ಲೋಕಸಭೆಯಲ್ಲಿ ಸುಮಲತಾ ಬರಪರಿಸ್ಥಿತಿ ಬಗ್ಗೆ ಪ್ರಸ್ತಾಪಿದ್ರೆ, ಜಾತಿ ಮೀಸಲಾತಿ ಕೊಡಿ ಎಂದ ಬಿಜೆಪಿ ಸಂಸದ

ಮಂಡ್ಯ ಪಕ್ಷೇತರ ಸಂಸದ ಸುಮಲತಾ ಅಂಬರೀಶ್ ಅವರು ಲೋಕಸಭಾ ಅಧಿವೇಶನದಲ್ಲಿಂದು ಕರ್ನಾಟಕದಲ್ಲಿ ಎದುರಾಗಿರುವ ಬರಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದ್ರೆ, ಮತ್ತೊಂದೆಡೆ ಬಿಜೆಪಿ ಸಂಸದರೊಬ್ಬರು ಜಾತಿ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ್ದಾರೆ.

Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 12, 2023 | 4:19 PM

ನವದೆಹಲಿ, (ಡಿಸೆಂಬರ್ 12): ಮಂಡ್ಯ ಪಕ್ಷೇತರ ಸಂಸದ ಸುಮಲತಾ ಅಂಬರೀಶ್ (Sumalatha Ambareesh) ಅವರು ಲೋಕಸಭಾ ಅಧಿವೇಶನದಲ್ಲಿಂದು (Loksabha Session 2023) ಕರ್ನಾಟಕದಲ್ಲಿ ಎದುರಾಗಿರುವ ಬರಪರಿಸ್ಥಿತಿ (drought) ಬಗ್ಗೆ ಪ್ರಸ್ತಾಪಿಸಿದ್ದಾರೆ. ಇಂದು(ಡಿಸೆಂಬರ್ 12) ಶೂನ್ಯವೇಳೆಯಲ್ಲಿ ಮಾತನಾಡಿದ ಸುಮಲತಾ, 2023ರಲ್ಲಿ ಇಂದೆಂದೂ ಕಾಣದ ಉಷ್ಣತೆ ಹೆಚ್ಚಾಗಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಮಾನ್ಸೂನ್ ಕ್ಷೀಣಿಸಿದೆ. ಇದರ ಪರಿಣಾಮ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿವೆ. ಅಂದಾಜು 30 ಸಾವಿರ ಕೋಟಿ‌ ರೂಪಾಯಿಯಷ್ಟು ನಷ್ಟವಾಗಿದೆ. ಹೀಗಾಗಿ ಕರ್ನಾಟಕದ ರೈತರಿಗೆ ನೆರವಾಗಬೇಕು ಎಂದು ಪ್ರಧಾನಿ ನರೇಂದ್ರ ಅವರಿಗೆ ಮನವಿ ಮಾಡಿದರು.

ಮಂಡ್ಯದ ಎಲ್ಲಾ ತಾಲೂಕುಗಳನ್ನು ಬರ ಪೀಡಿತವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. 60ರಿಂದ 70 ಪರ್ಸೆಂಟ್ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟದ ರೈತರ ನೆರವಿಗೆ ಧಾವಿಸಬೇಕು. ಅಲ್ಲದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Belagavi Session: ಮತ್ತೆ ಬಿಜೆಪಿಗೆ ಮುಜುಗರ ತರುವ ರೀತಿಯಲ್ಲಿ ಮಾತನಾಡಿದ ಯತ್ನಾಳ್

ಜಾತಿ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸಂಸದ

ಸುಮಲತಾ ಅಂಬರೀಶ್ ಅವರು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದರೆ, ಮತ್ತೊಂದೆ ಕಲಬುರಗಿ ಬಿಜೆಪಿ ಸಂಸದ ಜಾತಿ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ. ಲೋಕಸಭೆಯ ಶೂನ್ಯವೇಳೆಯಲ್ಲಿ ವೇಳೆಯಲ್ಲಿ ಮಾತನಾಡಿದ ಉಮೇಶ್ ಜಾಧವ್, ಕೋಲಿ, ಕಬ್ಬಲಿಗ, ಗಂಗಾಮತಸ್ಥ ಸಮುದಾಯವನ್ನು ಎಸ್​ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಓರ್ವ ಮಹಿಳಾ ಸಂಸದೆ ಕರ್ನಾಟಕದಲ್ಲಿನ ಭೀಕರ ಬರಪರಿಸ್ಥಿತಿಯನ್ನು ಸದನದಲ್ಲಿ ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ಗಮನ ಸೆಳೆದರೆ, ಬಿಜೆಪಿ ಸಂಸದ ಉಮೇಶ್ ಜಾಧವ್ ಮಾತ್ರ ಬರಪರಿಸ್ಥಿತಿ ಬಗ್ಗೆ ಒಂದು ಮಾತು ತುಟಿಕ್​ ಪಿಟಿಕ್​ ಎನ್ನದೇ ಕೇವಲ ಜಾತಿ ಮೀಸಲಾತಿ ಬಗ್ಗೆ ಮಾತನಾಡಿರುವುದು ದುರಂತ.

ಸುಮಲತಾ ಅಂಬರೀಶ್ ಅವರನ್ನು ಹೊರತುಪಡಿಸಿದರೆ ಈವರೆಗೂ ಕರ್ನಾಟಕದ ಯಾವೊಬ್ಬ ಸಂಸದ ರಾಜ್ಯದ ಬರಪರಿಸ್ಥಿತಿ ಬಗ್ಗೆ ಲೋಕಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿಲ್ಲ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 12 December 23

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್