AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ನಾಯಕತ್ವದ ಮೇಲೆ ಯಾವತ್ತಿಗೂ ನಂಬಿಕೆ ಇದೆ; ವದಂತಿಗಳನ್ನು ನಿರಾಕರಿಸಿದ ಸುಮಲತಾ ಕೊಟ್ಟ ವಿವರಣೆ ಇಲ್ಲಿದೆ ನೋಡಿ

ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಹರಡಿರುವ ವದಂತಿಗಳು ಮತ್ತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಅಲ್ಲಗಳೆದಿರುವ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಯಾವತ್ತಿಗೂ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಮೋದಿ ನಾಯಕತ್ವದ ಮೇಲೆ ಯಾವತ್ತಿಗೂ ನಂಬಿಕೆ ಇದೆ; ವದಂತಿಗಳನ್ನು ನಿರಾಕರಿಸಿದ ಸುಮಲತಾ ಕೊಟ್ಟ ವಿವರಣೆ ಇಲ್ಲಿದೆ ನೋಡಿ
ಸುಮಲತಾ
ಗಣಪತಿ ಶರ್ಮಾ
|

Updated on: May 22, 2023 | 5:52 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಹರಡಿರುವ ವದಂತಿಗಳು ಮತ್ತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಅಲ್ಲಗಳೆದಿರುವ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ (Sumalatha), ಪ್ರಧಾನಿ ನರೇಂದ್ರ ಮೋದಿ (Narendra Modi) ನಾಯಕತ್ವದಲ್ಲಿ ಯಾವತ್ತಿಗೂ ನಂಬಿಕೆ ಇದೆ ಎಂದು ಹೇಳಿದ್ದಾರೆ. ಜತೆಗೆ, ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಪರ ಎಲ್ಲೆಲ್ಲಿ ಪ್ರಚಾರ ಮಾಡಲಾಗಿದೆಯೋ ಅಲ್ಲೆಲ್ಲ ಕೇಸರಿ ಪಕ್ಷದ ಪರ ಮತ ಗಳಿಕೆ ಹೆಚ್ಚಾಗಿದೆ ಎಂಬುದನ್ನೂ ಒತ್ತಿಹೇಳಿದ್ದಾರೆ. ಬಿಜೆಪಿಗೆ ನೀಡಿರುವ ಬೆಂಬಲ ಮುಂದುವರಿಯಲಿದೆ ಎಂಬರ್ಥದಲ್ಲಿ ಬರಹವೊಂದನ್ನು ಟ್ವಿಟರ್​​​ನಲ್ಲಿ ಹಂಚಿಕೊಂಡಿದ್ದಾರೆ.

ಸುಮಲತಾ ಅವರ ಟ್ವಿಟರ್ ಬರಹದ ಪೂರ್ಣಪಾಠ ಇಲ್ಲಿದೆ;

‘ಕಪೋಕಲ್ಪಿತ ವರದಿ ಮಾಡುತ್ತಿರುವ ಕೆಲ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ವರದಿಗೆ ಇದು ನನ್ನ ಪ್ರತ್ಯುತ್ತರ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಚಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಿತು. ಪಕ್ಷವು ಘೋಷಣೆ ಮಾಡಿದ ನನ್ನ ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ಫಸ್ಟ್ ಟೈಮ್ ಚುನಾವಣೆ ಎದುರಿಸಿದವರು. ಆದರೂ ಎದುರಾಳಿಗಳ ವಿರುದ್ಧ ಸಮರ್ಥವಾಗಿ ಹೋರಾಟ ಮಾಡಿದ್ದಾರೆ. ಅಲ್ಲದೇ ಪ್ರಚಾರಕ್ಕೆ ನಮಗಿದ್ದದ್ದು ಎರಡ್ಮೂರು ವಾರಗಳಷ್ಟೇ ಸಮಯ. ಆದರೂ ಹೊಸ ಪಡೆಯನ್ನು ಕಟ್ಟಿಕೊಂಡು ಹೋರಾಟ ಮಾಡಿದ್ದೇವೆ. ಪರಿಣಾಮ ಮೊದಲ ಬಾರಿಗೆ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು ಮತ್ತು ಮಳವಳ್ಳಿಯಲ್ಲಿ ಬಿಜೆಪಿಗೆ ಮತಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.

ಆದರೆ, ಮಂಡ್ಯದಲ್ಲಿ ಮಾತ್ರವಲ್ಲ ಕರ್ನಾಟಕದಲ್ಲೇ ಆಡಳಿತ ವಿರೋಧಿ ಅಲೆ ಮತ್ತು ಕಾಂಗ್ರೆಸ್ ಅಲೆ ಹೆಚ್ಚಾಗಿದ್ದರಿಂದ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ. ಹಾಗಾಗಿ ಪಕ್ಷಕ್ಕೆ ಆಗಿರುವ ಸೋಲನ್ನು ಒಪ್ಪಿಕೊಂಡು, ಆತ್ಮಾವಲೋಕನದ ಜೊತೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಳ್ಳುತ್ತೇವೆ.

ಮಾರ್ಚ್ 10 ರಂದು ನಾನು ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ನಾನು ರಿಸ್ಕ್ ತಗೆದುಕೊಳ್ಳುತ್ತಿದ್ದೇನೆ. ಇದು ರಿಸ್ಕ್ ಎಂದು ನನಗೆ ಗೊತ್ತಿದೆ’ ಎಂದು ಮಾಧ್ಯಮಗಳ ಮುಂದೆಯೇ ಅವತ್ತೆ ಸ್ಪಷ್ಟ ಪಡಿಸಿದ್ದೆ. ಪಕ್ಷದ ಸೋಲಿಗೆ ಇಷ್ಟೆಲ್ಲ ಕಾರಣಗಳು ಇದ್ದರೂ, ನೀವು ನಿಮ್ಮದೇ ಆದ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತೀದ್ದೀರಿ. ಸುಳ್ಳು ಸಂದೇಶಗಳನ್ನು ಹರಡುತ್ತಿದ್ದೀರಿ. ನೀವೇ ಸುದ್ದಿಯನ್ನು ಸೃಷ್ಟಿಸಿ ಜನರಿಗೆ ತಪ್ಪು ಮಾಹಿತಿಯನ್ನು ನೀಡುವುದು ಎಷ್ಟು ಸರಿ?

ನಾನು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಲು ಇಷ್ಟಪಡುತ್ತೇನೆ. ಮುಂದಿನ ಚುನಾವಣೆಯಲ್ಲಿ ನನ್ನ ಭವಿಷ್ಯ ಅಥವಾ 24X7 ರಾಜಕಾರಣದ ಲೆಕ್ಕಾಚಾರ ಹಾಕುತ್ತಾ ಕೂರುವವಳು ನಾನಲ್ಲ. ನನ್ನ ಸ್ವಾರ್ಥದ ಬಗ್ಗೆ ಮಾತ್ರ ಯೋಚಿಸಿದ್ದರೆ ಬಹುಶಃ ನನ್ನ ನಿಲುವೇ ಬೇರೆಯದ್ದಾಗಿಯೇ ಇರುತ್ತಿತ್ತು. ಆ ರೀತಿ ಮಾಡುವುದಕ್ಕೆ ನಾನು ಇಷ್ಟ ಪಡುವುದಿಲ್ಲ. ನನ್ನ ಆತ್ಮಸಾಕ್ಷಿ ಆಧಾರದ ಮೇಲೆ ನಾನು ನನ್ನ ನಿರ್ಧಾರಗಳನ್ನು ತಗೆದುಕೊಳ್ಳುತ್ತೇನೆ ಮತ್ತು ನನ್ನ ಕ್ಷೇತ್ರಕ್ಕೆ ಒಳ್ಳೆದಾಗುವಂತಹ ಯೋಚನೆಯನ್ನು ಮಾತ್ರ ಮಾಡುತ್ತೇನೆ.

ಇದನ್ನೂ ಓದಿ: Karnataka Polls 2023: ಕಾಂಗ್ರೆಸ್​ ಕಾರ್ಯಕರ್ತರ ಕ್ಷಮೆಯಾಚಿಸಿದ ಸುಮಲತಾ ಅಂಬರೀಶ್, ಯಾಕೆ ಗೊತ್ತಾ?

ನಾನು ಎಂದಿಗೂ ನನ್ನ ನಿರ್ಧಾರಕ್ಕೆ ಬದ್ಧಳಾಗಿರುತ್ತೇನೆ. ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ಯಾವತ್ತಿಗೂ ನಂಬಿಕೆ ಇರಲಿದೆ ಎಂದು ಮತ್ತೆ ಪುನರುಚ್ಚಿಸುತ್ತೇನೆ. ನಿಮ್ಮ ಗ್ರಹಿಕೆಗಳನ್ನು ದಯವಿಟ್ಟು ಸರಿಪಡಿಸಿಕೊಳ್ಳಿ.

ಇಲ್ಲಿ ಪ್ರಮುಖವಾಗಿ ಒಂದು ಅಂಶವನ್ನು ಮರೆಯಬಾರದು. ನನ್ನ ಸ್ವಾಭಿಮಾನಿ ಕ್ಷೇತ್ರದಲ್ಲಿ ನಾನು ಈವರೆಗೂ ಏಕಾಂಗಿಯಾಗಿ ಹೋರಾಟ ಮಾಡುತ್ತಿರುವುದು ಕ್ಷೇತ್ರದ ಭ್ರಷ್ಟ ಹಾಗೂ ದುರಹಂಕಾರಿ ವರ್ತನೆಯ ಶಾಸಕರು ವಿರುದ್ಧ. ನನ್ನ ಈ ಸತತ ಹೋರಾಟವನ್ನು ಗಮನಿಸಿರುವ ನನ್ನ ಸ್ವಾಭಿಮಾನಿ ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಆ ಪಾರ್ಟಿಯಲ್ಲಿ ಗೆದ್ದಿರುವುದು ಒಬ್ಬರೇ ಒಬ್ಬರು. ಅವರೂ ಹೊಸಬರು.

ಹೌದು, ನನ್ನ ನ್ಯಾಯಯುತ ಹೋರಾಟದ ಲಾಭವನ್ನು ನನ್ನ ಜಿಲ್ಲೆಯ ಕಾಂಗ್ರೆಸ್ ಪಡೆದುಕೊಂಡಿದೆ. ಅದು ನನ್ನ ಸ್ವಾಭಿಮಾನಿ ಮಂಡ್ಯದ ಜನರೇ ನೀಡಿದ ಜನಾದೇಶವಾಗಿದ್ದರಿಂದ ಅದನ್ನು ಗೌರವಿಸುತ್ತೇನೆ. ರಾಜಕೀಯ, ರಾಜಕಾರಣ ಮತ್ತು ತಂತ್ರಗಳು ಒಂದು ನಿರ್ದಿಷ್ಟ ಮಟ್ಟಿಗೆ ಕೆಲಸ ಮಾಡುತ್ತೇವೆ ಎಂದು ನಾನು ದೃಢವಾಗಿ ನಂಬುತ್ತೇನೆ. ಆದರೆ, ಅಂತಿಮವಾಗಿ ಯಾವುದೇ ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ ವ್ಯಕ್ತಿ ಗೆಲ್ಲಬೇಕು ವಿನಃ ಪಕ್ಷಗಳು ಅಥವಾ ನಾಯಕರಲ್ಲ.

ಸದ್ಯ ನನ್ನ ಮುಂದೆ ಎರಡು ಗುರಿಗಳಿವೆ. ಮುಂದೆ ಮತ್ತೊಂದು ಮಹಾ ಚುನಾವಣೆಯಿದೆ. ನನ್ನ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸುತ್ತೇವೆ. ಬಿಜೆಪಿ ಪಕ್ಷವು ಹಿಂದೆಂದಿಗಿಂತಲೂ ಬಲವಾಗಿ ಮತ್ತು ಅಚ್ಚರಿಯ ರೀತಿಯಲ್ಲಿ ಪುಟಿದೇಳಲಿದೆ ಮತ್ತು ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಎನ್ನುವುದು ನನ್ನ ಅಚಲ ನಂಬಿಕೆಯಾಗಿದೆ.

ಮತ್ತೊಂದು ಸಲ ಹೇಳುತ್ತೇನೆ, ನನ್ನ ನಿರ್ಧಾರ ಮತ್ತು ಪರಿಣಾಮಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಹಾಗಾಗಿ ಈ ವಿಷಯದಲ್ಲಿ ನನಗೆ ವಿಷಾದವಿಲ್ಲ. ಕೆಟ್ಟ ಹಾಗೂ ನೆಗೆಟಿವ್ ಸುದ್ದಿ ಪ್ರಸಾರ ಮಾಡುವವರ ಜೊತೆಗೆ ಟ್ರೋಲ್ ಮಾಡುವವರು ದಯವಿಟ್ಟು ಆರೋಗ್ಯವಂಥ ಮನಸ್ಸು ಬೆಳೆಸಿಕೊಳ್ಳಿ. ವಿಶ್ರಾಂತಿ ತಗೆದುಕೊಂಡು ಆರೋಗ್ಯ ವೃದ್ಧಿಸಿಕೊಳ್ಳಿ. ನಿಮ್ಮ ಟ್ರೋಲ್ ಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತವೆಯೇ ಹೊರತು, ಅದರಿಂದ ನನ್ನ ಕೆಲಸಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಇದನ್ನೂ ಓದಿ: ಪ್ರಚೋದನಕಾರಿ ಹೇಳಿಕೆ ಆರೋಪ: ಸಂಸದೆ ಸುಮಲತಾ ಆಪ್ತನ ವಿರುದ್ಧ FIR ದಾಖಲು

ನಿಮ್ಮ ಅಗ್ಗದ ಮಾತುಗಳು, ನಿಂದನೆಯ ನುಡಿಗಳು, ನೀವು ಬಳಸುವ ಪದಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತಿವೆ. ದಯವಿಟ್ಟು ನಿಮ್ಮ ಈ ನಡವಳಿಕೆಯ ಮೂಲಕ ನಿಮ್ಮ ತಂದೆ ತಾಯಿಯನ್ನು ಅವಮಾನಿಸಬೇಡಿ. ಆರೋಗ್ಯವಂತ ಮತ್ತು ಸಕಾರಾತ್ಮಕ ಟೀಕೆ, ಟಿಪ್ಪಣಿ, ಚರ್ಚೆಗಳಿಗೆ ಯಾವತ್ತಿಗೂ ಈ ನೆಲದಲ್ಲಿ ಸ್ವಾಗತವಿದೆ.

ನೀವು ಅಂದುಕೊಂಡಿರುವ ವಿಜಯವನ್ನು ಆನಂದಿಸಿ ಮತ್ತು ಆಚರಿಸಿ. ಮುಂದಿನ ಬಾರಿ ಪ್ರಬಲ ಹೋರಾಟಕ್ಕೆ ಸಿದ್ಧರಾಗಿರಿ. ಜೈ ಹಿಂದ್, ಜೈ ಕರ್ನಾಟಕ, ಜೈ ಮಂಡ್ಯ’ ಎಂದು ಸುಮಲತಾ ಅವರು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಸುಮಲತಾ ಅವರು ವಿಧಾನಸಭೆ ಚುನಾವಣೆ ಘೋಷಣೆಗೂ ಕೆಲವೇ ದಿನಗಳ ಮುನ್ನ ಮಂಡ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಬಿಜೆಪಿ ಸೇರುವುದಕ್ಕೆ ಕಾನೂನಾತ್ಮಕ ತೊಡಕುಗಳಿರುವುದರಿಂದ ಪಕ್ಷೇತರ ಸಂಸದೆಯಾಗಿಯೇ ಮುಂದುವರಿಯುತ್ತೇನೆ. ಆದರೆ, ಸಂಪೂರ್ಣ ಬೆಂಬಲ ಬಿಜೆಪಿಗೆ ಇರಲಿದೆ ಎಂದು ಅವರು ಘೋಷಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು