ಪಕ್ಷೇತರರಾಗಿಯೇ ಇದ್ದರೆ ಬೆಂಬಲಿಗರಿಗೆ ಸಹಾಯ ಮಾಡಲಾಗಲ್ಲ; ಸುಮಲತಾ ಅಂಬರೀಶ್

ವಾರದ ಒಳಗಾಗಿ ಮತ್ತೊಂದು ಸಭೆ ನಡೆಸಲು ಸುಮಲತಾ ನಿರ್ಧರಿಸಿದ್ದಾರೆ. ಆ ಸಭೆಯಲ್ಲಿ ನಿರ್ಧಾರ ಕೈಗೊಂಡು ಅಲ್ಲಿಯೇ ಪಕ್ಷ ಸೇರ್ಪಡೆ ಬಗ್ಗೆ ಅವರು ಘೋಷಣೆ ಮಾಡಲಿದ್ದಾರೆ.

Follow us
Ganapathi Sharma
|

Updated on:Mar 04, 2023 | 10:17 PM

ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಿಜೆಪಿ (BJP) ಸೇರಲಿದ್ದಾರಂತೆ ಎಂಬ ಊಹಾಪೋಹಗಳ ನಡುವೆಯೇ ಪಕ್ಷ ಸೇರ್ಪಡೆ ವಿಚಾರವಾಗಿ ಬೆಂಬಲಿಗರ ಜತೆ ಅವರು ಶನಿವಾರ ಸಭೆ ನಡೆಸಿದರು. ಆದರೆ, ಯಾವುದೇ ತೀರ್ಮಾನಕ್ಕೆ ಬರುವಲ್ಲಿ ಅವರು ವಿಫಲರಾಗಿದ್ದಾರೆ. ಪಕ್ಷ ಸೇರ್ಪಡೆ ವಿಚಾರವಾಗಿ ಸುಮಲತಾ ಅವರು ಬೆಂಬಲಿಗರ ಅಭಿಪ್ರಾಯ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೆಂಬಲಿಗರು, ಪಕ್ಷ ಸೇರ್ಪಡೆ ಬಗ್ಗೆ ನೀವೇ ನಿರ್ಧಾರಕ್ಕೆ ಬನ್ನಿ ಎಂದು ಆಯ್ಕೆಯನ್ನು ಸುಮಲತಾ ಅವರಿಗೇ ಬಿಟ್ಟಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಮತ್ತೊಂದು ಬೃಹತ್ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಸುಮಲತಾ ನಿರ್ಧರಿಸಿದ್ದಾರೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ವಾರದ ಒಳಗಾಗಿ ಮತ್ತೊಂದು ಸಭೆ ನಡೆಸಲು ಸುಮಲತಾ ನಿರ್ಧರಿಸಿದ್ದಾರೆ. ಆ ಸಭೆಯಲ್ಲಿ ನಿರ್ಧಾರ ಕೈಗೊಂಡು ಅಲ್ಲಿಯೇ ಪಕ್ಷ ಸೇರ್ಪಡೆ ಬಗ್ಗೆ ಅವರು ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ಸಲವೂ ಪಕ್ಷೇತರರಾಗಿ ಸ್ಪರ್ಧೆ ನಿರೀಕ್ಷಿಸಲಾಗದು

ಪ್ರತಿ ಸಲವೂ ಪಕ್ಷೇತರರಾಗಿ ಸ್ಪರ್ಧೆ ನಿರೀಕ್ಷಿಸುವುದು ಮೂರ್ಖತನವಾಗುತ್ತದೆ. ಇದು ಬುದ್ಧಿವಂತಿಕೆ ಅನ್ನಿಸದು. ಕಾಂಗ್ರೆಸ್‌, ಬಿಜೆಪಿ ಅನ್ನುವುದಕ್ಕಿಂತ ಬೆಂಬಲಿಗರ ಹಿತ ಮುಖ್ಯ. ಪಕ್ಷೇತರರಾಗಿಯೇ ಇದ್ದರೆ ಬೆಂಬಲಿಗರಿಗೆ ಸಹಾಯ ಮಾಡಲಾಗುವುದಿಲ್ಲ. ಪಕ್ಷ ಸೇರ್ಪಡೆಯ ಬಗ್ಗೆ 15 ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಬೆಂಗಳೂರಿನಲ್ಲಿ ಸುಮಲತಾ ಅವರು ‘ಟಿವಿ9’ಗೆ ತಿಳಿಸಿದ್ದಾರೆ.

ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಬಗ್ಗೆ ಕಳೆದ ಕೆಲವು ದಿನಗಳಿಂದ ಊಹಾಪೋಹಗಳು ಹರಿದಾಡುತ್ತಿವೆ. ಅವರ ಕೆಲವು ನಡೆಗಳು ಈ ಕುರಿತ ಅನುಮಾನಕ್ಕೆ ಪುಷ್ಟಿ ನೀಡಿವೆ. ಈಗಾಗಲೇ ಬಿಜೆಪಿಯ ಕೆಲವು ನಾಯಕರೊಂದಿಗೆ ಕಾಣಿಸಿಕೊಂಡಿರು ಸುಮಲತಾ ಇಂದು (ಮಾರ್ಚ್ 4) ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಹಿರಿಯ ನಾಯಕ ಎಸ್​.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆದರೆ, ನಂತರ ಸ್ಪಷ್ಟನೆ ನೀಡಿದ್ದ ಅವರು, ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವ ಹಿನ್ನಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ತೆರಳಿದ್ದೆ. ಭೇಟಿ ವೇಳೆ ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚಿಸಿಲ್ಲ ಎಂದಿದ್ದಾರೆ.

‘ಬೆಂಬಲಿಗರ ಜತೆ ಚರ್ಚಿಸಿಯೇ ನಿರ್ಧಾರ’

ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಮಲತಾ, ನಾನು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನನ್ನ ಜತೆ ಇರುವವರ ಹಿತದೃಷ್ಟಿಯಲ್ಲಿಕೊಂಡೇ ನಿರ್ಧಾರ ಮಾಡಬೇಕಿದೆ. ಇನ್ನೂ ಹಲವರ ಜೊತೆ ಚರ್ಚೆ ಮಾಡಬೇಕು. ಹಿರಿಯರು, ಹಿತೈಷಿಗಳು, ಕುಟುಂಬಸ್ಥರು, ಪಕ್ಷೇತರವಾಗಿ ಸ್ಪರ್ಧಿಸುವಂತೆ ಹೇಳಿ ಬೆಂಬಲಿಸಿದ ನಾಯಕರ ಜೊತೆ ಚರ್ಚೆ ನಡೆಸಿಯೇ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಸ್​ಎಂ ಕೃಷ್ಣ ಭೇಟಿಯಾದ ಸಂಸದೆ ಸುಮಲತಾ; ಬಿಜೆಪಿ ಸೇರ್ಪಡೆ ಬಗ್ಗೆ ಏನಂದ್ರು ನೋಡಿ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಮಾರ್ಚ್ 12ರಂದು ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದು, ಅಂದು ನಡೆಯುವ ಸಮಾವೇಶದಲ್ಲಿಯೇ ಸುಮಲತಾ ಅವರು ಪಕ್ಷ ಸೇರಲಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಹರಿದಾಡಿತ್ತು. ಆದರೆ ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ ನೀಡಿದ್ದು, ಪ್ರಧಾನಿ ಬಂದಾಗ ಯಾರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಸೂಕ್ತ ಸಮಯದಲ್ಲಿ ನಿಮಗೆ ಎಲ್ಲಾ ವಿಷಯ ತಿಳಿಸಲಾಗತ್ತದೆ ಎಂದು ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 pm, Sat, 4 March 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ