ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಜೆಡಿಎಸ್​​ನಿಂದ ಬೃಹತ್ ಪ್ರತಿಭಟನೆ: 120 ಕಿಮೀ ಪಾದಯಾತ್ರೆಗೆ ಕುಮಾರಸ್ವಾಮಿ ಸಿದ್ಧತೆ

ಅರಸೀಕೆರೆ, ತಿಪಟೂರು, ತುರುವೇಕೆರೆ, ತುಮಕೂರು ತಾಲೂಕಿನಲ್ಲಿ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಚಾಟಿ ಬೀಸಲು ಕುಮಾರಸ್ವಾಮಿ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಜೆಡಿಎಸ್​​ನಿಂದ ಬೃಹತ್ ಪ್ರತಿಭಟನೆ: 120 ಕಿಮೀ ಪಾದಯಾತ್ರೆಗೆ ಕುಮಾರಸ್ವಾಮಿ ಸಿದ್ಧತೆ
ಹೆಚ್​​ಡಿ ಕುಮಾರಸ್ವಾಮಿ
Follow us
TV9 Web
| Updated By: Ganapathi Sharma

Updated on: Dec 16, 2023 | 3:15 PM

ಬೆಂಗಳೂರು, ಡಿಸೆಂಬರ್ 16: ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಜೆಡಿಎಸ್ (JDS) ಮುಂದಾಗಿದೆ. ಪಾದಯಾತ್ರೆ ಮೂಲಕ ಬೆಂಬಲ ಬೆಲೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಪಕ್ಷ ಮುಂದಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಅವರು 120 ಕಿಮೀ ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜನವರಿ ಮೊದಲ ವಾರದಲ್ಲಿ ನಾಲ್ಕು ತಾಲೂಕಿನಲ್ಲಿ ಕುಮಾರಸ್ವಾಮಿ ಪಾದಯಾತ್ರೆ ಮಾಡಲಿದ್ದಾರೆ. ಹಾಸನದಿಂದ ಆರಂಭವಾಗಲಿರುವ ಪಾದಯಾತ್ರೆ ತುಮಕೂರಿನಲ್ಲಿ ಅಂತ್ಯವಾಗಲಿದೆ. ಸುಮಾರು 120 ಕಿಮೀ ಪಾದಯಾತ್ರೆ ನಡೆಯಲಿದೆ. ಒಟ್ಟು ಹತ್ತು ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, ಕುಮಾರಸ್ವಾಮಿ ಅವರು ಕೊಬ್ಬರಿ ಬೆಳೆಗಾರರು ಮತ್ತು ರೈತರ ಸಮಸ್ಯೆ ಆಲಿಸಲಿದ್ದಾರೆ.

ಅರಸೀಕೆರೆ, ತಿಪಟೂರು, ತುರುವೇಕೆರೆ, ತುಮಕೂರು ತಾಲೂಕಿನಲ್ಲಿ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಚಾಟಿ ಬೀಸಲು ಕುಮಾರಸ್ವಾಮಿ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ವಿಚಾರವಾಗಿ ಚರ್ಚೆಯಾಗಿತ್ತು. ಈ ವಿಚಾರವನ್ನು ಹೊಳೆನರಸೀಪುರದ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಸದನದಲ್ಲಿ ಪ್ರಸ್ತಾಪಿಸಿದ್ದರು. ಇದೇ ವೇಳೆ, ಹೆಚ್​ಡಿ ಕುಮಾರಸ್ವಾಮಿ ಸಹ ಮಧ್ಯ ಪ್ರವೇಶಿಸಿ ಇಡೀ ರಾಜ್ಯದ ರೈತರ ಪರ ವಹಿಸಿ ಮಾತನಾಡಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಸಂಸತ್ ದಾಳಿ: ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತರ: ಲೆಹರ್ ಸಿಂಗ್

ಮುಂಬರುವ ಲೋಕಸಭೆ ಚುನಾವಣೆಗೆ ಎನ್​ಡಿಎ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಕುಮಾರಸ್ವಾಮಿ ಮತ್ತೆ ಸಕ್ರಿಯರಾಗಿದ್ದಾರೆ. ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿರುವ ಅವರು, ಇದೀಗ ಪಾದಯಾತ್ರೆ ಮೂಲಕ ಚಾಟಿ ಬೀಸಲು ಮುಂದಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ