ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಹಲವು ಸಲಹೆಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸುಗ್ರೀವಾಜ್ಞೆಯನ್ನು ವಿಧಾನ ಮಂಡಲದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಇದರಿಂದ ಮೈಕ್ರೋ ಫೈನಾನ್ಸ್ ಕ್ಷೇತ್ರದಲ್ಲಿ ಹೊಸ ನಿಯಮಗಳು ಜಾರಿಗೆ ಬರುವ ಸಾಧ್ಯತೆಯಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.

ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
Edited By:

Updated on: Feb 12, 2025 | 6:33 PM

ಬೆಂಗಳೂರು, ಫೆಬ್ರವರಿ 12: ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್​ನವರ (Microfinance) ಅಟ್ಟಹಾಸಕ್ಕೆ ಕೊನೆಗೂ ಲಗಾಮು ಬಿದ್ದಿದೆ. ಆ ಮೂಲಕ ಸರ್ಕಾರದ ಅಸ್ತ್ರ ಸುಗ್ರೀವಾಜ್ಞಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್​​ ಅಂಕಿತ ಹಾಕಿದ್ದಾರೆ. ಜೊಗೆ ಹಲವು ಸಲಹೆಗಳನ್ನು ನೀಡಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ಸೂಚನೆ ನೀಡಿದ್ದಾರೆ.

ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬ್ರೇಕ್‌ ಹಾಕಬೇಕು ಅಂತಾ ಹೊರಟ ಸರ್ಕಾರ ಸುಗ್ರೀವಾಜ್ಞೆ ಮೊರೆ ಹೋಗಿತ್ತು. ಕಠಿಣ ಕಾನೂನು ರೂಪಿಸಿ ರಾಜ್ಯಪಾಲರಿಗೆ ರವಾನಿಸಿದ್ದರು. ಆದರೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಸಿದ್ದ ರಾಜ್ಯಪಾಲರು, ಸರ್ಕಾರಕ್ಕೆ ವಾಪಸ್‌ ಕಳಿಸಿದ್ದರು. ಇದರಲ್ಲಿರುವ ಅಂಶಗಳನ್ನ ನೋಡಿದರೆ ಮುಂದಿನ ದಿನಗಳಲ್ಲಿ ಮಾರಕ ಆಗಲಿದೆ ಅನ್ನೋ ಕಾರಣ ನೀಡಿ ಸರ್ಕಾರ ಸ್ಪಷ್ಟನೆ ಕೇಳಿ ವಾಪಸ್‌ ಮಾಡಿದ್ದರು.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆ ಡ್ರಾಫ್ಟ್​ ರಾಜ್ಯಪಾಲರಿಗೆ ರವಾನೆ: ಜೈಲು ಶಿಕ್ಷೆಯಲ್ಲಿ ಬದಲಾವಣೆ

ಅಷ್ಟೇ ಅಲ್ಲ ಬಜೆಟ್ ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಾಧಕ ಬಾಧಕದ ಬಗ್ಗೆ ಚರ್ಚೆ ನಡೆಸಿ ಅಂತಾ ಹೇಳಿದ್ದ ರಾಜ್ಯಪಾಲರು, ಈಗಿರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ಳುತ್ತಿಲ್ಲ ಅಂತಾ ಪೊಲೀಸ್‌ ವ್ಯವಸ್ಥೆ ಬಗ್ಗೆಯೂ ಅಸಮಾಧನ ಹೊರಹಾಕಿದ್ದರು. ಮೈಕ್ರೋ ಫೈನಾನ್ಸ್ ವಿರುದ್ಧ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಅಂತಾ ಖಡಕ್‌ ಸಂದೇಶ ರವಾನಿಸಿ ಸುಗ್ರೀವಾಜ್ಞೆ ವಾಪಸ್‌ ಮಾಡಲಾಗಿತ್ತು.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊಸ್ತಿಲಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಮೈಕ್ರೋಫೈನಾನ್ಸ್ ಕಂಪನಿಗಳು

ರಾಜ್ಯಪಾಲರು ತಪ್ಪುಗ್ರಹಿಕೆಯಿಂದ ಈ ನಿರ್ಧಾರ ಕೈಕೊಂಡಿದ್ದಾರೆ ಎಂದಿದ್ದ ಕಾನೂನು ಸಚಿವ ಹೆಚ್‌ಕೆ ಪಾಟೀಲ್‌, ಸುಗ್ರೀವಾಜ್ಞೆ ಪುರಸ್ಕರಿಸುವಂತೆ ಕರಡು ಪ್ರತಿಯನ್ನ ಮರು ಸಲ್ಲಿಕೆ ಮಾಡುತ್ತೇವೆ ಎಂದಿದ್ದರು. ಅದರಂತೆಯೇ ನಿನ್ನೆ ಸರ್ಕಾರ ಮತ್ತೊಮ್ಮೆ ರಾಜ್ಯಪಾಲರ ಅಂಗಳಕ್ಕೆ ಸುಗ್ರೀವಾಜ್ಞೆ ಕರಡು ರವಾನೆ ಮಾಡಿತ್ತು. ಈ ಭಾರಿ ಸುಗ್ರೀವಾಜ್ಞೆಯಲ್ಲಿ ಯಾವುದೇ ಬದಲಾವಣೆ ಮಾಡದೆಯೇ ಕರಡು ರವಾನಿಸಲಾಗಿತ್ತು. ಅತಿ ಅಗತ್ಯತೆಯ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ಅನುಮೋದಿಸಲು ಸರ್ಕಾರ ಮನವಿ ಮಾಡಿತ್ತು.

ದುಡುಕಿನ ನಿರ್ಧಾರ ಕೈಗೊಳ್ಳದಿರಿ: ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದ ಸಿಎಂ

ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದೆ ಎಂದಿದ್ದಾರೆ.

ಸಿಎಂ ಟ್ವೀಟ್

ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:21 pm, Wed, 12 February 25

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us