“ನನ್ನ ಮೌನವೂ ವೀಕ್ನೆಸ್ ಅಲ್ಲಾ” ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ ಹೆಬ್ಬಾಳ್ಕರ್

ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ನನ್ನ ಮೌನವೂ ವೀಕ್ನೆಸ್ ಅಲ್ಲಾ ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Follow us
Sahadev Mane
| Updated By: ವಿವೇಕ ಬಿರಾದಾರ

Updated on:Oct 21, 2023 | 12:40 PM

ಬೆಳಗಾವಿ ಅ.21: ಬೆಳಗಾವಿ (Belagavi) ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಮಾತನಾಡಿ “ನನ್ನ ಮೌನವೂ ವೀಕ್ನೆಸ್ ಅಲ್ಲಾ” ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್​ನಲ್ಲಿ ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೊಗಲಿಲ್ಲ ಎಂದು ತಮ್ಮ ಮತ್ತು ಸತೀಶ್​ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟವಿದೆ ಎಂಬ ವಂದತಿಗೆ ಸ್ಪಷ್ಟನೆ ನೀಡಿದರು.

ಹೈಕಮಾಂಡ್ ಯಾಕೆ ತಡೆಯಿತು ಅನ್ನೋದನ್ನ ಸತೀಶ್ ಜಾರಕಿಹೊಳಿ ಅವರಿಗೆ ಕೇಳಿ. ಡಿಸಿಎಂ ಡಿಕೆ ಶಿವಕುಮಾರ್​ ಅವರ ಬೆಳಗಾವಿ ಭೇಟಿಗೆ ಶಾಸಕರು, ಜಿಲ್ಲಾಧ್ಯಕ್ಷರು ಬಾರದಿರುವ ವಿಚಾರವಾಗಿ ಮಾತನಾಡಿದ ಅವರು ಅಧ್ಯಕ್ಷರ ಪ್ರವಾಸದಲ್ಲಿ ಮೊದಲು ಗೊಂದಲವಿತ್ತು. ಯಾರಾದರೂ ಬಂದು ಸ್ವಾಗತ ಮಾಡಬೇಕಿತ್ತು ಎಂದು ಹೇಳಿದರು.

ನಾವು ಸ್ಟ್ರಾಂಗು ಇರಲ್ಲಾ, ವೀಕ್ ಇರಲ್ಲಾ: ಸತೀಶ್​ ಜಾರಕಿಹೊಳಿ

ನಾವು ಸ್ಟ್ರಾಂಗು ಇರಲ್ಲಾ, ವೀಕ್ ಇರಲ್ಲಾ. ಪಕ್ಷ ಅಧಿಕಾರಕ್ಕೆ ಬರಲು ನನ್ನ ಜತೆ ಸಾವಿರಾರು, ಲಕ್ಷಾಂತರ ಕಾರ್ಯಕರ್ತರ ಪಾತ್ರವಿದೆ. ನಾವು ಪ್ರವಾಸ ಹೋಗೋದಕ್ಕಾಗಲಿ, ಇನ್ನೊಂದು ಪವರ್ ಸೆಂಟರ್ ಮಾಡುವ ಉದ್ದೇಶ ನಮ್ಮದಿಲ್ಲ. ಸಮಾನ ಮನಸ್ಕರ ಇದ್ದೆ ಇರುತ್ತೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಬಣ ಆಗಲಿ, ಬೇರೆ ಗುಂಪು ಮಾಡಬೇಕು ಅನ್ನೋದಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಸ್ವಾತಂತ್ರ್ಯದ ಸಂಭ್ರಮದಲ್ಲೇ ಮತ್ತೆ ಮುನ್ನಲೆಗೆ ಬಂದ ಬೆಳಗಾವಿ ಜಿಲ್ಲೆ ವಿಭಜನೆ ಕೂಗು; ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು

ಸಂದೇಶ ರವಾನೆ ಮಾಡಬೇಕಿತ್ತು ಸಂದೇಶ ರವಾನೆ ಆಯ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಸಂದೇಶ ಇಲ್ಲ ನಾವೆಲ್ಲ ಕೂಡಿ ಇದ್ದೇವೆ. ಕಾಂಗ್ರೆಸ್ ಪಕ್ಷದ ಒಳಗೆ ಇರುವ ಗುಟ್ಟದು. ಪಕ್ಷದಲ್ಲಿ ಯಾವ ಗೊಂದಲ ಇಲ್ಲ. ಚಮಕ್ ಕೊಟ್ಟು ಮುಂದುವರೆಸಬೇಕು. ಚಮಕ್ ಕೊಟ್ಟು ಗಯಾಬ್ ಆದ್ರೆ ಹೇಗೆ? ನಾವೆಲ್ಲ ಒಟ್ಟಾಗಿ ಇದ್ದೇ ಇರುತ್ತೇವೆ, ಮೆಜಾರಿಟಿ ಜನ ನಮ್ಮ ಜತೆಗೆ ಇರುತ್ತಾರೆ. ಇದಕ್ಕೆ ಬೇರೆ ರೀತಿ ಅರ್ಥ ಕಲ್ಪಿಸುವ ಕೆಲಸ ಬೇಡ. ಸಿಎಂ ಇದ್ದಾರೆ ಅಧ್ಯಕ್ಷರಿದ್ದಾರೆ ಸಮಸ್ಯೆ ಇದ್ದರೆ ಅವರ ಗಮನಕ್ಕೆ ತರುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ನಮ್ಮಲ್ಲಿ ಸ್ವಾಭಾವಿಕವಾಗಿ ಗುಂಪಿದೆ ಇಲ್ಲಾ ಅಂತೇನಿಲ್ಲ

ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂದು ನಾವು ಹೇಳುತ್ತೇವೆ. ಜೆಡಿಎಸ್​ನಲ್ಲಿ ಎರಡು ಗುಂಪಿದೆ, ಎಲ್ಲವೂ ಸರಿ ಇಲ್ಲ ಎಂದು ನಾವೂ ಹೇಳುತ್ತೇವೆ. ಕುಮಾರಸ್ವಾಮಿ ಅವರದು, ಸಿಎಂ ಇಬ್ರಾಹಿಂ ಅವರದ್ದು ಒಂದು ಗುಂಪಿದೆ. ಅವರನ್ನ ಅವರು ಹೊರ ಹಾಕಿದ್ದರೆ, ಇವರನ್ನ ಅವರು ಹೊರ ಹಾಕಿದ್ದಾರೆ. ಬಿಜೆಪಿಯಲ್ಲಿ ಮೂರು ಗುಂಪಿದೆ ಇಲ್ಲಾ ಅಂತೇನಿಲ್ಲ. ನಮ್ಮಲ್ಲಿ ಸ್ವಾಭಾವಿಕವಾಗಿ ಗುಂಪಿದೆ ಇಲ್ಲಾ ಅಂತೇನಿಲ್ಲ. ಪಕ್ಷ ಬಂದಾಗ ನಾವೆಲ್ಲಾ ಒಂದಾಗುತ್ತೇವೆ. ಜಿಲ್ಲೆಯಲ್ಲಿ ಬೇರೆ ಬೇರೆ ಇದ್ದರೂ ಚುನಾವಣೆ ಬಂದಾಗ ಒಂದಾಗುತ್ತೇವೆ ಎಂದು ಹೇಳುವ ಮೂಲಕ ಬೆಳಗಾವಿ ರಾಜಕಾರಣದಲ್ಲಿ ಎರಡು ಗುಂಪು ಇದೆ ಎಂದು ಪರೋಕ್ಷವಾಗಿ ಒಪ್ಪಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:27 pm, Sat, 21 October 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?