ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಜನರಲ್ಲಿ ಸಾಕಷ್ಟು ಗೊಂದಲಗಳಿವೆ. ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರ ಹೇಳಿಕೆ ಮತ್ತೆ ಗೊಂದಲ ಮೂಡಿಸಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆ ಸಂಬಂಧ ಇಲಾಖಾ ಸಚಿವರ ಜೊತೆ ಸಿಎಂ ಸಿದ್ಧರಾಮಯ್ಯ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಕ್ಕಳು ತೆರಿಗೆ ಪಾವತಿಸಿದರೆ ಆ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಇಲ್ಲ. ಪತಿ, ಪತ್ನಿ ಇಬ್ಬರಲ್ಲಿ ಒಬ್ಬರು ತೆರಿಗೆ ಪಾವತಿಸಿದರೆ ಯೋಜನೆ ಅನ್ವಯಿಸಲ್ಲ. ಈ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದಿದ್ದಾರೆ.
ಈಗ ಮಕ್ಕಳು ತೆರಿಗೆ ಪಾವತಿಸಿದರೆ ಆ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಇಲ್ಲ. ಗೃಹ ಲಕ್ಷ್ಮೀ ಯೋಜನೆ ಅಡಿ ಮನೆಯೊಡತಿಗೆ 2 ಸಾವಿರ ರೂ. ಸಿಗಲ್ಲ. BPL ಕಾರ್ಡ್ ಇಲ್ಲದ ಮಹಿಳೆಯರಿಗೂ ಯೋಜನೆ ವಿಸ್ತರಣೆಗೆ ಚಿಂತನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಹಲವರು ಈಗ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಅಧಿಕಾರಿಗಳು ಸುಖಾಸುಮ್ಮನೆ ಅರ್ಜಿ ತಿರಸ್ಕರಿಸುವಂತಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: Karnataka BJP: ಇಂದು ಬಿಜೆಪಿಯ ಮಹತ್ವದ ಸಭೆ, ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?
ಸರ್ಕಾರಿ ನೌಕರರಿಗೆ ಯೋಜನೆ ಸಿಗಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ಇನ್ನೊಮ್ಮೆ ಉತ್ತರ ಕೊಡ್ತೀನಿ. ಯಾರಿಗೆ ಉಪಯೋಗ ಆಗಬೇಕು ಅವರಿಗೆ ಯೋಜನೆ ಸಿಗಲಿದೆ. ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಹಣ ಕೊಡ್ತೀವಿ ಅಂತ ಹೇಳಿದ್ರು. ಅವರನ್ನ ಕೇಳಿ ಎಂದು ಟಾಂಗ್ ನೀಡಿದರು.
ಗೃಹಲಕ್ಷ್ಮೀ ಯೋಜನೆಗೆ ಆನ್ಲೈನ್ ಮತ್ತು ನಾಡಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಯಲ್ಲಿ ನಮೂದಿಸಿರುವ ಕಾಲಂ ವಿಚಾರ ಸಿಎಂ ಗಮನಕ್ಕೆ ತಂದಿದ್ದೇವೆ. ವೋಟರ್ ಐಡಿ, ಪಾಸ್ ಬುಕ್ ಸಂಖ್ಯೆ ಬೇಡವೆಂದು ಸಿಎಂ ಹೇಳಿದ್ದಾರೆ ಎಂದರು.
ಇದನ್ನೂ ಓದಿ: ವರ್ಷಾಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಸಿದ್ಧತೆ: ಸಭೆಯಲ್ಲಿ ಸಿದ್ದರಾಮಯ್ಯಗೆ ಮಾಜಿ ಕಾರ್ಪೊರೇಟರ್ ಮಹತ್ವದ ಸಲಹೆ
ಸಿಎಂ ಸಿದ್ಧರಾಮಯ್ಯ ಈ ಕುರಿತಾಗಿ ಮಾತನಾಡಿದ್ದು, ಬಿಪಿಎಲ್, ಎಪಿಎಲ್ ಕಾರ್ಡ್ದಾರರಿಗೆ ಗೃಹಲಕ್ಷ್ಮೀ ಯೋಜನೆ ಅನ್ವಯವಾಗಲಿದೆ ಎಂದು ಸ್ಪಷ್ಟನೆ ನೀಡಿದರು. ತೆರಿಗೆ ಪಾವತಿದಾರರು, GST ನೋಂದಣಿದಾರರಿಗೆ ಯೋಜನೆ ಇಲ್ಲ. ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತೆ ಎಂದು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:08 pm, Thu, 8 June 23