ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಸಚಿವ ಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗರಂ

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಿರುದ್ಧ ಜಮೀನು ವಿಚಾರದಲ್ಲಿ ವಂಚನೆ ಹಾಗೂ ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ವಿಪಕ್ಷಗಳಾ ಬಿಜೆಪಿ ಜೆಡಿಎಸ್ ವಾಗ್ದಾಳಿ ನಡೆಸುತ್ತಿದೆ. ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಸಚಿವ ಡಿ.ಸುಧಾಕರ್ ಗೂಂಡಾವರ್ತನೆ ಎಂದು ಬಿಜೆಪಿ ಹೇಳಿದರೆ, ಕುಮಾರಸ್ವಾಮಿ ಅವರು, ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಸಚಿವ ಸ್ಥಾನ ಕೊಟ್ಟಿದ್ದೀರಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಸಚಿವ ಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗರಂ
ಹೆಚ್ ಡಿ ಕುಮಾರಸ್ವಾಮಿ ಮತ್ತು ಡಿ ಸುಧಾಕರ್
Follow us
Anil Kalkere
| Updated By: Rakesh Nayak Manchi

Updated on:Sep 12, 2023 | 3:48 PM

ಬೆಂಗಳೂರು, ಸೆ.12: ಮರ್ಯಾದೆಯಿಂದ ಕೆಲಸ ಮಾಡಲಿ ಅಂತಾ ಜನರು 135 ಸ್ಥಾನ ಗೆಲ್ಲಿಸಿದ್ದಾರೆ. ಆದರೆ ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಸಚಿವ ಸ್ಥಾನ ಕೊಟ್ಟಿದ್ದೀರಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು. ಸಚಿವ ಡಿ.ಸುಧಾಕರ್ (D.Sudhakar) ವಿರುದ್ಧ ವಂಚನೆ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ನಗರದ ಜೆಪಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ನಿನ್ನೆಯಿಂದ ರಾಜ್ಯದ ಸಚಿವರ ಚರ್ಚೆ ಆಗುತ್ತಿದೆ. ವ್ಯವಹಾರಗಳಿಗೆ ಸಂಬಂಧಿಸಿದ ಪ್ರಕರಣ ಬಗ್ಗೆ ತಕರಾರು ತೆಗೆಯುತ್ತಿಲ್ಲ. ಮುಗ್ಧರ ಜೀವಗಳ ಜೊತೆ ಭಯಭೀತಿ ಉಂಟುಮಾಡುವ ರೀತಿಯಲ್ಲಿ ಮಂತ್ರಿಗಳು ತೋರಿದ್ದಾರೆ ಎಂದರು.

ಇದನ್ನೂ ಓದಿ: ಮೋದಿ ಆಹ್ವಾನಕ್ಕೆ ಕಾಯುತ್ತಿರುವ ಕುಮಾರಸ್ವಾಮಿ, ಗಣೇಶ ಹಬ್ಬಕ್ಕೂ ಮುನ್ನವೇ BJP-JDS ಮೈತ್ರಿ ಅಧಿಕೃತ ಘೋಷಣೆ ಸಾಧ್ಯತೆ

ದಲಿತರ ಉದ್ಧಾರಕ ಅಂತ ಸಿದ್ದರಾಮಯ್ಯ ಅವರು ಹೇಳುತ್ತಾರೆ. ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತಾ ಕೇಳುತ್ತೀರ, ನಿಮಗೇನಾದರೂ ಮಾನಮರ್ಯಾದೆ ಇದೆಯಾ ಸಿದ್ದರಾಮಯ್ಯನವರೇ? ಅಟ್ರಾಸಿಟಿ ಕೇಸ್ ಹಾಕಿದ್ದಾರೆ. ಅಧಿಕಾರಿಗಳಿಗೆ ಎಷ್ಟು ಗಂಟೆಯಲ್ಲಿ ನೀವು ದೂರವಾಣಿ ಕರೆ ಮಾಡಿದ್ದೀರಿ? ಆ ಅಧಿಕಾರಿಯನ್ನು ಮೊದಲು‌ ಅಮಾನತು ಅಂತಾ ಮಾತನಾಡಿದ್ದೀರಿ. ಇದೇನಾ ನೀವು ದಲಿತರ ಪರ ಅಂತಾ ಹೇಳುವುದು ಎಂದರು.

ದಲಿತರ ರಕ್ಷಣೆ ಅಂತಾ ಹೇಳುತ್ತೀರಿ, ಇದೇ ನೀವು ಮಾಡುವ ಕೆಲಸ. ವ್ಯವಹಾರ ಮಾಡುವಾಗ ಆ ಮಂತ್ರಿ ಯಾವ ಪಕ್ಷದಲ್ಲಿದ್ದರೋ ಗೊತ್ತಿಲ್ಲ. ಆ ಮಂತ್ರಿ ಬಿಜೆಪಿಯಲ್ಲಿದ್ದರೋ, ಕಾಂಗ್ರೆಸ್​ನಲ್ಲಿ ಇದ್ದರೋ ಗೊತ್ತಿಲ್ಲ. ಇಬ್ಬರು ದಲಿತ ಮಹಿಳೆಯರ ಮೇಲೆ ಮಚ್ಚು ಹಿಡಿದು ಹೋಗಿದ್ದೀರಿ. ಮಚ್ಚು ಹಿಡಿದು ಹೋಗುವುದಕ್ಕಾ ಜನರು ವೋಟ್ ಹಾಕಿದ್ದು? ಇದು ದಲಿತ ವಿರೋಧಿ, ಜನ ವಿರೋಧಿ ಸರ್ಕಾರ, ಇದೊಂದು ಧನದಾಹಿಗಳೇ ತುಂಬಿಕೊಂಡಿರುವ ಮಂತ್ರಿಮಂಡಲ ಎಂದು ಆಕ್ರೋಶ ಹೊರಹಾಕಿದರು.

ಕಳೆದ ವಿಧಾನಸಭಾ ಕಲಾಪದಲ್ಲಿ ಒಂದು ಬಿಲ್ ಪಾಸ್ ಮಾಡಿದರು. ದಲಿತರ ಭೂಮಿಗಳನ್ನ ಹಲವಾರು ಲಪಟಾಯಿಸುತ್ತಿದ್ದಾರೆ. ಅವರಿಗಾಗಿ ವಿಧೇಯಕ ಮಾಡಬೇಕು ಅಂತ ಕೃಷ್ಷಬೈರೇಗೌಡ ಅವರು ಬಿಲ್ ತಂದಿದ್ದಾರೆ. ಕಾನೂನು ಪ್ರಕಾರ ಇದ್ದರೆ ನಮ್ಮದೇನು ತಕರಾರು ಇಲ್ಲ. ಸದ್ಯ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿಗಳಿಗೆ ನಾನು ಪ್ರಶಂಸೆ ವ್ಯಕ್ತಪಡಿಸುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Tue, 12 September 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್