ಮೋದಿ ಭೇಟಿಯಾದ ಸುಮಲತಾ ಅಂಬರೀಶ್, ಪ್ರಧಾನಿ ಮಾತಿಗೆ ಸಂಸದೆ ಫುಲ್ ಖುಷ್

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರ ಕೈಬಿಟ್ಟುಹೋಗುವ ಆತಂಕದಲ್ಲಿರುವ ಸಂಸದೆ ಸುಮಲತಾ ಅಂಬರೀಶ್ ಇದ್ದಾರೆ. ಹೀಗಾಗಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನುಭೇಟಿಯಾಗಿ ತಮಗೆ ಟಿಕೆಟ್‌ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಸಾಲದಕ್ಕೆ ಇದೀಗ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮೋದಿ ಆಡಿದ ಭರವಸೆ ಮಾತುಗಳಿಂದ ಸುಮಲತಾ ಫುಲ್ ಖುಷ್ ಆಗಿದ್ದಾರೆ.

ಮೋದಿ ಭೇಟಿಯಾದ ಸುಮಲತಾ ಅಂಬರೀಶ್, ಪ್ರಧಾನಿ ಮಾತಿಗೆ ಸಂಸದೆ ಫುಲ್ ಖುಷ್
ಮೋದಿ ಭೇಟಿಯಾದ ಸುಮಲತಾ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Feb 09, 2024 | 3:00 PM

ನವದೆಹಲಿ/ಮಂಡ್ಯ, (ಫೆಬ್ರವರಿ 09): ಈ ಬಾರಿ ಮಂಡ್ಯ ರಾಜಕಾರಣ (Mandya Politics) ಮತ್ತೆ ರಂಗೇರಿದ್ದು, ದೆಹಲಿ (Delhi) ಮಟ್ಟದಲ್ಲಿ ಭಾರೀ ಚರ್ಚೆಗಳು ನಡೆದಿದೆ. ಹೌದು..ಈ ಬಾರಿ ಮಂಡ್ಯದಲ್ಲಿ ಬಿಜೆಪಿಯಿಂದ(BJP) ಕಣಕ್ಕಿಳಿಯುಲು ಸುಮಲತಾ ಅಂಬರೀಶ್ (Sumalatha Ambareesh)  ಕನಸು ಕಾಣುತ್ತಿದ್ದು, ಟಿಕೆಟ್​​ಗಾಗಿ ಕಸರತ್ತು ನಡೆಸಿದ್ದಾರೆ. ಗುರುವಾರ ಅಷ್ಟೇ ಬಿಜೆಪಿ ವರಿಷ್ಠರಾದ ಜೆಪಿ ನಡ್ಡಾ ಹಾಗೂ ಬಿಎಲ್​ ಸಂತೋಷ್​ ಅವರನ್ನು ಭೇಟಿ ಮಾಡಿ ಟಿಕೆಟ್​​ಗಾಗಿ ಮನವಿ ಮಾಡಿದ್ದರು. ಈಗ ಮತ್ತೊಂದೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಹೇಳಿದ್ದಾರಂತೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್​ ಸಂತಸಗೊಂಡಿದ್ದು, ಈ ಬಾರಿ ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್​ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸುಮಲತಾ ಅಂಬರೀಶ್​ಗೆ ಹೇಳಿದ್ದಾರೆ. ಅಂದರೆ ಪರೋಕ್ಷವಾಗಿ ಮತ್ತೊಮ್ಮೆ ಗೆದ್ದು ಲೋಕಸಭೆಗೆ ಬನ್ನಿ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಹೀಗಾಗಿ ಸುಮಲತಾ ಅವರು ಈ ಬಾರಿ ಬಿಜೆಪಿ ಟಿಕೆಟ್​ ಸಿಗುವ ವಿಶ್ವಾಸದಲ್ಲಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ವೇಳೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಸ್ವತಃ ಸುಮಲತಾ ಅಂಬರೀಶ್​  ಬರೆದುಕೊಂಡಿದ್ದು, ಅದು ಈ ಕೆಳಗಿನಂತಿದೆ.

ಇದನ್ನೂ ಓದಿ: ಬಿಜೆಪಿ ವರಿಷ್ಠರನ್ನ​ ಭೇಟಿಯಾದ ಸುಮಲತಾ ಅಂಬರೀಶ್, ಮಂಡ್ಯ ಕ್ಷೇತ್ರದ ಬಗ್ಗೆ ಮಹತ್ವದ ಚರ್ಚೆ

ಮೋದಿಯನ್ನು ಹಾಡಿ ಹೊಗಳಿದ ಸುಮಲತಾ

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ ಎಂದು ಹಾಡಿಹೊಗಳಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ. ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಸುಮಲತಾ ಹೇಳಿದ್ದಾರೆ.

ಇದನ್ನೂ ಓದಿ: ಗರಿಗೆದರಿದ ಮಂಡ್ಯ ಲೋಕಸಭಾ ಅಖಾಡ; ಸೋತಲ್ಲಿಯೇ ಪುಟಿದೇಳಲು ನಿಖಿಲ್ ಕುಮಾರಸ್ವಾಮಿ ಮಂಡ್ಯಕ್ಕೆ ರೀ ಎಂಟ್ರೀ

ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಅಂದ್ರಂತೆ ಮೋದಿ

17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ. ಈ ಬಾರಿಯ ತಮ್ಮ ಭೇಟಿ ಸಂದರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಪೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ ಎಂದಿದ್ದಾರೆ.

ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಸುಮಲತಾ ಅಂಬರೀಶ್​ ತಿಳಿಸಿದ್ದಾರೆ.

ಇನ್ನಷ್ಟು ರಾಝಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ