AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Cabinet expansion: ಮೊದಲ ಬಾರಿಗೆ ಸಚಿವ ಸ್ಥಾನ ಗಿಟ್ಟಿಸಿಕೊಂಡ ಮಂಕಾಳ ವೈದ್ಯ

ಮೊದಲ ಬಾರಿಗೆ ಜಿಲ್ಲೆಯ ಭಟ್ಕಳ ಕಾಂಗ್ರೆಸ್​ ಶಾಸಕ ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ಒಲಿದಿದೆ. ಇಂದು(ಮೇ.27) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Karnataka Cabinet expansion: ಮೊದಲ ಬಾರಿಗೆ ಸಚಿವ ಸ್ಥಾನ ಗಿಟ್ಟಿಸಿಕೊಂಡ ಮಂಕಾಳ ವೈದ್ಯ
ಮಂಕಾಳು ವೈದ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 27, 2023 | 1:18 PM

ಉತ್ತರ ಕನ್ನಡ: ಮೊದಲ ಬಾರಿಗೆ ಜಿಲ್ಲೆಯ ಭಟ್ಕಳ ಕಾಂಗ್ರೆಸ್​ ಶಾಸಕ ಮಂಕಾಳ ವೈದ್ಯ(Mankal Vaidya)ರಿಗೆ ಸಚಿವ ಸ್ಥಾನ ಒಲಿದಿದೆ. ಇಂದು(ಮೇ.27) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಂಕಾಳ ವೈದ್ಯ ಅವರ ಪೂರ್ಣ ಹೆಸರು ಮಂಕಾಳ ಸುಬ್ಬ ವೈದ್ಯ ಎಂದು ಇವರು 1972 ಜೂನ್​ 5 ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಜನಿಸಿದರು. ಇವರು 8 ನೇ ತರಗತಿ ಓದಿದ್ದಾರೆ. ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿರುವ ಇವರು ಪುಷ್ಪಲತಾ ವೈದ್ಯ ಎಂಬುವವರನ್ನ ವರಿಸಿದರು. ಬಳಿಕ ಅಲ್ಲಿಂದ ರಾಜಕೀಯದ ಕಡೆ ಒಲವು ತೋರಲು ಶುರು ಮಾಡಿದರು.

ರಾಜಕೀಯ ಜೀವನ

ಕ್ಷೇತ್ರದಲ್ಲಿ ಉತ್ತಮ ಹೆಸರು ಹೊಂದಿದ್ದ ಕಾರಣ ಮಂಕಾಳು ವೈದ್ಯ ಅವರು 2013 ರಲ್ಲಿ ಭಟ್ಕಳ ಹೊನ್ನಾವರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದರು. ಹೌದು ಬಿಜೆಪಿ, ಕಾಂಗ್ರೆಸ್​ಗೆ ಟಕ್ಕರ್​ ನೀಡುವ ಮೂಲಕ ಜಯಶಾಲಿಯಾದರು. ಇನ್ನು 2014 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ2018 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಸೋಲು ಅನುಭವಿಸಿದರು. ಇದೀಗ 2023 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ 30,000 ಕ್ಕೂ ಅಧಿಕ ಮತಗಳಿಂದ ಬಿಜೆಪಿಯ ಸುನೀಲ್​ ನಾಯ್ಕ್​ ವಿರುದ್ದ ಭರ್ಜರಿ ಗೆಲವು ಸಾಧಿಸಿದರು. ನಂತರ ಸಚಿವ ಸಂಪುಟದಲ್ಲಿ ತಮಗೂ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ಲಭಿಸುವ ಮೂಲಕ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ:24 New Ministers Oath Taking Live: 24 ಮಂದಿ ಸಚಿವರಾಗಿ ಪ್ರಮಾಣವಚನ, ಇಲ್ಲಿದೆ ನೋಡಿ ಲೈವ್​​​

ಇನ್ನು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪರವಾಗಿ ಕಣದಲಿದ್ದ ಮಂಕಾಳ ವೈದ್ಯ 77,242 ಮತಗಳನ್ನ ಪಡೆದು ಕೇವಲ 5930 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಜೊತೆಗ ಮಂಕಾಳು ವೈದ್ಯ ಅವರು 2013 ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಎಂದಿನಂತೆ ಭಟ್ಕಳ ಹೊನ್ನಾವರ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ​ ನೇರಾನೇರ ಸ್ಪರ್ಧೆ ಏರ್ಪಟಿತ್ತು. ಅದರಲ್ಲಿ ಮಂಕಾಳು ವೈದ್ಯ ಗೆಲುವಿನ ನಗೆ ಬಿರುವ ಮೂಲಕ ಸಚಿವ ಸ್ಥಾನವನ್ನ ಗಿಟ್ಟಿಸಿಕೊಂಡಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Sat, 27 May 23

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು