AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಕಾಂಗ್ರೆಸ್​ನ ಮಿಲಿಂದ್ ದೇವರಾ ರಾಜೀನಾಮೆ; ಶಿಂಧೆ ಬಣದ ಶಿವಸೇನಾ ಸೇರಲಿದ್ದಾರಾ ಮಾಜಿ ಸಂಸದ?

Milind Deora quits Congress Party: ಕಾಂಗ್ರೆಸ್​ನಿಂದ ಎರಡು ಬಾರಿ ಸಂಸದರಾಗಿದ್ದ ಮಿಲಿಂದ್ ದೇವರಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮುರಳಿ ದೇವರಾ ಅವರ ಮಗನಾದ ಮಿಲಿಂದ್ ದೇವರಾ ಮುಂಬೈ ದಕ್ಷಿಣ ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಣದ ಶಿವಸೇನಾ ಪಕ್ಷವನ್ನು ದೇವರಾ ಸೇರಬಹುದು ಎನ್ನುವ ಸುದ್ದಿ ಇದೆ.

Maharashtra: ಕಾಂಗ್ರೆಸ್​ನ ಮಿಲಿಂದ್ ದೇವರಾ ರಾಜೀನಾಮೆ; ಶಿಂಧೆ ಬಣದ ಶಿವಸೇನಾ ಸೇರಲಿದ್ದಾರಾ ಮಾಜಿ ಸಂಸದ?
ಮಿಲಿಂದ್ ದೇವರಾ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 14, 2024 | 3:03 PM

ಮುಂಬೈ, ಜನವರಿ 14: ಕಾಂಗ್ರೆಸ್ ನಾಯಕರ ಪ್ರತಿಷ್ಠಿತ ಕುಟುಂಬವೊಂದಕ್ಕೆ ಸೇರಿದ ಮಿಲಿಂದ್ ದೇವರಾ (Milind Deora) ಪಕ್ಷ ತ್ಯಜಿಸಿದ್ದಾರೆ. ಕಾಂಗ್ರೆಸ್ ಪಕ್ಷದೊಂದಿಗೆ ತಮ್ಮ ಕುಟುಂಬ ಹೊಂದಿದ್ದ 55 ವರ್ಷದಷ್ಟು ಹಳೆಯ ಸಂಬಂಧ ಅಂತ್ಯವಾಗುತ್ತಿದೆ ಎಂದು ಮಾಜಿ ಸಂಸದರಾದ ಅವರು ಹೇಳಿದ್ದಾರೆ. ಏಕನಾಥ್ ಶಿಂಧೆ ಬಣದ ಶಿವಸೇನಾ ಪಕ್ಷಕ್ಕೆ ದೇವರಾ ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿಗಳ ಮಧ್ಯೆ ಈ ಬೆಳವಣಿಗೆ ಆಗಿದೆ. ತಾನು ರಾಜೀನಾಮೆ ಕೊಟ್ಟಿರುವ ಸಂಗತಿಯನ್ನು ಅವರ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

‘ನಮ್ಮ ರಾಜಕೀಯ ಪ್ರಯಾಣದಲ್ಲಿ ಇವತ್ತಿಗೆ ಒಂದು ಪ್ರಮುಖ ಘಟ್ಟ ಮುಕ್ತಾಯವಾಗಿದೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಇದರೊಂದಿಗೆ ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷದ ಸಂಬಂಧ ಅಂತ್ಯಗೊಳಿಸುತ್ತಿದ್ದೇನೆ. ಹಲವು ವರ್ಷಗಳಿಂದ ಅಚಲವಾಗಿ ಬೆಂಬಲ ನೀಡುತ್ತಾ ಬಂದ ಎಲ್ಲಾ ನಾಯಕರು, ಸಹವರ್ತಿಗಳು ಹಾಗೂ ಕಾರ್ಯಕರ್ತರಿಗೆ ನಾನು ಋಣಿಯಾಗಿದ್ದೇನೆ’ ಎಂದು ಮಿಲಿಂದ್ ದೇವರಾ ತಮ್ಮ ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ಮಿಲಿಂದ್ ದೇವರಾ ಅವರು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್​ನ ಅತ್ಯಂತ ಹಿರಿಯ ತಲೆಗಳಲ್ಲಿ ಒಂದಾಗಿದ್ದ ಮುರಳಿ ದೇವರಾ ಅವರ ಮಗ. ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಲವು ದಶಕಗಳು ದೇವರಾ ಕುಟುಂಬದವರೇ ಚುನಾಯಿತರಾಗಿದ್ದಾರೆ. ಮಿಲಿಂದ್ ದೇವರಾ 2004 ಮತ್ತು 2009ರಲ್ಲಿ ಜಯಿಸಿದ್ದರು. ಆದರೆ, ನಂತರದ ಎರಡು ಚುನಾವಣೆಗಳಲ್ಲಿ ಅಂದಿನ ಅವಿಭಜಿತ ಶಿವಸೇನಾ ಪಕ್ಷದ ಅರವಿಂದ್ ಸಾವಂತ್ ಅವರೆದುರು ಸೋತಿದ್ದರು.

ಮಿಲಿಂದ್ ದೇವರಾ ಕಾಂಗ್ರೆಸ್ ತೊರೆದಿದ್ದು ಯಾಕೆ?

ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ವಿಚಾರವು ಮಿಲಿಂದ್ ದೇವರಾ ಅವರನ್ನು ಪಕ್ಷದಿಂದ ದೂರಗೊಳಿಸುವಂತೆ ಮಾಡಿದೆ ಎನ್ನುವುದು ಇನ್ನೂ ದೃಢಪಡದ ವಿಚಾರ. ಈ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯೇ ಕಣಕ್ಕಿಳಿಯುತ್ತಾರೆ ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ಹೇಳಿಕೊಂಡಿದೆ. ಶಿವಸೇನೆಯು ಮಹಾ ವಿಕಾಸ್ ಆಘಾಡಿ ಮೈತ್ರಿಕೂಟದ ಭಾಗವಾಗಿದ್ದರೂ ಯಾರೊಂದಿಗೆ ಸಮಾಲೋಚನೆ ಮಾಡದೆಯೇ ಏಕಪಕ್ಷೀಯವಾಗಿ ಮುಂಬೈ ದಕ್ಷಿಣ ಕ್ಷೇತ್ರದ ತಮ್ಮದೆಂದು ಹೇಳಿಕೊಂಡಿದ್ದು ಮಿಲಿಂದ್ ದೇವರಾಗೆ ಇರಿಸುಮುರುಸು ತಂದಿದೆ ಎನ್ನಲಾಗಿದೆ. ಈ ಕಾರಣಕ್ಕೆ ಅವರು ಪಕ್ಷ ತೊರೆದಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಅಮಿತ್ ಶಾ, ಜೆಪಿ ನಡ್ಡಾಗೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ನೀಡಿದ VHP

ಅವೇ ವದಂತಿಗಳ ಪ್ರಕಾರ ಮಿಲಿಂದ್ ದೇವರಾ ಜೊತೆ ಕನಿಷ್ಠ 10 ಮಾಜಿ ಕಾರ್ಪೊರೇಟರ್​ಗಳು, 25 ಕಾಂಗ್ರೆಸ್ ಪದಾಧಿಕಾರಿಗಳು, 20 ವರ್ತಕ ಒಕ್ಕೂಟಗಳು ಹಾಗೂ ನೂರಾರು ಕಾರ್ಯಕರ್ತರು ಆಡಳಿತಾರೂಢ ಏಕನಾಥ್ ಶಿಂಧೆ ಬಣದ ಶಿವಸೇನಾ ಪಕ್ಷವನ್ನು ಸೇರಲಿದ್ದಾರೆ.

ಆದರೆ, ಈ ಸುದ್ದಿಯನ್ನು ಮಿಲಿಂದ್ ದೇವರಾ ತಳ್ಳಿಹಾಕಿದ್ದಾರೆ. ತಾನು ಶಿಂಧೆ ಪಕ್ಷ ಸೇರಲಿರುವ ಸುದ್ದಿ ಸತ್ಯಕ್ಕೆ ದೂರವಾದುದು. ಕ್ಷೇತ್ರದ ಜನರ ಅಭಿಪ್ರಾಯಗಳನ್ನು ಪಡೆಯುತ್ತಿದ್ದೇನೆ. ಮುಂದಿನ ನಡೆ ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:53 am, Sun, 14 January 24

ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ