AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ ಲೋಕಾಸಭಾ ಬಿಜೆಪಿ ಟಿಕೆಟ್​ಗಾಗಿ ಕಸರತ್ತು; ಮೂವರ ಮಧ್ಯೆ ಫೈಟ್​

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು‌ ಬಾಕಿ ಇದ್ದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈಗಿನಿಂದಲೇ ಬಿಜೆಪಿ ಟಿಕೆಟ್​ಗಾಗಿ ನಾಯಕರ ಮಧ್ಯೆ ಮುಸುಕಿನ ಗುದ್ದಾಟ ಜೋರಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಫುಲ್ ಆ್ಯಕ್ಟೀವ್ ಆಗಿದ್ದು, ಅದ್ಧೂರಿಯಾಗಿ ತಮ್ಮ ಜನ್ಮದಿನ ಕೂಡ ಆಚರಿಸಿಕೊಂಡಿದ್ದಾರೆ. ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಿನಿಂದಲೇ ಹಾಲಿ ಸಂಸದರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಚಿಕ್ಕೋಡಿ ಲೋಕಾಸಭಾ ಬಿಜೆಪಿ ಟಿಕೆಟ್​ಗಾಗಿ ಕಸರತ್ತು; ಮೂವರ ಮಧ್ಯೆ ಫೈಟ್​
ಮಹಾಂತೇಶ ಕವಟಗಿಮಠ, ಅಣ್ಣಾಸಾಹೇಬ ಜೊಲ್ಲೆ, ರಮೇಶ್ ಕತ್ತಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 08, 2023 | 9:28 PM

Share

ಬೆಳಗಾವಿ, ಅ.08: ಲೋಕಸಭೆ ಚುನಾವಣೆ(Loka Sabha Elections)ಗೆ ಕೆಲವೇ ತಿಂಗಳುಗಳು ಬಾಕಿ ಇದ್ದು, ಚಿಕ್ಕೋಡಿ (Chikkodi) ಬಿಜೆಪಿ ಪಾಳಯದಲ್ಲಿ ಟಿಕೆಟ್​ ಪಡೆಯಲು ಈಗಿನಿಂದಲೇ ತೆರೆಮರೆಯ ಕಸರತ್ತು ಜೋರಾಗಿದೆ. ಮಾಜಿ ಸಂಸದ ಹಾಗೂ ದಿವಂಗತ ಉಮೇಶ ಕತ್ತಿ‌ ಸಹೋದರ ರಮೇಶ್ ಕತ್ತಿ(Ramesh katti) ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ (Mahantesh kavatagimath)ಈಗಾಗಲೇ ಬಹಿರಂಗವಾಗಿ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದಾರೆ. ಈ ಬಾರಿ ಟಿಕೆಟ್ ನನಗೆ ಸಿಗುತ್ತೆ ಎನ್ನುವ ಲೆಕ್ಕಾಚಾರದಲ್ಲಿ ಇರುವ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ(Annasaheb Jolle)ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.

ಅದ್ಧೂರಿಯಾಗಿ ಜನ್ಮದಿನ ಆಚರಿಸಿ ಅಣ್ಣಾಸಾಹೇಬ್ ಜೊಲ್ಲೆ ಶಕ್ತಿಪ್ರದರ್ಶನ

ಚಿಕ್ಕೋಡಿ ಪಟ್ಟಣದಲ್ಲಿ ತಮ್ಮ 61ನೇ ಜನ್ಮದಿನ ಅದ್ಧೂರಿಯಾಗಿ ಆಚರಿಸಿಕೊಳ್ಳುವ ಮೂಲಕ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ಚಿಕ್ಕೋಡಿ ಲೋಕಸಭೆಯನ್ನೇ ಟಾರ್ಗೇಟ್ ಮಾಡಿ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಟ್ಯಾಲೆಂಟ್ ಸ್ಪರ್ಧೆ ಆಯೋಜಿಸಿ, ನಿನ್ನೆ(ಅ.07) ಚಿಕ್ಕೋಡಿಯಲ್ಲಿ ಗ್ರ್ಯಾಂಡ್ ಫೈನಲ್ ಸಮಾರಂಭ ಮಾಡಿದರು. ಇಂದು ಚಿಕ್ಕೋಡಿಯ ಆರ್.ಡಿ.ಹೈಸ್ಕೂಲ್ ಮೈದಾನದಲ್ಲಿ ಅದ್ಧೂರಿ ಸಮಾರಂಭ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಇನ್ನು ಈ ಜನ್ಮದಿನ ಆಚರಣೆಯನ್ನು ಚುನಾವಣೆ ಪ್ರಚಾರ ಎಂದು ತಿಳಿದುಕೊಳ್ಳಬಹುದು ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪತ್ನಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಇದನ್ನೂ ಓದಿ:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉಗ್ರಪ್ಪ ಫುಲ್​ ಆ್ಯಕ್ಟಿವ್​​: ಗಣೇಶ ಚತುರ್ಥಿಯಂದೇ ಬಳ್ಳಾರಿಯಲ್ಲಿ ‌ಮನೆ ಮಾಡಿದ ಮಾಜಿ ಸಂಸದ

ಕಾರ್ಯಕ್ರಮಕ್ಕೆ ಗೈರಾದ ಟಿಕೆಟ್ ಆಕಾಂಕ್ಷಿ ರಮೇಶ್ ಕತ್ತಿ, ಮಹಾಂತೇಶ್ ಕವಟಗಿಮಠ

ಇನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಿನಿಂದಲೇ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಜನ್ಮದಿನ ಸಮಾರಂಭಕ್ಕೆ ಆಹ್ವಾನ ಇದ್ದರೂ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಚಿಕ್ಕೋಡಿ ಲೋಕಸಭಾ ಟಿಕೆಟ್​ಗಾಗಿ ಬೇಡಿಕೆ ಇಟ್ಟಿದ್ದ ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಮಾಜಿ ಎಂಎಲ್​ಸಿ ಮಹಾಂತೇಶ್ ಕವಟಗಿಮಠ ಕಾರ್ಯಕ್ರಮಕ್ಕೆ ಗೈರಾಗಿದ್ದು, ಈ ಕುರಿತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ತರಹೇವಾರು ಚರ್ಚೆ ಶುರುವಾಗಿದೆ.

ಆಹ್ವಾನ ಪತ್ರಿಕೆಯಲ್ಲಿ ಪ್ರಮುಖ ಉಪಸ್ಥಿತಿ ಎಂದು ಹುಕ್ಕೇರಿ ಬಿಜೆಪಿ ಶಾಸಕ ನಿಖಿಲ್ ಕತ್ತಿ, ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಎಂಎಲ್​ಸಿ ಮಹಾಂತೇಶ್ ಕವಟಗಿಮಠ ಹೆಸರಿದ್ದರೂ ಮೂವರು ನಾಯಕರು ಗೈರಾಗಿದ್ದಾರೆ. ಇನ್ನೂ ಕಾರ್ಯಕ್ರಮದಲ್ಲಿ ರಾಯಬಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹಾಗೂ ಮಾಜಿ ಶಾಸಕ ಪಿ.ರಾಜೀವ್ ಭಾಗಿಯಾಗಿದ್ದರು. ಸಂಸದ ಅಣ್ಣಾಸಾಹೇಬ್ ಜೊಲ್ಲೆ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಮಾಜಿ ಶಾಸಕ ಪಿ ರಾಜೀವ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಣ್ಣಾಸಾಹೇಬ್​ ಜೊಲ್ಲೆ ಅವರನ್ನ ಗೆಲ್ಲಿಸುವಂತೆ ಮನವಿ ಮಾಡುವ ಮೂಲಕ ಅಣ್ಣಾಸಾಹೇಬ್ ಜೊಲ್ಲೆ ಪರ ಬ್ಯಾಟ್ ಬೀಸಿದ್ದಾರೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಈಗಿ‌ನಿಂದಲೇ ಅಸಮಾಧಾನದ ಹೊಗೆಯಾಡುತ್ತಿದ್ದು, ಬಿಜೆಪಿ ನಾಯಕರು ಇದನ್ನ ಹೇಗೆ ನಿಭಾಯಿಸುತ್ತಾರೆ, ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ ಯಾರ ಪಾಲಾಗುತ್ತೆ ಎಂಬುದಕ್ಕೆ ಕಾಲವೇ ಉತ್ತರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ