ಜನ ವಿರೋಧಿ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕಿದೆ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್‌ ಭಾಷಣ

MB Patil: ನನಗೆ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್‌ಗೆ ಧನ್ಯವಾದ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮದಲ್ಲಿ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಂದೇ ಮಾತರಂ ಮೂಲಕ ಕಾರ್ಯಕ್ರಮ ಆರಂಭ ಮಾಡಲಾಗಿದೆ.

ಜನ ವಿರೋಧಿ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕಿದೆ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್‌ ಭಾಷಣ
ಎಂ.ಬಿ ಪಾಟೀಲ್
Follow us
TV9 Web
| Updated By: ganapathi bhat

Updated on:Mar 28, 2022 | 6:13 PM

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವ್ರು ಯಾರೂ ಭಾಗಿ ಆಗಿರಲಿಲ್ಲ. ಆದ್ರೆ ಈಗ ನಮಗೇ ದೇಶ ಭಕ್ತಿ ಬಗ್ಗೆ ಹೇಳಿಕೊಡಲು ಬರುತ್ತಿದ್ದಾರೆ. ಕೊವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಕೊರೊನಾ ವೇಳೆ ಚಿಕಿತ್ಸೆ ಸಿಗದೆ ಸಾವಿರಾರು ಜನರು ಮೃತಪಟ್ಟಿದ್ದಾರೆ. ಕೊವಿಡ್ ನಿರ್ವಹಣೆ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡಿತ್ತು. ರಾಜ್ಯದ ಏಕೈಕ ಮಹಿಳಾ ವಿವಿಯನ್ನ ಮುಚ್ಚಲು ಸರ್ಕಾರ ಯತ್ನಿಸ್ತಿದೆ. ಜನ ವಿರೋಧಿಯಾಗಿರುವ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕಿದೆ. 150 ಸೀಟ್‌ ಗೆದ್ದು ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಕೆಪಿಸಿಸಿ ನೂತನ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಅಧಿಕಾರಿ ಸ್ವೀಕರಿಸಿದ್ದಾರೆ. ಎಂ‌.ಬಿ ಪಾಟೀಲ್​ಗೆ ಕಾಂಗ್ರೆಸ್ ಬಾವುಟ ನೀಡಿ ರಣದೀಪ್ ಸುರ್ಜೇವಾಲ ಪ್ರಚಾರ ಸಮಿತಿ ಜವಾಬ್ದಾರಿ ನೀಡಿದ್ದಾರೆ. ನನಗೆ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್‌ಗೆ ಧನ್ಯವಾದ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮದಲ್ಲಿ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಂದೇ ಮಾತರಂ ಮೂಲಕ ಕಾರ್ಯಕ್ರಮ ಆರಂಭ ಮಾಡಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಸೇರಿದಂತೆ ಹಲವರು ಭಾಗಿ ಆಗಿದ್ದಾರೆ. ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಮುಖ್ಯಸ್ಥರಿಗೂ ಆಹ್ವಾನ ನೀಡಲಾಗಿದೆ.

BJP ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ: ರಣದೀಪ್ ಸುರ್ಜೇವಾಲಾ

ಬೊಮ್ಮಾಯಿ ನೇತೃತ್ವದ BJP ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ. ಪ್ರಧಾನಿ, ಬಿಜೆಪಿ ಹೈಕಮಾಂಡ್ ಈ ಬಗ್ಗೆ ಏಕೆ ಮಾತನಾಡ್ತಿಲ್ಲ. ಬಿಜೆಪಿ ಹೈಕಮಾಂಡ್ ಏಕೆ ಬಾಯಿ ಮುಚ್ಚಿಕೊಂಡು ಕುಳಿತಿದೆ. ಭ್ರಷ್ಟ ಸರ್ಕಾರದ ವಿರುದ್ಧ ಬಿಜೆಪಿ ವರಿಷ್ಠರು ಕ್ರಮಕೈಗೊಳ್ಳಲಿ. ಇಲ್ಲದಿದ್ದರೆ ಭ್ರಷ್ಟಾಚಾರದಲ್ಲಿ ವರಿಷ್ಠರಿಗೂ ಪಾಲಿದೆ ಎಂದರ್ಥ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್​ ಅವಧಿಯಲ್ಲಿ ಕಟ್ಟಿದ ಆಸ್ತಿಯನ್ನು ಮಾರುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಮೋದಿ ಅಧಿಕಾರಕ್ಕೆ ಬರುವ ಮುನ್ನ ನೌಕರಿ ಕೊಡ್ತೇವೆ ಅಂದಿದ್ರು. ಪ್ರತಿ ವರ್ಷ 2 ಕೋಟಿ ನೌಕರಿ ಕೊಡುವುದಾಗಿ ಮೋದಿ ಹೇಳಿದ್ರು. ಆದರೆ ಕೇಂದ್ರ ಸರ್ಕಾರದಲ್ಲಿ 9 ಲಕ್ಷ ನೌಕರಿ ಭರ್ತಿ ಮಾಡಿಲ್ಲ. ಗ್ರಾಮಾಂತರ ಪ್ರದೇಶದಲ್ಲಿ ಶೇ. 9ರಷ್ಟು ನಿರುದ್ಯೋಗಿಗಳಾಗಿದ್ದರು. ನಗರ ಪ್ರದೇಶದಲ್ಲಿ ಶೇಕಡಾ 11ರಷ್ಟು ನಿರುದ್ಯೋಗಿಗಳಾಗಿದ್ದಾರೆ. 26-30 ವರ್ಷದ ಶೇಕಡಾ 29ರಷ್ಟು ಜನರಿಗೆ ಉದ್ಯೋಗ ಇಲ್ಲ. ಹೊಸ ನೌಕರಿ ಕೊಡುವುದಿರಲಿ ಇರುವ ನೌಕರಿಯನ್ನೇ ತುಂಬಿಲ್ಲ ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

ದೇಶದ ಎಲ್ಲಾ ರಾಜ್ಯಗಳಲ್ಲಿ ಆರ್ಥಿಕ ಸ್ಥಿತಿ ತೊಂದರೆಯಲ್ಲಿದೆ. ಕೇಂದ್ರ ಸರ್ಕಾರದಲ್ಲಿ 19 ಲಕ್ಷ ಉದ್ಯೋಗ ಖಾಲಿ ಇವೆ. ಸರ್ಕಾರದ ಆಸ್ತಿಯನ್ನು ಒಂದೊಂದಾಗಿ ಮಾಡಿಕೊಳ್ಳುತ್ತಿದ್ದಾರೆ. ಜವಾಹರ್ ಲಾಲ್​ ನೆಹರು, ಇಂದಿರಾ ಗಾಂಧಿ ಬೈಯುತ್ತಾರೆ. 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ಕಾಂಗ್ರೆಸ್​ ಅವಧಿಯಲ್ಲಿ ಕಟ್ಟಿದ ಆಸ್ತಿಯನ್ನು ಮಾರುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಕೆಲವೊಂದು ವಿಚಾರ ಹೇಳದ ಸ್ಥಿತಿ ತಂದಿಟ್ಟಿದ್ದಾರೆ; ನಾನು ಹೇಳುವುದನ್ನು ಬೇರೆ ರೀತಿ ಬಿಂಬಿಸುತ್ತಿದ್ದಾರೆ: ಸಿದ್ದರಾಮಯ್ಯ 

ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್​​ನಿಂದ 3 ಹಂತದ ಅಭಿಯಾನ; ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗೆ ಹಾರ ಹಾಕಿ ಪ್ರತಿಭಟಿಸಲು ನಿರ್ಧಾರ

Published On - 6:06 pm, Mon, 28 March 22

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ