ವೀರಶೈವ ಲಿಂಗಾಯತ ಸಮುದಾಯವನ್ನ ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಜುಲೈ 27ರಂದು ಬೃಹತ್ ಸಭೆ
ಕೇಂದ್ರದಲ್ಲಿ ಕೆಲವು ವರ್ಗಕ್ಕೆ ಮಾತ್ರ ಒಬಿಸಿ ಪಟ್ಟಿಯಲ್ಲಿ ಸೇರಿಸಲಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು OBC ಪಟ್ಟಿಗೆ ಸೇರಿಸಬೇಕು ಎಂದು ಶಿವಮೊಗ್ಗದಲ್ಲಿ ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತಾಗಿ ಜು. 27ರಂದು ಬೃಹತ್ ಸಭೆ ನಡೆಯಲಿದೆ.
ಶಿವಮೊಗ್ಗ, ಜುಲೈ 24: ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯ ದೊಡ್ಡದಿದೆ. ಒಬಿಸಿ (OBC) ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಲಿದ್ದು, ಜು. 27ರಂದು ಬೃಹತ್ ಸಭೆ ನಡೆಯಲಿದೆ ಎಂದು ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಕೆಲವು ವರ್ಗಕ್ಕೆ ಮಾತ್ರ ಒಬಿಸಿ ಪಟ್ಟಿಯಲ್ಲಿ ಸೇರಿಸಲಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಸಹ ಓಬಿಸಿ ಪಟ್ಟಿಗೆ ಸೇರಿಸಬೇಕು ಎಂದರು.
ವೀರಶೈವ ಲಿಂಗಾಯತ ಸಮುದಾಯದ ಒಗ್ಗಟ್ಟು ಅವಶ್ಯಕವಾಗಿದೆ. ಸಮಗ್ರ ವೀರಶೈವ ಲಿಂಗಾಯತ ಸಮುದಾಯಕ್ಕೆ ಸವಲತ್ತು ಸಿಗಬೇಕು ಎಂದು ಹೇಳಿದರು.
ಇದನ್ನೂ ಓದಿ: Kuruba Community: ಕುರುಬ ಸಮುದಾಯವನ್ನು ಕಡೆಗಣಿಸಬೇಡಿ, ಕಾಂಗ್ರೆಸ್ಗೆ ಸಿದ್ದರಾಮಾನಂದಪುರಿ ಸ್ವಾಮೀಜಿ ಎಚ್ಚರಿಕೆ
ಶಿವಮೊಗ್ಗದ ವೀರಶೈವ ಸಾಂಸ್ಕೃತಿಕ ಭವನದಲ್ಲಿ ಸಭೆ ನಡೆಯಲಿದ್ದು, ನಾಡಿನ ವೀರಶೈವ ಲಿಂಗಾಯತ ಮಠಾಧೀಶರು ಭಾಗಿಯಾಗಲಿದ್ದಾರೆ. ಸಮಾಜದ ಮುಖಂಡರು, ಜನಪ್ರತಿನಿಧಿಗಳು ಸೇರಿದಂತೆ ಸುಮಾರು 5000 ಜನರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಕುರುಬರ ಎಸ್ಟಿ ಸೇರ್ಪಡೆಗೆ ಕರ್ನಾಟಕದ ಶಿಫಾರಸಷ್ಟೇ ಸಾಕೇ? ಕೇಂದ್ರ ಅನುಸರಿಸುವ ಮುಂದಿನ ಹಂತಗಳೇನು?
ಈ ಹಿಂದೆ ವೀರಶೈವ ಲಿಂಗಾಯತ ಸಮಾಜದ ಮೀಸಲಾತಿ ಹೋರಾಟ ನೆನಗುದಿಗೆ ಬಿದ್ದಿತ್ತು. ಇದೀಗ ಕಳೆದುಹೋಗಿದ್ದ ಹೋರಾಟಕ್ಕೆ ಮರುಜೀವ ಬಂದಿದೆ. ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳನ್ನ ಕೇಂದ್ರದ ಓಬಿಸಿ ಪಟ್ಟಿಗೆ ಸೇರ್ಪಡೆ ಮಾಡುವ ಹೋರಾಟಕ್ಕೆ ಮತ್ತೆ ಮರುಜೀವ ಸಿಕ್ಕಿದೆ. ಅದಕ್ಕಾಗಿ ವೀರಶೈವ ಲಿಂಗಾಯತ ಮಠಾಧೀಶರಿಂದ ಬೃಹತ್ ಸಭೆಯನ್ನ ಆಯೋಜಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.