ಚಾರ್ಜ್​​ಶೀಟ್ ಬಿಡುಗಡೆ: ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದ ಪ್ರಿಯಾಂಕ್ ಖರ್ಗೆ

| Updated By: Rakesh Nayak Manchi

Updated on: Aug 29, 2023 | 4:25 PM

ಕಾಂಗ್ರೆಸ್ ಸರ್ಕಾರ 100 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಇತ್ತ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್​ಶೀಟ್ ಬಿಡುಗಡೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ನೂರು ದಿನಗಳಾದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಚಾರ್ಜ್​​ಶೀಟ್ ಬಿಡುಗಡೆ: ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
Follow us on

ಕಲಬುರಗಿ, ಆಗಸ್ಟ್ 29: ಕಾಂಗ್ರೆಸ್ ಸರ್ಕಾರ 100 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಇತ್ತ ಸರ್ಕಾರದ ವಿರುದ್ಧ ಬಿಜೆಪಿ (BJP) ಚಾರ್ಜ್​ಶೀಟ್ ಬಿಡುಗಡೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ನೂರು ದಿನಗಳಾದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಕಲಬುರಗಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ಏನು ಮಾಡಬೇಕು ಎಂಬುದೇ ಅರ್ಥವಾಗುತ್ತಿಲ್ಲ. ನಾವು ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿದ್ದೇವೆ. ಬಿಜೆಪಿಯವರು ಅಧಿಕಾರ ಕಳೆದುಕೊಂಡು 100 ದಿನ ಆಯಿತು. ಆದರೆ ದೆಹಲಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ 100 ದಿನದ ನೂರಾರು ಹಳವಂಡಗಳು: ವಿಡಿಯೋ ಹಂಚಿಕೊಂಡ ಬಿಜೆಪಿ

ಬಿಜೆಪಿಗರು ಬ್ಯಾರಿಕೇಡ್ ಬಂಧಿಗಳಾಗಿದ್ದಾರೆ ಎಂದು ಹೇಳಿದ ಪ್ರಿಯಾಂಕ್​​ ಖರ್ಗೆ, ಬೆಂಗಳೂರಿಗೆ ಮೋದಿ ಬಂದರೂ ಅವರನ್ನು ಭೇಟಿ ಮಾಡಲು ಆಗಿಲ್ಲ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಏನೇ ಹೇಳಿದರೂ ದಾಖಲೆ ಕೇಳುತ್ತಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಯಾವ ದಾಖಲೆಗಳಿವೆ? ಎಲ್ಲಿ ಹೋಯ್ತು ಪೆನ್​ಡ್ರೈವ್​​, ಆಡಿಯೋ ಬಾಂಬ್ ಎಂದು ಪ್ರಶ್ನಿಸಿದರು.

ಗುತ್ತಿಗೆದಾರರು ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಮಾಡಿಲ್ಲ. ಬಿಲ್​​ಗಳು ವಿಳಂಬವಾಗುತ್ತಿದೆ ಅಂತಾ ಹೇಳಿದ್ದಾರೆ ಅಷ್ಟೇ. ಪಿಡಿಒ ವರ್ಗಾವಣೆ ಪಟ್ಟಿ ಸೋರಿಕೆಯಾಗಿರುವುದು ನಿಜ. ಈ ಬಗ್ಗೆ ಸೈಬರ್ ಸೆಲ್​​ಗೆ ದೂರು ನೀಡಲಾಗಿದೆ. ನಾವೇ ತನಿಖೆಗೆ ನೀಡಿ ನಾವೇ ದುಡ್ಡು ಕೇಳುತ್ತೇವಾ ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣೆ ಮುನ್ನ ಬಿಜೆಪಿಯೇ ಇರಲ್ಲ ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ಕೆಎಸ್ ಈಶ್ವರಪ್ಪ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ. ಸೈದ್ಯಾಂತಿಕವಾಗಿಯೂ ಇರಲ್ಲ, ಪಕ್ಷದಲ್ಲಿಯೂ ಇರಲ್ಲ. ಅಧಿಕಾರ ಇಲ್ಲದೇ ಇದ್ದಿದ್ದಕ್ಕೆ ನೀರಿನಿಂದ ಹೊರಬಂದಂತೆ ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ