ಬಿಜೆಪಿಯವರಿಗೆ ಅಹಂಕಾರ: ಆಕ್ಷೇಪಕ್ಕೆ ಕಾರಣವಾದ ಸ್ವಪಕ್ಷದ ಶಾಸಕ ಉಮಾನಾಥ ಕೋಟ್ಯಾನ್​ ಹೇಳಿಕೆ

ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲವೆಂದು ಪಕ್ಷದವರು ಹೇಳುತ್ತಾರೆ, ನಾವು ಯಾಕೆ ಮುಸ್ಲಿಮರ ಕೆಲಸ ಮಾಡಬೇಕು ಅಂತಾ ಹೇಳುತ್ತಾರೆ. ನಾನು‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಹೇಳಿರುವ ವಿಡಿಯೋವನ್ನು ಕಾಂಗ್ರೆಸ್ ವೈರಲ್ ಮಾಡಿದೆ.

ಬಿಜೆಪಿಯವರಿಗೆ ಅಹಂಕಾರ: ಆಕ್ಷೇಪಕ್ಕೆ ಕಾರಣವಾದ ಸ್ವಪಕ್ಷದ ಶಾಸಕ ಉಮಾನಾಥ ಕೋಟ್ಯಾನ್​ ಹೇಳಿಕೆ
ಬಿಜೆಪಿ ಶಾಸಕ ಉಮನಾಥ ಕೋಟ್ಯಾನ್
Follow us
Rakesh Nayak Manchi
|

Updated on:Mar 13, 2023 | 10:58 PM

ಮಂಗಳೂರು: ಸಮೀಪಿಸುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ಮತಗಳನ್ನು ಸೆಳೆಯಲು ಕರ್ನಾಟಕ ಬಿಜೆಪಿ ಹಿಂದುತ್ವದ ಹಲಗೆಯನ್ನು ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದರೆ, ಪಕ್ಷದ ಶಾಸಕರೊಬ್ಬರು ಜಾತ್ಯತೀತ ಮಾರ್ಗವನ್ನು ಅನುಸರಿಸಿದ್ದಾರೆ. ಮೂಡುಬಿದಿರೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಮಾತನಾಡಿ, ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಸದ್ಯ, ಇದರ ವಿಡಿಯೋ ವೈರಲ್ (Video Viral) ಆಗಿದೆ. ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲವೆಂದು ಪಕ್ಷದವರು ಹೇಳುತ್ತಾರೆ, ನಾವು ಯಾಕೆ ಮುಸ್ಲಿಮರ ಕೆಲಸ ಮಾಡಬೇಕು ಅಂತಾ ಹೇಳುತ್ತಾರೆ. ನಮ್ಮ ಬಿಜೆಪಿಯವರಿಗೆ ಅಹಂಕಾರ. ಆದರೆ ನಾನು ಹಾಗಲ್ಲ,‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಕಿನ್ನಿಗೋಳಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಸದ್ಯ ಬಿಜೆಪಿ (BJP) ವಲಯದಲ್ಲೇ ಕೋಟ್ಯಾನ್​ ಹೇಳಿಕೆ ಆಕ್ಷೇಪಕ್ಕೆ ಕಾರಣವಾಗಿದ್ದು, ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​​ ಆರೋಪಿಸಿದೆ.

ಈ ಮಾತನ್ನು ಬೇರೆ ಯಾರೂ ಹೇಳುವುದಲ್ಲ, ಉಮನಾಥ ಕೋಟ್ಯಾನ್ ಹೇಳುತ್ತಿರುವು. ಏಕೆಂದರೆ ನಾನು ನೇರವಾಗಿ ಮಾತನಾಡುವವ ಎಂದು ಹೇಳಿರುವುದನ್ನು ವಿಡಿಯೋದಲ್ಲಿ ಕೇಳಿಸಬಹುದಾಗಿದೆ. ಬಿಜೆಪಿ ಶಾಸಕರ ಈ ಹೇಳಿಕೆ ಬಿಜೆಪಿ ವಲಯದಲ್ಲಿ ಮಾತ್ರವಲ್ಲದೆ, ಹಿಂದೂಪರ ಸಂಘಟನೆಗಳ ಕಣ್ಣುಗಳನ್ನು ಕೆಂಪಗಾಗಿಸಿದೆ. ಹಿಂದುತ್ವದ ಹೆಸರಿನಲ್ಲಿ ಮತಕ್ಕಾಗಿ ನಾಟಕ ಮಾಡುತ್ತಿದ್ದಾರೆ. ನಿಮ್ಮಂತ ರಾಜಕಾರಣಿಗಳು ಹಿಂದೂ ಧರ್ಮಕ್ಕೆ ಕಳಂಕ ಎಂದು ಬರೆದು ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಹೊಟೇಲ್​ ಮಾದರಿಯಲ್ಲಿ ವರ್ಗಾವಣೆ, ನೇಮಕಾತಿಗೆ ದರ ಫಿಕ್ಸ್ ಮಾಡಿದ ಕರ್ನಾಟಕ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಈ ವಿಡಿಯೋ ಬಗ್ಗೆ ಶಾಸಕರು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶಾಸಕರು ಚುನಾವಣೆ ವೇಳೆ ಮುಸ್ಲಿಮರನ್ನು ಓಲೈಸಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಏತನ್ಮಧ್ಯೆ, ಹಿಂದೂ ಜಾಗರಣ ವೇದಿಕೆಯಂತಹ ಹಿಂದೂ ಪರ ಸಂಘಟನೆಗಳು ಶಾಸಕರ ವಿರುದ್ಧ ಪ್ರಚಾರವನ್ನು ಪ್ರಾರಂಭಿಸಿವೆ ಮತ್ತು ಛೀಮಾರಿ ಹಾಕಲು ಆರಂಭಿಸಿವೆ. ಹಿಂದೂ ಜಾಗರಣ ವೇದಿಕೆಯ ಪೋಸ್ಟರ್ ಒಂದರಲ್ಲಿ “ನಿಮ್ಮಂತಹ ರಾಜಕಾರಣಿಗಳು ಹಿಂದೂ ಧರ್ಮಕ್ಕೆ ಕಪ್ಪು ಚುಕ್ಕೆ ಎಂದಿದೆ. ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿಯಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Mon, 13 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ