ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಕಾರಣಗಳೇನು? ಇಲ್ಲಿವೆ ನೋಡಿ ಕೆಲ ಅಂಶಗಳು

|

Updated on: Apr 03, 2024 | 4:53 PM

Sumalatha Ambareesh: ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಲ್ಲೇ ತಮ್ಮ ಮುಂದಿನ ರಾಜಕೀಯ ನಡೆ ಏನು ಎನ್ನುವುದನ್ನು ಮಹತ್ವದ ನಿರ್ಧಾರವನ್ನು ತಿಳಿಸಿದ್ದಾರೆ. ಬೆಂಬಲಿಗರ ಸಭೆಯಲ್ಲಿ ಭಾವುಕರಾಗಿಯೇ ಮಾತನಾಡಿದ ಅವರು ನಾನು ಈ‌ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಆದರೆ ಮಂಡ್ಯ ಬಿಟ್ಟು ನಾನು‌ ಹೋಗಲ್ಲ. ಕಾಂಗ್ರೆಸ್ ಪಕ್ಷದ ಕಡೆ ಹೋಗುವುದಿಲ್ಲ. ಬಿಜೆಪಿ ಸೇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಇನ್ನು ಸಮುಲತಾ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಕೆಲ ಕಾರಣಗಳನ್ನು ಸಹ ನೀಡಿದ್ದು, ಅವು ಈ ಕೆಳಗಿನಂತಿದೆ.

ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಕಾರಣಗಳೇನು? ಇಲ್ಲಿವೆ ನೋಡಿ ಕೆಲ ಅಂಶಗಳು
ಸುಮಲತಾ ಅಂಬರೀಶ್
Follow us on

ಮಂಡ್ಯ, (ಏಪ್ರಿಲ್ 03): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮಂಡ್ಯ ಕ್ಷೇತ್ರದಿಂದ (Mandya Lok Sabha constituency) ಸ್ಪರ್ಧೆ ಮಾಡಲ್ಲ ಎಂದಿರುವ ಹಾಲಿ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಣೆ  ಮಾಡಿದ್ದಾರೆ. ಇಂದು (ಏಪ್ರಿಲ್ 03) ಬೆಂಬಲಿಗರ ಸಭೆಯಲ್ಲಿ ಭಾವುಕರಾಗಿಯೇ ಮಾತನಾಡಿದ ಸುಮಲತಾ, ಮಾತಿನ ಉದ್ಧಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮನಸಾರೆ ಹೊಗಳಿದರು. ಆದರೆ, ಕುಮಾರಸ್ವಾಮಿ ಪರ ಪ್ರಚಾರ ಮಾಡುವ ಬಗ್ಗೆ ಒಂದೇ ಒಂದು ಮಾತನಾಡದಿರುವುದು ಅಚ್ಚರಿಕೆ ಕಾರಣವಾಗಿದೆ. ಈ ಮೂಲಕ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ನಡುವಿನ ರಾಜಕೀಯ ಮುಸುಕಿನ ಗುದ್ದಾಟ ಮುಂದುವರೆದಂತಿದೆ. ಇನ್ನು ಇದೇ ವೇಳೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಗೆ ಕೆಲ ಕಾರಣಗಳನ್ನು ಸಹ ನೀಡಿದ್ದಾರೆ.

ಬಿಜೆಪಿ ಸೇರಲು ಸುಮಲತಾ ಕೊಟ್ಟಿರುವ ಕಾರಣಗಳು

  • ದೇಶದ ಪ್ರಧಾನಿ ನರೇಂದ್ರ ಮೋದಿ ಪ್ರತಿ ವಿಚಾರದಲ್ಲೂ ನನ್ನ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ.
  • ನಾಲ್ಕು ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡುವ ಮೂಲಕ ಮಂಡ್ಯದ ಅಭಿವೃದ್ಧಿಗೆ ಸಹಾಕಾರ.
  • ನೀಡಿದೆ.ಮುಂದಿನ ದಿನಗಳಲ್ಲಿ ಮಂಡ್ಯಕ್ಕೆ ಅಭಿವೃದ್ಧಿ ಆಗುತ್ತೆ.
  • ಕಾಂಗ್ರೆಸ್​​ನವರೇ ನನ್ನ ಬೇಡ ಎಂದು ಹೇಳಿದ್ದಾರೆ.
  • ಮಂಡ್ಯದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದರೆ ಗೆಲುವು ಕಷ್ಟ.
  • ನಾನು ಬಿಜೆಪಿಗೆ ಸೇರಿದರೆ ಮುಂದೆವು ನನ್ನ ಮಾತು ನಡೆಯುತ್ತಿದೆ.
  • ಬಿಜೆಪಿ ಅಭಿವೃದ್ಧಿ ಕಾರ್ಯಗಳು
  • ಬಿಜೆಪಿ ಪಕ್ಚದವರು ನಡೆದುಕೊಳ್ಳುವ ನೀತಿ
  • ಕಾರ್ಯಕರ್ತರ ಭವಿಷ್ಯ

ಮೋದಿ ನನಗೆ ಸಾಕಷ್ಟು ಗೌರವವನ್ನು ನೀಡಿದ್ದಾರೆ

ಇಂದು ದೇಶಕ್ಕೆ ಉತ್ತಮ ಪ್ರಧಾನಿ ಸಿಕ್ಕಿದ್ದಾರೆ. ದೇಶ ಸಂಕಷ್ಟದ ಕಾಲದಲ್ಲಿದ್ದಾಗ ಅವರು ಅಧಿಕಾರವನ್ನು ವಹಿಸಿಕೊಂಡರು. ಆರ್ಥಿಕತೆಯಲ್ಲಿ ದೇಶವನ್ನು ಉತ್ತಮ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಇಷ್ಟು ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ನರೇಂದ್ರ ಮೋದಿ ಅವರ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲ. ಅವರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಅಂಥವರನ್ನು ನಾವು ಬೆಂಬಲಿಸಬೇಕು. ದೇಶಕ್ಕಾಗಿ ನಾವು ಮೋದಿ ಅವರನ್ನು ಆಯ್ಕೆ ಮಾಡಬೇಕು. ಅಲ್ಲದೆ, ನಾನು ಪಕ್ಷೇತರ ಸಂಸದೆಯಾಗಿದ್ದರೂ ಅವರು ನನಗೆ ಸಾಕಷ್ಟು ಗೌರವವನ್ನು ನೀಡಿದ್ದಾರೆ. ಮಂಡ್ಯದಲ್ಲಿ ಸ್ಪರ್ಧೆ ವಿಚಾರ ಬಂದಾಗ ನನ್ನನ್ನು ಕರೆಸಿಕೊಂಡು ಪಕ್ಷೇತರವಾಗಿ ಸ್ಪರ್ಧೆ ಮಾಡುವುದು ಬೇಡ ಎಂದು ಹೇಳಿದ್ದಾರೆ. ನನ್ನ ಕ್ಷೇತ್ರದ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಿಕೊಟ್ಟರು. ಒಬ್ಬ ಪ್ರಧಾನಿಯೇ ಹೀಗೆ ಗೌರವ ಕೊಡುವಾಗ ನನಗೆ ಇನ್ನೇನು ಬೇಕು? ಹೀಗಾಗಿ ಈ ತೀರ್ಮಾನವನ್ನು ಕೈಗೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Sumalatha Ambareesh: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ

ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?

ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕಿದರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಶ್‌, ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ನಾನು ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಮತ್ತೆ ಕೆಲವರು ಚಪ್ಪಾಳೆ, ಶಿಳ್ಳೆ ಹಾಕಿ ಸಂಭ್ರಮಿಸಿದರು. ಅದು ನಿಮಗೆ ಕೇಳಲಿಲ್ಲವೇ? ಎಂದು ಮರು ಪ್ರಶ್ನೆಯನ್ನು ಹಾಕಿದರು. ನೋಡಿ, ಯಾವುದೇ ವಿಷಯದಲ್ಲಿಯಾದರೂ ಯಾರನ್ನೂ ನೂರಕ್ಕೆ ನೂರು ಮೆಚ್ಚಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರಿಗೆ ಈಗ ಅಸಮಾಧಾನ ಆಗಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಅಂಬರೀಶ್‌ ಅವರ ಅಭಿಮಾನಿಗಳು ಸದಾ ನನ್ನ ಬೆನ್ನ ಹಿಂದೆ ಇರಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಸಮಜಾಯಿಷಿ ನೀಡಿದರು.

ಹೀಗೆ ಸುಮಲತಾ ಅಂಬರೀಶ್ ಅವರು ತಮ್ಮ ಭಾಷಣದಲ್ಲಿ ಬಿಜೆಪಿ ಸೇರುವ ಬಗ್ಗೆ ಹಲವು ಅಂಶಗಳನ್ನು ಬಿಚ್ಚಿಟ್ಟಿದ್ದು, ಈ ವಾರದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಆದ್ರೆ,  ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದರ ಬಗ್ಗೆ ಒಂದೇ ಒಂದು ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:58 pm, Wed, 3 April 24