AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಶಕ್ತಿ ಕೇವಲ 10 ತಿಂಗಳಿಗೆ ನಿಸ್ತೇಜವಾಯಿತಾ ಡಿಕೆ ಶಿವಕುಮಾರ್​? ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ: ಕುಮಾರಸ್ವಾಮಿ  

ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ? ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು 'ಮೌನಂ ಶರಣಂ ಗಚ್ಛಾಮಿ!!' ನಿಮ್ಮ ಸರಕಾರದಲ್ಲಿ ಏನೇನ್ ನಡೀತಿದೆ ಶಿವಕುಮಾರ್ ಅವರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನಿಮ್ಮ ಶಕ್ತಿ ಕೇವಲ 10 ತಿಂಗಳಿಗೆ ನಿಸ್ತೇಜವಾಯಿತಾ ಡಿಕೆ ಶಿವಕುಮಾರ್​? ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ: ಕುಮಾರಸ್ವಾಮಿ  
ಡಿಕೆ ಶಿವಕುಮಾರ್​, ಹೆಚ್​ಡಿ ಕುಮಾರಸ್ವಾಮಿ
Sunil MH
| Edited By: |

Updated on: Apr 07, 2024 | 5:13 PM

Share

ಬೆಂಗಳೂರು, ಏಪ್ರಿಲ್​ 07: ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೆ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakuamr)​ ಅವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumarswamy) ವಾಗ್ದಾಳಿ ಮಾಡಿದರು.

“ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ! ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ! ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ! ಹೌದಲ್ಲವೇ?” ಎಂದು ಸಾಮಾಜಿಕ ಜಾಲತಾಣ ಎಕ್ಸ್​ (ಟ್ವಿಟರ್​​) ನಲ್ಲಿ ಪೋಸ್ಟ್​​ ಮಾಡಿದ್ದಾರೆ.

“ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರಕಾರ. ಆ ಸರಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಇದೆಂಥಾ ಹತವಿಧಿ!? ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು?” ಎಂದು ಪ್ರಶ್ನಿಸಿದರು.

“2006-2007ರಲ್ಲೇ ಮಹಾದಾಯಿ ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, ₹100 ಕೋಟಿ ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ ಕಾಂಗ್ರೆಸ್​ ಸರಕಾರ ಇತ್ತಲ್ಲಾ..? ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ?” ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ, ಡಿಕೆ ನೋಟು ಡಾಕ್ಟ್ರಿಗೆ ವೋಟು ನಮ್ಮ ಸ್ಟ್ರಾಟಿಜಿ ಅಗಿದೆ: ಹೆಚ್ ಡಿ ಕುಮಾರಸ್ವಾಮಿ

“ಮೇಕೆದಾಟು, ಮಹದಾಯಿ ಸೇರಿ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿದ್ದೆ ಎನ್ನುವ ಮಾಹಿತಿಯೂ ನಿಮಗಿಲ್ಲವಲ್ಲ? ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ. 90ರ ಇಳಿವಯಸ್ಸಿನಲ್ಲಿಯೂ ಶ್ರೀ ದೇವೇಗೌಡರು ಸಂಸತ್ತಿನ ಒಳ-ಹೊರಗೆ ರಾಜ್ಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಅವರು ಮೇಕೆದಾಟು ಬಗ್ಗೆ ದನಿ ಎತ್ತಿದರೆ, ರಾಜ್ಯದವರೇ ಆದ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವ್ರತ ಮಾಡುತ್ತಿದ್ದರು! ನಿಮ್ಮ ಪಕ್ಷದ ಉಳಿದ ಸದಸ್ಯರು ನಿಮ್ಮ ಅಧ್ಯಕ್ಷರು ಮಾಡಿದ್ದನ್ನೇ ಚಾಚೂ ತಪ್ಪದೇ ಪಾಲಿಸುತ್ತಿದ್ದರು!” ಎಂದು ಹರಿಹಾಯ್ದರು.

“ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ? ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು ‘ಮೌನಂ ಶರಣಂ ಗಚ್ಛಾಮಿ!!’ ನಿಮ್ಮ ಸರಕಾರದಲ್ಲಿ ಏನೇನ್ ನಡೀತಿದೆ ಶಿವಕುಮಾರ್ ಅವರೇ? ಪೆನ್ನು ಪೇಪರ್ ಕೂಡ ‘ಮೌನಂ ಶರಣಂ ಗಚ್ಛಾಮಿ’ ಎನ್ನುತ್ತಿವೆಯಾ.. ಹೇಗೆ?” ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?