ಆಪರೇಷನ್ ಹಸ್ತ: ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಡಿಕೆ ಶಿವಕುಮಾರ್
ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಆಪರೇಷನ್ ಹಸ್ತದ ಸುಂಟರಗಾಳಿ ಬೀಸಿದೆ. ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆಯೇ ಇತ್ತ ಡಿಕೆ ಶಿವಕುಮಾರ್ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಹೇಳುವ ಮೂಲಕ ಆಪರೇಷನ್ ಗುಟ್ಟು ಬಿಟ್ಟುಕೊಟ್ಟಿದ್ದಾರೆ.
ಮೈಸುರು ( ಆಗಸ್ಟ್ 18): ರಾಜ್ಯ ರಾಜಕಾರಣದಲ್ಲಿ ಬಾಂಬೆ ಬಾಯ್ಸ್ ಘರ್‌ವಾಪ್ಸಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆಪರೇಷನ್‌ಗೆ ಕಾಂಗ್ರೆಸ್ (Congress) ಕೈ ಹಾಕಿದೆ ಎನ್ನುವ ವ ಹೊತ್ತಲ್ಲೇ ಯಶವಂತಪುರದಲ್ಲಿ ಭಾರೀ ಬೆಳವಣಿಗೆ ನಡೆದಿದೆ. ಎಸ್.ಟಿ ಸೋಮಶೇಖರ್ ನಡೆಸಿದ್ದ ಸಭೆಯಲ್ಲಿ ಕೈ ಶಾಸಕ ಪ್ರತ್ಯಕ್ಷವಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಸೋಮಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ(Chaluvaraya Swamy), ಬಿಜೆಪಿ(BJP), ಜೆಡಿಎಸ್ ( JDS) ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ. ಈ ಬ್ಗಗೆ ಮಾತುಕತೆ ನಡೆಯುತ್ತಿದ್ದು, 10 ರಿಂದ 15 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಇನ್ನು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಆಪರೇಷನ್ ಗುಟ್ಟು ಬಿಟ್ಟುಕೊಟ್ಟಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಪಕ್ಷ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಇನ್ನೂ ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಹೇಳಿದ ಅವರು, ಎರಡೂ ಪಕ್ಷದ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂಬುದನ್ನು ಸ್ಪಷ್ಟಪಡಿಸಿದರು.
ಏನು ಬೇಕಾದರೂ ಆಗಬಹುದೆಂದ ಡಿಕೆ ಶಿವಕುಮಾರ್
ಇನ್ನು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಸೇರುವ ವಿಚಾರ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸೇರಲು ಸಿದ್ಧವಿದ್ದರೆ ಸೇರಿಸಿಕೊಳ್ಳಿ ಎಂದು ಹೇಳಿದ್ದೇನೆ. ಕೆಲ ಕಾರ್ಯಕರ್ತರು ಬಹಳ ಉತ್ಸಾಹದಿಂದ ಕೆಲಸ ಮಾಡ್ತಿದ್ದಾರೆ. ವೋಟ್ ಶೇರ್ ಜಾಸ್ತಿ ಮಾಡಿಕೊಳ್ಳಲು ಕಾರ್ಯಕರ್ತರಿಗೆ ಹೇಳಿದ್ದೇವೆ. ಸೋಮಶೇಖರ್ ಪಕ್ಷ ಸೇರ್ಪಡೆ ಬಗ್ಗೆ ವೈಯಕ್ತಿಕವಾಗಿ ಹೇಳಿರಬಹುದು. ಆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ, ಯಾವಾಗ ಏನು ಬೇಕಾದರೂ ಆಗಬಹುದು. ಆದ್ರೆ, ಯಾರು ಬರುತ್ತಾರೆ ಏನು ಎಂಬುವುದನ್ನ ನಾನು ಹೇಳುವುದಿಲ್ಲ ಎಂದಿರುವ ಅವರು, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಹೇಳುವ ಮೂಲಕ ಗುಟ್ಟು ಬಿಟ್ಟುಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೂಡ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಚಲುವರಾಯಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಹೇಳಿಕೆ ಸಂಚಲನ ಮೂಡಿಸಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ