ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸೂಚನೆ

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿ ಕಳಪೆ ಮತ್ತು ಕೊಳೆತ ಮೊಟ್ಟೆಗಳು ವಿತರಿಸುತ್ತಿರುವ ವಿಚಾರ ಬಯಲಾಗಿದೆ. ಈ ಕುರಿತಾಗಿ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡಿದ್ದಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.​

Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 13, 2023 | 5:23 PM

ಬೆಂಗಳೂರು: ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡಿದ್ದಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಮತ್ತು ಸಪ್ಲೈ ಲಿಸ್ಟ್​​​ನಿಂದಲೂ ಕೈ ಬಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಯಾವುದೇ ಕಂಟ್ರೋಲ್ ಇಲ್ಲದೆ ಮೊಟ್ಟೆ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕೆಂಬುದು ಇಲಾಖೆ ಉದ್ದೇಶ. ಆದರೆ ಇಲಾಖೆ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ ಎಂದರು.

ರಾಮನಗರ, ಹಾಸನ, ಉತ್ತರ ಕರ್ನಾಟಕದ ಹಲವೆಡೆ ಈ ರೀತಿ ಆಗಿದೆ. ಮೊಟ್ಟೆ ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಎಲ್ಲೆಲ್ಲಿ ಈ ರೀತಿ ನಡೆದಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲ. ಹಾಗಾಗಿ ಕೂಲಂಕಷವಾಗಿ ಮಾಹಿತಿ ಪಡೆಯುತ್ತೇನೆ. ಈಗಾಗಲೇ ಮೊಟ್ಟೆ ಪೂರೈಕೆ ಸಂಬಂಧಿಸಿದಂತೆ ಸುಮಾರು ಪ್ರಸ್ತಾಪ ಇದೆ. ಸುಮ್ಮನೆ ಡಿಸೈಡ್ ಮಾಡೋಕೆ ಆಗಲ್ಲ ಎಂದು ಹೇಳಿದರು.

ಇದನ್ನೂ ಓದಿ: ಅಂಗನವಾಡಿಗಳಲ್ಲಿ ಗರ್ಭಿಣಿ, ಮಕ್ಕಳಿಗೆ ಕೊಳೆತ ಮೊಟ್ಟೆ ಭಾಗ್ಯ; ಸರ್ಕಾರದ ವಿರುದ್ಧ ಜನರ ಆಕ್ರೋಶ

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿ ಕಳಪೆ ಮತ್ತು ಕೊಳೆತ ಮೊಟ್ಟೆಗಳು ವಿತರಿಸುತ್ತಿರುವ ವಿಚಾರ ಬಯಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಲಕ್ಷ್ಮಿಪುರ ಅಂಗನವಾಡಿ ವ್ಯಾಪ್ತಿಯಲ್ಲಿ ಕಳಪೆ ಮೊಟ್ಟೆ ವಿತರಿಸಲಾಗಿದೆ. ಕೆಟ್ಟು ಹೋದ ಮೊಟ್ಟೆಗಳನ್ನೇ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ವಿತರಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

ಹಾವೇರಿಯಲ್ಲೂ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಗಳ ಪೂರೈಕೆ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೇಜವಾಬ್ದಾರಿಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅಂಗನವಾಡಿಯಲ್ಲಿ ಕೊಳೆತ ಮೊಟ್ಟೆ ಪೂರೈಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಅದೇ ರೀತಿಯಾಗಿ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನತ್ತೂರು ಅಂಗನವಾಡಿಯಲ್ಲಿ ಕೂಡ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದೆ. ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್