Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಿದ್ದಾರೆ; ಸಚಿವ ದಿನೇಶ್​ ಗುಂಡೂರಾವ್ ಆರೋಪ

ಬಿಜೆಪಿಯವರು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿಯವರು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಿದ್ದಾರೆ; ಸಚಿವ ದಿನೇಶ್​ ಗುಂಡೂರಾವ್ ಆರೋಪ
ದಿನೇಶ್​ ಗುಂಡೂರಾವ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 09, 2023 | 11:49 AM

ಬೆಂಗಳೂರು: ಬಿಜೆಪಿ(BJP)ಯವರು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್(Health Minister Dinesh Gundu Rao) ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿ (Bengaluru) ನಲ್ಲಿ ಮಾತನಾಡಿದ ಅವರು ‘ರಾಜ್ಯದ ನೂರಾರು ಎಕರೆ ಸರ್ಕಾರಿ ಜಾಗವನ್ನು ಆರ್​ಎಸ್​ಎಸ್​ (RSS) ಸೇರಿದಂತೆ ತಮ್ಮ ಸಂಸ್ಥೆಗಳಿಗೆ ನೀಡಿದ್ದಾರೆ. ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಗೆ ಹೀಗೆ ಮಾಡಿದ್ದು, ಕಾನೂನು ಉಲ್ಲಂಘಿಸಿ ಭೂಮಿ ನೀಡಿರುವುದರ ಕುರಿತು ಸಿಎಂ ಹಾಗೂ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದರು.

ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ. ಅಧಿಕಾರದಲ್ಲಿದ್ದಾಗ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದರು. ಇದೇ ಕಾರಣಕ್ಕೆ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದರು ಎಂದು ಬಿಜೆಪಿ ವಿರುದ್ದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಆರೋಪಗಳ ಸುರಿಮಳೆ ಸುರಿಸಿದ್ದಾರೆ. ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ. ಹಾಗಾಗಿ ರಾಜ್ಯದಲ್ಲಿ 108 ಡಯಾಲಿಸಿಸ್ ಟೆಂಡರ್​ಗಳನ್ನು ರದ್ದುಪಡಿಸಿದ್ದೇವೆ.​ ಅಧಿಕಾರಿಗಳು, ವೈದ್ಯರ ಕಾರ್ಯ ನಿರ್ವಹಣೆ ಸರಿಪಡಿಸಬೇಕಿದೆ. ಸಾಮಾನ್ಯ ಜನರಿಗೆ ಗುಣಮಟ್ಟದ ಚಿಕಿತ್ಸೆ ಕೊಡಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ:Free Bus Travel For Women Scheme: ಭಾನುವಾರ ಬಿಎಂಟಿಸಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿದ್ದರಾಮಯ್ಯ…!

ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಟ್ವೇಟ್​ ಮಾಡಿದ್ದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಮಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಸದ್ಯ ಈ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮಾಡಿದ್ದರು, ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ