AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಚಿವ ಮುರುಗೇಶ್ ನಿರಾಣಿ ವಾಗ್ದಾಳಿ

ಶವ ಸಂಸ್ಕಾರ ಮಾಡುವ ಸಂಧರ್ಭದಲ್ಲೂ ನೀನು ರಾಜಕೀಯ ಮಾಡ್ಕೊಂಡು, ಶವವನ್ನ ಎಕ್ಜಿಬಿಷನ್ ಮಾಡೋಣ ಅನ್ನೋದು ಎಷ್ಟರಮಟ್ಟಿಗೆ ಸರಿ. ಶಾಸಕಿ ಶವ ಇಟ್ಕೊಂಡು ರಾಜಕೀಯ ಮಾಡೋಕೆ ಪ್ರಯತ್ನ ಮಾಡಿದ್ರು.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಚಿವ ಮುರುಗೇಶ್ ನಿರಾಣಿ ವಾಗ್ದಾಳಿ
ಸಚಿವ ಮುರುಗೇಶ್ ನಿರಾಣಿ
TV9 Web
| Edited By: |

Updated on:Apr 15, 2022 | 5:24 PM

Share

ಬಾಗಲಕೋಟೆ: ನನ್ನ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ತಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎನ್ನುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾಲ್ಕು ಕೋಟಿ ರೂಪಾಯಿ ಕೆಲಸ ಮಾಡಿದ್ದ ಗುತ್ತಿಗೆದಾರ (Contractor) ಸಂತೋಷ್ ಪಾಟೀಲ್​ಗೆ ಏಕೆ ಬೆಂಬಲ ನೀಡಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ವಾಗ್ದಾಳಿ ನಡೆಸಿದರು. ಜಿಲ್ಲೆಯ ಇಳಕಲ್ ‌ಹ್ಯಾಲಿಪ್ಯಾಡ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿಮ್ಮದೆ ಕ್ಷೇತ್ರದಲ್ಲಿ ಕಾಮಗಾರಿ ನಡೆಸಿದ್ದ ಸಂತೋಷ್ ಪಾಟೀಲ್​ಗೆ ನೀವು ಸಹಕಾರ ಕೊಟ್ಟಿದ್ದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಾವೊಬ್ಬ ರಾಷ್ಟ್ರೀಯ ನಾಯಕರು ಎಂದು ಹೇಳಿಕೊಂಡು‌ ತಿರುಗಾಡುತ್ತೀರಿ. ನೀವು, ಇದನ್ನ ಸರಿಯಾದ ರೀತಿಯಿಂದ ನಿರ್ವಹಣೆ ಮಾಡಬೇಕಿತ್ತು. ನಿಮ್ಮ ಕ್ಷೇತ್ರದಲ್ಲಿ ಕೆಲಸ ಆಗಿದ್ದಾಗ ನೀವೇ ಅವರನ್ನ ಕರೆದುಕೊಂಡು ಹೋಗಿ ಬಿಲ್ ಕೊಡಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು ಎಂದು ಶಾಸಕಿಗೆ ಚಾಟಿ ಬೀಸಿದರು.

ಕ್ಷೇತ್ರದಲ್ಲಿ ಕೆಲಸ ಮಾಡಿರುವುದು ನಿಮ್ಮ ಗಮನಕ್ಕೆ ‌ಬಂದ ಕೂಡಲೇ ಹಣ ಬಿಡುಗಡೆ ಮಾಡಿಕೊಡುವ ಕೆಲಸವನ್ನು ಮಾಡಬೇಕಿತ್ತು. ಸಂತೋಷ್ ಪಾಟೀಲ್ ಕಷ್ಟದಲ್ಲಿ ಇರುವುದು ನಿನಗೆ ಗೊತ್ತಿತ್ತು. ನೀವು ಏಕೆ ಸಹಾಯ ಮಾಡಿಲ್ಲ ಎಂದು ನಿರಾಣಿ ಅವರು ಪ್ರಶ್ನಿಸಿದರು. ಸಾವಿರಾರು ಕೋಟಿ ತರುವ ನಿಮಗೆ ನಾಲ್ಕು ಕೋಟಿ ರೂಪಾಯಿ ಹೊರೆಯಾಗುತ್ತಿರಲಿಲ್ಲ. ನಾಲ್ಕು ಕೋಟಿ ರೂಪಾಯಿ ಕೊಡಿಸಲು ಆಗದಿರುವ ನೀವು ಅದರ ನೈತಿಕ ಹೊಣೆಗಾರಿಕೆಯನ್ನು ನೀವೇ ಹೊರಬೇಕು ಎಂದು ಕಿಡಿಕಾರಿದರು. ಘಟನೆ ನಡೆದ ಬಳಿಕ ‌ಶಾಸಕಿ ಶವ ಇಟ್ಟುಕೊಂಡು ರಾಜಕೀಯ ಮಾಡುವ ಪ್ರಯತ್ನ ಮಾಡಿದರು. ಸಂತೋಷ ಪಾಟೀಲ್ ಮನೆಯವರು ಹಾಗೂ ಅವರ ಗ್ರಾಮದವರು ಆಸ್ಪದ ಕೊಟ್ಟಿಲ್ಲ. ಅಲ್ಲದೇ ಶವ ಸಂಸ್ಕಾರ ಮಾಡುವ ಸಂಧರ್ಭದಲ್ಲೂ ಶವವನ್ನು ವಸ್ತುಪ್ರದರ್ಶನ ಮಾಡಲು ಹೊರಟಿದ್ದು ಎಷ್ಟರಮಟ್ಟಿಗೆ ಸರಿ ಎಂದು ಸಚಿವರು ಕೇಳಿದರು.

ಪ್ರಕರಣ ಕುರಿತು ಈಗಾಗಲೇ ಎಫ್ಐಆರ್ ಆಗಿದೆ. ಆರೋಪಿ 1, 2, 3 ಎಂದು ಮಾಡಿದ್ದಾರೆ.‌ ನಮ್ಮ ಪೊಲೀಸ್ ಇಲಾಖೆಯವರು ಶಕ್ತರಿದ್ದಾರೆ. ಬರುವ ದಿನದಲ್ಲಿ ಸತ್ಯಾಸತ್ಯತೆ ಗೊತ್ತಾಗಲಿದೆ. ಸರಕಾರ ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಚಿವ ‌ನಿರಾಣಿ ಸ್ಪಷ್ಟಪಡಿಸಿದರು. ಆರೋಪ ಮಾಡಿದ ತಕ್ಷಣ ಬಂಧಿಸಬೇಕು ಎಂಬುದು ‌ಸರಿಯಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂದು ಸಚಿವ ಈಶ್ವರಪ್ಪ ಅವರೇ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದರು. ಕೆ.ಎಸ್ ಈಶ್ವರಪ್ಪನವರ ಮೇಲೆ ಬಂದಿರುವ ಆಪಾದನೆ ಸತ್ಯಕ್ಕೆ ದೂರವಾಗಿದ್ದು, ಅವರ ಮೇಲೆ ಆಪಾದನೆ ಮಾಡುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ₹ 5 ಲಕ್ಷಕ್ಕಿಂತ ಹೆಚ್ಚಿನ ಕಾಮಗಾರಿ ಮಾಡಬೇಕಾದರೆ ಟೆಂಡರ್ ಪ್ರಕ್ರಿಯೆ ಮಾಡಲೇಬೇಕು ಅದೊಂದು ಪ್ರಕ್ರಿಯೆ ಇದೆ. ಇಲ್ಲಿ ಯಾವ ಘಟನೆಗಳು ನಡೆದಿಲ್ಲ ಎಂದು ಹೇಳಿದರು.

ಇನ್ನೂ ಸಚಿವ ಈಶ್ವರಪ್ಪ ಅವರು ರಾಜೀನಾಮೆ ಕೊಟ್ಟ ಮೇಲೂ ಬಂಧಿಸಬೇಕು. ಒತ್ತಡ ಹಾಕಿದರೆ ಅವರ ಮನಸ್ಸಿನ ಮೇಲೆ ಏನು ಪರಿಣಾಮ ಬೀರಬಹುದು.? ತಪ್ಪು ಮಾಡಿದ್ದಾರೆ ಎಂದಾಗ ಇದೆಲ್ಲಾ ಸರಿ. ಆದರೆ ತಪ್ಪೇ ಮಾಡಿಲ್ಲ ಎಂದ ಮೇಲೆ ಪ್ರತಿಪಕ್ಷದವರ ಆಗ್ರಹ ಸರಿಯೇ ಎಂದು ನಿರಾಣಿ ಅಸಮಾಧಾನ ಹೊರಹಾಕಿದರು. ತನಿಖೆ ಮಾಡಿದಾಗ ನೂರಕ್ಕೆ ನೂರು ಈಶ್ವರಪ್ಪನವರು ತಪ್ಪು ಮಾಡಿಲ್ಲ ಎನ್ನುವುದು ಸಾಬೀತು ಆಗಲಿದೆ ಎಂಬ ವಿಶ್ವಾಸವನ್ನು ‌ಸಚಿವ ಮುರುಗೇಶ್ ನಿರಾಣಿ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಆಪ್ ಆದ್ಮಿ ರಾಜಕೀಯ ಅನಾಥಾಶ್ರಮ ಅಲ್ಲ: ಯುವಕರೇ ರಾಜಕೀಯಕ್ಕೆ ಬನ್ನಿ ಎಂದ ಭಾಸ್ಕರ್ ರಾವ್

Published On - 3:30 pm, Fri, 15 April 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ