ಕೇಸರಿ ಪಾಳಯದಲ್ಲಿ ಸುಮಲತಾ ಅಂಬರೀಶ್: ಸಂಚಲನ ಮೂಡಿಸಿದ ‘ಸ್ವಾಭಿಮಾನಿ’ ಸಂಸದೆಯ ರಾಜಕೀಯ ನಡೆ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ತಾರೆ ಎನ್ನುವ ಅಂತೆ-ಕಂತೆಗಳ ಸುದ್ದಿ ಕಳೆದ ಒಂದು ವರ್ಷದಿಂದ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಇದೀಗ 'ಸ್ವಾಭಿಮಾನಿ' ಸಂಸದೆಯ ಫೋಟೋ ಕೇಸರಿ ಪಾಳಯದಲ್ಲಿ ರಾರಾಜಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕೇಸರಿ  ಪಾಳಯದಲ್ಲಿ ಸುಮಲತಾ ಅಂಬರೀಶ್: ಸಂಚಲನ ಮೂಡಿಸಿದ 'ಸ್ವಾಭಿಮಾನಿ' ಸಂಸದೆಯ ರಾಜಕೀಯ ನಡೆ
Mandya BJP
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 29, 2022 | 4:03 PM

ಮಂಡ್ಯ: ಸಕ್ಕರೆ ನಾಡು ಮಂಡ್ಯ (mandya)ಗೆ ನಾಳೆ (ಡಿಸೆಂಬರ್ 30) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಗಮಿಸುತ್ತಿದ್ದಾರೆ.ಈ ಹಿನ್ನೆಲೆ ಮಂಡ್ಯ ನಗರ ಫುಲ್ ಕೇಸರಿಮಯವಾಗಿದೆ. ಜೊತೆಗೆ ಅಮಿತ್ ಶಾ ಅವರನ್ನು ಸ್ವಾಗತಿಸಿ ಹಾಕಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಫೋಟೋ ರಾರಾಜಿಸುತ್ತಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿದೆ.

ಇದನ್ನೂ ಓದಿ: Amit Shah: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ಅಮಿತ್ ಶಾ 3 ದಿನ ರಾಜ್ಯ ಪ್ರವಾಸ: ಇಲ್ಲಿದೆ ವೇಳಾಪಟ್ಟಿ

ಹೌದು… ನಾಳೆ(ಶುಕ್ರವಾರ) 11 ಗಂಟೆಗೆ ಮಂಡ್ಯಗೆ ಹೆಲಿಕಾಪ್ಟರ್ ಮೂಲಕ ಬರಲಿರುವ ಅಮಿತ್ ಶಾ, 11.15ಕ್ಕೆ ಗೆಜ್ಜಲಗೆರೆಯ ಮನ್‍ಮುಲ್‍ನ ಮೆಗಾ ಡೈರಿ ಉದ್ಘಾಟನೆ ಮಾಡಲಿದ್ದಾರೆ. ಇದರಿಂದ ಮಂಡ್ಯದ ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದೆ. ಜೊತೆಗೆ ಅಮಿತ್ ಶಾ ಸ್ವಾಗತಕ್ಕೆ ಕೋರುವ ಫ್ಲೆಕ್ಸ್ ಗಳು ಕೂಡ ರಾರಾಜಿಸುತ್ತಿವೆ. ಅಮಿತ್ ಶಾಗೆ ಸ್ವಾಗತ ಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಭಾವಚಿತ್ರವಿರುವುದು ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾದ ಆಪ್ತ ಇಂಡವಾಳು ಸಚ್ಚಿದಾನಂದ (Indavalu Sacchidananda) ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಹೇಳಿದ್ದ ಸಚ್ಚಿದಾನಂದ, ಇದೀಗ ಆಪ್ತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಇರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: Karnataka Assembly Election 2023: ತಮ್ಮ ಸಾಧನೆ ತಿಳಿಸಲು ಮನೆ ಮನೆಗೆ ಸಂಪರ್ಕ ಅಭಿಯಾನಕ್ಕೆ ಮುಂದಾದ ಬಿಜೆಪಿ

ಸಂಸದೆ ಸಮುಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಕಳೆದ ಒಂದು ವರ್ಷದಿಂದಲೂ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂಕರವೆಂಬಂತೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡವಾಳು ಸಚ್ಚಿದಾನಂದ ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದು, ಮುಂದಿನ ದಿನಗಳಲ್ಲಿ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಸೇರ್ತಾರೆ ಎನ್ನುವ ಅಂತೆ ಕಂತೆ ಸುದ್ದಿ ಇದೆ. ಇದೀಗ ಶಾ ಫೆಕ್ಸ್​ಗಳಲ್ಲಿ ಭಾವಚಿತ್ರದೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಸುಳಿವು ನೀಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇನ್ನು ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸುವಂತೆ ಹೈಕಮಾಂಡ್​ ರಾಜ್ಯ ನಾಯಕರಿಗೆ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು , ಹಳೇ ಮೈಸೂರು ಭಾಗದ ಬೇರೆ-ಬೇರೆ ಪಕ್ಷದ ಪ್ರಮುಖ ನಾಯಕರಿಗೆ ಗಾಳ ಹಾಕುತ್ತಿದೆ. ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸಲು ಸುಮಲತಾ ಅಂಬರೀಶ್ ಅವರಿಗೂ ಸಹ ಗಾಳ ಹಾಕಿದ್ದು, ಒಂದೆರಡು ಸುತ್ತಿನ ಮಾತುಕತೆಗಳು ಸಹ ನಡೆದಿವೆ ಎನ್ನಲಾಗಿದೆ. ಆದ್ರೆ, ಇದನ್ನು ಸ್ವತಃ ಸಂಸದೆ ಸುಮಲತಾ ಅವರು ಅಲ್ಲಗಳೆದಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ನಾಯಕರ ಫೆಕ್ಸ್​ನಲ್ಲಿ ಸ್ವಾಭಿಮಾನಿ ಸುಮಲತಾ ಅಂಬರೀಶ್ ಅವರ ಫೋಟೋ ರಾರಾಜಿಸುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಸಂಲಚನ ಮೂಡಿಸಿದ್ದು, ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ