AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರದ್ ಪವಾರ್ ನಮ್ಮ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಕೆಲವರಿಗೆ ರಾತ್ರಿ ನಿದ್ರೆ ಬರಲ್ಲ; ಏಕನಾಥ್ ಶಿಂಧೆ ಲೇವಡಿ

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಏಕನಾಥ್ ಶಿಂಧೆ, ಶರದ್ ಪವಾರ್ ನಮ್ಮೊಂದಿಗೆ ವೇದಿಕೆ ಹಂಚಿಕೊಳ್ಳುವುದರಿಂದ ಕೆಲವರು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

ಶರದ್ ಪವಾರ್ ನಮ್ಮ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಕೆಲವರಿಗೆ ರಾತ್ರಿ ನಿದ್ರೆ ಬರಲ್ಲ; ಏಕನಾಥ್ ಶಿಂಧೆ ಲೇವಡಿ
ಶರದ್ ಪವಾರ್ ಜೊತೆ ಏಕನಾಥ್ ಶಿಂಧೆ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 20, 2022 | 9:30 AM

Share

ಮುಂಬೈ: ನನ್ನ ಜೊತೆ ಮತ್ತು ಬಿಜೆಪಿ ನಾಯಕರ ಜೊತೆ ಶರದ್ ಪವಾರ್ (Sharad Pawar) ವೇದಿಕೆ ಹಂಚಿಕೊಂಡಿರುವುದನ್ನು ನೋಡಿರುವ ಕೆಲವರಿಗೆ ರಾತ್ರಿ ನಿದ್ರೆಯೇ ಬರುವುದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಲೇವಡಿ ಮಾಡಿದ್ದಾರೆ. ಯಾರ ಹೆಸರನ್ನೂ ಅವರು ಪ್ರಸ್ತಾಪಿಸಿಲ್ಲವಾದರೂ ಉದ್ಧವ್ ಠಾಕ್ರೆ ಅವರನ್ನೇ ಗುರಿಯಾಗಿಸಿಕೊಂಡು ಈ ಹೇಳಿಕೆ ನೀಡಿದ್ದಾರೆ.

ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​(ಎಂಸಿಎ) ಚುನಾವಣೆಯ ಹಿಂದಿನ ದಿನ ನಡೆದ ವಿಶೇಷ ಭೋಜನಕೂಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಬಿಜೆಪಿ ನಾಯಕ ಆಶಿಶ್ ಶೆಲಾರ್ ಬುಧವಾರ ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ಬೈಕ್​ಗಳು, ಇನ್ನೂ ಮೂರು ದಿನಕ್ಕೆ ಯೆಲ್ಲೊ ಅಲರ್ಟ್

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಏಕನಾಥ್ ಶಿಂಧೆ, ಶರದ್ ಪವಾರ್ ನಮ್ಮೊಂದಿಗೆ ವೇದಿಕೆ ಹಂಚಿಕೊಳ್ಳುವುದರಿಂದ ಕೆಲವರು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. ಶಿವಸೇನೆ ನಾಯಕತ್ವದ ವಿರುದ್ಧ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದರು. ಇದು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು. ಈ ವೇಳೆ ಶಿವಸೇನೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿತ್ತು. ಈ ವರ್ಷದ ಜೂನ್‌ನಲ್ಲಿ ಶಿವಸೇನೆಯ 55 ಶಾಸಕರ ಪೈಕಿ 39 ಶಾಸಕರೊಂದಿಗೆ ಏಕನಾಥ್ ಶಿಂಧೆ ಬಂಡಾಯವೆದ್ದು ಶಿವಸೇನೆ ಪಕ್ಷದಲ್ಲಿ ಬಿರುಕು ಮೂಡಲು ಕಾರಣವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ