ಮಂಡ್ಯ: ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ; ಸಚಿವ ಎನ್.ಚಲುವರಾಯಸ್ವಾಮಿ

ಶಾಸಕ ಯತ್ನಾಳ್ 3 ವರ್ಷಗಳ ಕಾಲ ಬಿಜೆಪಿ ಬಗ್ಗೆ ಮಾತನಾಡಿದ್ದರು. ಬಿಜೆಪಿ ಶಾಸಕ ಯತ್ನಾಳ್‌ಗೆ ಒಂದೇ ಒಂದು ನೋಟಿಸ್ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ಮಾತನಾಡಿದ ಒಂದೇ ದಿನಕ್ಕೆ ನೋಟಿಸ್ ಕೊಟ್ಟಿದೆ. ಇದೇ ಬಿಜೆಪಿ, ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ: ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ; ಸಚಿವ ಎನ್.ಚಲುವರಾಯಸ್ವಾಮಿ
ಎನ್​ ಚೆಲುವರಾಯಸ್ವಾಮಿ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 15, 2023 | 3:00 PM

ಮಂಡ್ಯ, ಸೆ.15: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಉಭಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಅದರಂತೆ ಇದೀಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ‘ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ ಎಂದು ಮಂಡ್ಯ (Mandya) ದಲ್ಲಿ ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದ್ದಾರೆ. ಜನರಿಗಾಗಿ ಬಿಜೆಪಿ ಜೊತೆ ಮೈತ್ರಿ ಎಂದು ಜೆಡಿಎಸ್​ನವರು ಹೇಳುತ್ತಿದ್ದಾರೆ. ಪಕ್ಷದ ಅಸ್ತಿತ್ವಕ್ಕಾಗಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್‌ ಇಬ್ಬರಿಗೂ ಇದು ಅನಿವಾರ್ಯ ಆಗಿದೆ ಎಂದರು.

ಇನ್ನು ಸಂದಿಗ್ಧ ಪರಿಸ್ಥಿತಿಯಲ್ಲಿ ದಸರಾ ಆಚರಣೆ ವಿಚಾರ ‘ದಸರಾ ಆಚರಣೆ ಪರಂಪರೆಯಿಂದ ಬಂದಿದೆ. ದಸರಾವನ್ನು ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಲು ಆಗಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಸಾಧ್ಯ ಅಷ್ಟು ಸರಳವಾಗಿ ಮಾಡುತ್ತೇವೆ ಎಂದರು.

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್​​ ಪರೋಕ್ಷ ವಾಗ್ದಾಳಿ ‘ಎಂಎಲ್​ಸಿ ಹರಿಪ್ರಸಾದ್​​ ಹೇಳಿಕೆಯನ್ನು ಇಡೀ ಪಕ್ಷ ಖಂಡಿಸಿದೆ. ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನಲ್ಲಿ ಹಲವು ಅಧಿಕಾರ ಅನುಭವಿಸಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಮಾತನಾಡಿರೋದು ಪಕ್ಷಕ್ಕೆ ಅಗೌರವ ತಂದಿದ್ದು, ಹರಿಪ್ರಸಾದ್​​​​ ಇನ್ಮುಂದೆ ಹೀಗೆ ಮಾತನಾಡಲ್ಲ ಅಂದುಕೊಂಡಿದ್ದೇನೆ ಎಂದು ಮಂಡ್ಯದಲ್ಲಿ ಹೇಳಿದರು.

ಇದನ್ನೂ ಓದಿ:ಜೆಡಿಎಸ್ ಜೊತೆ ಮೈತ್ರಿ ಬೆಳೆಸಲು ಯಡಿಯೂರಪ್ಪ ಅದ್ಯಾವ ನೈತಿಕತೆಯೊಂದಿಗೆ ಮುಂದಾಗಿದ್ದಾರೋ? ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಇನ್ನು ಶಾಸಕ ಯತ್ನಾಳ್ 3 ವರ್ಷಗಳ ಕಾಲ ಬಿಜೆಪಿ ಬಗ್ಗೆ ಮಾತನಾಡಿದ್ದರು. ಬಿಜೆಪಿ ಶಾಸಕ ಯತ್ನಾಳ್‌ಗೆ ಒಂದೇ ಒಂದು ನೋಟಿಸ್ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ಮಾತನಾಡಿದ ಒಂದೇ ದಿನಕ್ಕೆ ನೋಟಿಸ್ ಕೊಟ್ಟಿದೆ. ಇದೇ ಬಿಜೆಪಿ, ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ. ರಾಷ್ಟ್ರೀಯ ನಾಯಕರಿಗೆ ನಮ್ಮನ್ನು ಕಂಟ್ರೋಲ್ ಮಾಡುವ ಶಕ್ತಿ ಇದೆ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ