AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಸಿಎಂ ಆಗಲು ನನ್ನ ಕೊಡುಗೆಯೂ ಇದೆ: ಸಚಿವ ಸಿ.ಪಿ.ಯೋಗೇಶ್ವರ್

CP Yogeshwar: ನಾನು ಯಾವತ್ತೂ ಪಕ್ಷದ ವಿರುದ್ಧವಾಗಿ ಮಾತನಾಡಿಲ್ಲ. ಸಚಿವ ಆರ್. ಅಶೋಕ್ ಮತ್ತು ನಾನು ಸ್ನೇಹಿತರು, ಸಹಜವಾಗಿ ಕಿತ್ತಾಡಿಕೊಳ್ಳೋದು ಮಾಮೂಲಿ ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್​ ಹೇಳಿದರು.

ಯಡಿಯೂರಪ್ಪ ಸಿಎಂ ಆಗಲು ನನ್ನ ಕೊಡುಗೆಯೂ ಇದೆ: ಸಚಿವ ಸಿ.ಪಿ.ಯೋಗೇಶ್ವರ್
C.P.ಯೋಗೇಶ್ವರ್​ (ಎಡ); ಸಿಎಂ B.S. ಯಡಿಯೂರಪ್ಪ (ಬಲ)
TV9 Web
| Updated By: guruganesh bhat|

Updated on: Jun 07, 2021 | 4:33 PM

Share

ಬೆಂಗಳೂರು: ಬಿಜೆಪಿ ಸರ್ಕಾರ ಬರುವುದಕ್ಕೆ ನನ್ನದೂ ಅಳಿಲು ಸೇವೆ ಇದೆ. ಯಡಿಯೂರಪ್ಪ ಸಿಎಂ ಆಗುವುದಕ್ಕೆ ನನ್ನದೂ ಕೊಡುಗೆ ಇದೆ. ಮೈತ್ರಿ ಸರ್ಕಾರ ಬೇಡವೆಂದು ಬಿಎಸ್‌ವೈಗೆ ಬೆಂಬಲ ಕೊಟ್ಟೆವು. ಇದು ನನ್ನ ಕೊಡುಗೆ ಅಲ್ಲವೇ? ಎಂದು ಸಚಿವ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದ ರಾಜೀನಾಮೆ ಹೇಳಿಕೆ ಬಗ್ಗೆ ನಾನು ಏನನ್ನೂ ಮಾತಾಡುವುದಿಲ್ಲ. ಶಾಸಕ ರೇಣುಕಾಚಾರ್ಯ ಅಥವಾ ಇತರರು ಏನಾದರೂ ಹೇಳಲಿ ಬಿಡಿ.. ನಮ್ಮ ಪಕ್ಷದವರ ಪರ, ವಿರೋಧ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಯಾವತ್ತೂ ಪಕ್ಷದ ವಿರುದ್ಧವಾಗಿ ಮಾತನಾಡಿಲ್ಲ. ಸಚಿವ ಆರ್. ಅಶೋಕ್ ಮತ್ತು ನಾನು ಸ್ನೇಹಿತರು, ಸಹಜವಾಗಿ ಕಿತ್ತಾಡಿಕೊಳ್ಳೋದು ಮಾಮೂಲಿ ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್​ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ನನ್ನ ಬಗ್ಗೆ ಆಪಾದನೆ ಮಾಡಬೇಕು ಅಂತಿದೆ, ಹಾಗಾಗಿ ಮಾಡ್ತಾರೆ. ಅವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಬಾರದು. ನಾನು ತಿಹಾರ್ ಜೈಲಿಗೆ ಹೋಗಿ ಬಂದವರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಜೈಲಿಗೆ ಹೋಗಿಬಂದ ಬಳಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೆ ನಮ್ಮ ಪಕ್ಷದ ಸದಸ್ಯತ್ವ ಸ್ವೀಕರಿಸುವಂತೆ ಸಲಹೆ ನೀಡುತ್ತೇನೆ. ಇಲ್ಲವೇ ಅವರು ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಲಿ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹರಿಹಾಯ್ದರು.

ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ ಹಾಡಲೇಬೇಕು: ಸಿಎಂ ಯಡಿಯೂರಪ್ಪ ಆಪ್ತರಿಂದ ನಿರ್ಧಾರ

ಇನ್ನುಮುಂದೆ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಬಾರದು. ಸಿಎಂ ಯಡಿಯೂರಪ್ಪರ ಬೆಂಬಲವಾಗಿ ವರಿಷ್ಠರ ಬಳಿ ತೆರಳಲೂ ಹಲವು ಶಾಸಕರು ಸಿದ್ಧರಿದ್ದಾರೆ. ಉಳಿದ ಅವಧಿಗೂ ಸಿಎಂ ಆಗಿ ಯಡಿಯೂರಪ್ಪ ಅವರೇ ಮುಂದುವರಿಯಬೇಕು. ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ ಹೇಳಲೇಬೇಕು. ಹೀಗಾಗಿ ನಮಗೆ ಹೈಕಮಾಂಡ್‌ನಿಂದ ಸ್ಪಷ್ಟ ನಿಲುವು ಬರಬೇಕು ಎಂಬ ನಿಲುವನ್ನು ಕಂದಾಯ ಸಚಿವ ಆರ್.ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಳೆದಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ಜತೆ ಮಾತುಕತೆ ನಡೆಸಿದ ನಂತರ ಕಂದಾಯ ಸಚಿವ ಆರ್.ಅಶೋಕ್ , ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ಮೇಲೆ ಬಿಜೆಪಿ ಹೈಕಮಾಂಡ್‌ಗೆ ಸಂಪೂರ್ಣ ವಿಶ್ವಾಸವಿದೆ. ಸಿಎಂ ಯಡಿಯೂರಪ್ಪರನ್ನು ನಂಬಿಯೇ ಬೇರೆ ಪಕ್ಷದಿಂದ ಬಿಜೆಪಿಗೆ 17 ಶಾಸಕರು ಬಂದಿದ್ದರು. ಅವರಿಗೂ ಸಿಎಂ ಯಡಿಯೂರಪ್ಪರ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ

ಸಿಎಂ ಯಡಿಯೂರಪ್ಪ ಜನಪರ ಹೋರಾಟದಿಂದ ಬಂದವರು. ಜನರ ಕಷ್ಟಗಳಿಗೆ ಹೋರಾಟ ಮಾಡಿದವರು. ಅಧಿಕಾರ ಸಿಕ್ಕಾಗ ಹೋರಾಟವನ್ನು ಮುಂದುವರೆಸಿಕೊಂಡು ಅಭಿವೃದ್ಧಿ ಕೆಲಸ ಮಾಡಿದರು. ಬಹುಮತ ಇರುವುದು ಇವತ್ತಿಗೂ ಯಡಿಯೂರಪ್ಪ ಅವರ ಹೆಸರಲ್ಲಿ. ಯಡಿಯೂರಪ್ಪ ಹೆಸರು ಕೇಳಿ ಜನ ಅತಿ ಹೆಚ್ಚು ಮತಗಳನ್ನ ನೀಡಿದ್ದಾರೆ. ಬಹುಮತ ಇಲ್ಲದಾಗಲೂ ಸರ್ಕಾರ ರಚನೆ ಮಾಡಿದವರು ಯಡಿಯೂರಪ್ಪ. ಈಗ ಸಿಎಂ ಯಡಿಯೂರಪ್ಪರ ನಾಯಕತ್ವದಲ್ಲಿ ಅಪಸ್ವರ ಎತ್ತಿದವರ ಪಾತ್ರ ಸರ್ಕಾರ ರಚನೆಯಲ್ಲಿ ಏನಿದೆ? ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರಶ್ನಿಸಿದ್ದಾರೆ

ಯಡಿಯೂರಪ್ಪ ಅಧಿಕಾರಕ್ಕೆ ಬಂದ ಮೇಲೆ ನೈಸರ್ಗಿಕ ಆಪತ್ತು ಎದುರಿಸಿಕೊಂಡು ಬಂದಿದ್ದಾರೆ. ಒಂದು ದಿನವೂ ಕೂಡ ಅವರು ವಿಶ್ರಮಿಸಿಲ್ಲ. ಕೊವಿಡ್ ಕಾಲದಲ್ಲಿ ದಿನಕ್ಕೆ ಐದಾರು ಮೀಟಿಂಗ್ ಮಾಡಿದ್ದಾರೆ. ಇಂಥ ನಾಯಕರ ಬಗ್ಗೆ ಹಗುರವಾಗಿ ಮಾತನಾಡೋದು ಅವರ ಮನಸ್ಸಿಗೆ ನೋವು ತಂದಿರಬಹುದು ಎಂದು ಗೃಹ ಸಚಿವ ಬಸವರಜ್ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಸಹಿ ಪಡೆಯುತ್ತಿರುವ ರೇಣುಕಾಚಾರ್ಯ, ಆದ್ರೆ ಸಹಿ ಅಭಿಯಾನವೇ ಇಲ್ಲ ಎಂದ ಪ್ರಲ್ಹಾದ ಜೋಶಿ

ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ್ದ ರಾಜ್ಯದಲ್ಲಿರುವುದು ಮೂರು ಪಕ್ಷಗಳ ಸರ್ಕಾರ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿ.ಟಿ. ರವಿ

(Minister CP Yogeshwar says Im also contributed to BS yediyurappa became CM of Karnataka)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು