದು ವೇಳೆ ಈಗಾಗಲೇ ಬಿಜೆಪಿ ಸೇರಿದರೆ ಸಂಸದೆ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಕಾನೂನು ತೊಡಕು ಮಾಡಿಕೊಳ್ಳದಿರಲು ತೀರ್ಮಾನಿಸಿದ್ದು, ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಬದಲು ಬಾಹ್ಯ ಬೆಂಬಲ ಘೋಷಣೆ ಮಾಡಿದರು.

ಇದನ್ನೂ ಓದಿ: Sumalatha Ambareesh Pressmeet Live: ಮಂಡ್ಯ ಎಂಪಿ ಸುಮಲತಾ ಅಂಬರೀಶ್​ ಪತ್ರಿಕಾ ಗೋಷ್ಠಿ ಲೈವ್​

ಸುದ್ದಿಗೋಷ್ಠಿಯಲ್ಲಿ ಸುಮಲತಾ ಅಂಬರೀಶ್‌, ಮಂಡ್ಯ ಜಿಲ್ಲೆಯಲ್ಲಿ ನಾಲ್ಕು ವರ್ಷಗಳಿಂದ ತಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟ ಅವರು, ಮೋದಿ ನಾಯಕತ್ವದಲ್ಲಿ ಮಾತ್ರವೇ ದೇಶದಲ್ಲಿ ಅಭಿವೃದ್ಧಿ ಸಾಧ್ಯ. ನನ್ನ ಹಲವು ಹೋಜನೆಗಳಿಗೆ ಕೇಂದ್ರದಿಂದ ಅಪಾರ ನೆರವು ಸಿಕ್ಕಿದೆ. ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದೇನೆ. ಬದಲಾವಣೆಗಾಗಿ ನನಗೆ ಇನ್ನಷ್ಟು ಶಕ್ತಿಯ ಅಗತ್ಯವಿದೆ ಎಂದು ಹೇಳುವ ಮೂಲಕ ಬಾಹ್ಯ ಬೆಂಬಲ ಘೋಷಣೆ ಮಾಡಿದರು.

ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ. ಸದ್ಯ ಬಿಜೆಪಿ ಸೇರ್ಪಡೆಗೆ ಕೆಲವು ತಾಂತ್ರಿಕ ತೊಂದರೆಗಳಿವೆ. ಮೋದಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ಹೊಂದಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಬಾಹ್ಯ ಬೆಂಬಲ ನೀಡಿತ್ತು. ಅಂಬರೀಶ್ ಹೆಸರಿಗೆ ಕಳಂಕ ತರುವ ಕೆಲಸ ನಾನು ಮಾಡುವುದಿಲ್ಲ. ಈ ಜನ್ಮದಲ್ಲಿ ನಾನೆಂದೂ ಕಳಂಕ ತರುವ ಕೆಲಸ ಮಾಡುವುದಿಲ್ಲ. ನಾನು ರಾಜಕಾರಣ ಬಿಡುತ್ತೇನೆ ಹೊರತು ಸ್ವಾಭಿಮಾನ ಬಿಡಲ್ಲ. ಪ್ರಾಣ ಬಿಟ್ಟರು ಕೂಡ ನಾನು ಮಂಡ್ಯ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮೋದಿಗೆ ಜೈ ಎಂದ ಸುಮಲತಾ ಅಂಬರೀಶ್, ಬಿಜೆಪಿಗೆ ಅಧಿಕೃತ ಬಾಹ್ಯ ಬೆಂಬಲ ಘೋಷಿಸಿದ ಪಕ್ಷೇತರ ಸಂಸದೆ 

ಅಭಿಷೇಕ್​ ಅಂಬರೀಶ್ ರಾಜಕೀಯ ಪ್ರವೇಶ ಗೊಂದಲಗಳಿಗೆ ತೆರೆ

ಸುಮಾರು ಒಂದು ವರ್ಷದಿಂದ ಬಿಜೆಪಿಯವರು ನನಗೆ ಆಹ್ವಾನ ನೀಡಿದ್ದಾರೆ. ನಾನೆಂದೂ ಕುಟುಂಬ ರಾಜಕಾರಣ ಮಾಡೋದಿಲ್ಲ. ಅಭಿಷೇಕ್‌ಗೆ ನಾನು ಎಲ್ಲಿಯೂ ಟಿಕೆಟ್‌ ಕೇಳಲ್ಲ. ಇದು ಚಾಮುಂಡೇಶ್ವರಿ ತಾಯಿಯ ಮೇಲೆ ಆಣೆ. ನಾನು ರಾಜಕಾರಣದಲ್ಲಿ ಇರುವವರೆಗೂ ಅಭಿಷೇಕ್‌ ಅಂಬರೀಶ್‌ ರಾಜಕಾರಣಕ್ಕೆ ಬರುವುದಿಲ್ಲ. ನನ್ನ ಮಗನ ಭವಿಷ್ಯವನ್ನು ಚಾಮುಂಡಿ ತಾಯಿಯೇ ನೋಡಿಕೊಳ್ಳುತ್ತಾಳೆ. ಚುನಾವಣೆಗೆ ನಿಲ್ಲುವಂತೆ ಅಭಿಷೇಕ್‌ಗೆ ಎರಡು ಪಕ್ಷಗಳಿಂದ ಆಹ್ವಾನ ಬಂದಿತ್ತು.  ಆದ್ರೆ, ನನ್ನ ಪುತ್ರ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರಲ್ಲ. ನಾನು ಎಲ್ಲಿಯವರೆಗೂ ರಾಜಕೀಯದಲ್ಲಿ ಇರುತ್ತೇನೋ ಅಲ್ಲಿವರೆಗೂ ಅಭಿಷೇಕ್​ ರಾಜಕಾರಣಕ್ಕೆ ಬರಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು. ಈ ಮೂಲಕ ಪುತ್ರ ಅಭಿಷೇಕ್ ಅಂಬರೀಶ್ ಅವರು ರಾಜಕೀಯಕ್ಕೆ ಬರುತ್ತಾರೆ ಎನ್ನುವ ಗೊಂದಲಗಳೀಗೆ ತೆರೆ ಎಳೆದರು.

ಇದನ್ನೂ ಓದಿ: ಸುಮಲತಾ ಅಂಬರೀಶ್​ ಬಿಜೆಪಿ ಸೇರಿದ್ರೆ ಸಂಸದೆ ಸ್ಥಾನದಿಂದ ಅನರ್ಹ ? ಕಮಲ ಮುಡಿಯಲು ಹೊರಟ ಮಂಡ್ಯ ಗೌಡ್ತಿಗೆ ಕಾನೂನು ತೊಡಕು!

ಪರೋಕ್ಷವಾಗಿ ಜೆಡಿಎಸ್​ ಸೋಲಿಸಲು ಕರೆ ಕೊಟ್ಟ ಗೌಡ್ತಿ

ಬಿಜೆಪಿ ಸರ್ಕಾರ ನಮ್ಮ ಅನೇಕ ಮನವಿಗೆ ಸ್ಪಂದಿಸಿ ನೆರವು ನೀಡಿದೆ. ಬಿಜೆಪಿ ಸರ್ಕಾರ ಮೈಶುಗರ್ ಕಾರ್ಖಾನೆ ಪುನಾರಂಭ ಮಾಡಿದೆ.ಹಲವು ಪಕ್ಷಗಳು ಅಧಿಕಾರಕ್ಕೆ ಬಂದಿದ್ದರೂ ಏನೂ ಮಾಡಿರಲಿಲ್ಲ. ನನೆಗುದಿಗೆ ಬಿದ್ದಿದ್ದ ಮೈಶುಗರ್ ಕಾರ್ಖಾನೆ ಪುನಾರಂಭಿಸಿದ್ದು ಬಿಜೆಪಿ ಎಂದಿರುವ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಗೆ ಇಂದು ಬದಲಾವಣೆಯ ಅಗತ್ಯವಿದೆ.. ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಸ್ವಚ್ಛತೆಯ ಅಗತ್ಯವಿದೆ. ಕಲುಷಿತ ರಾಜಕಾರಣ ಸ್ವಚ್ಛತೆಗೊಳಿಸಲು ಅಭಿಯಾನ ನಡೆಸೋಣ ಎಂದು ಹೇಳುವ ಮೂಲಕ ಮಂಡ್ಯದಲ್ಲಿ ಜೆಡಿಎಸ್​ ಸೋಲಿಸಲು ಕರೆ ನೀಡಿದರು.

Published On - 1:53 pm, Fri, 10 March 23

ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ