ರಾಜ್ಯದಲ್ಲಿ ಕೆಲವೇ ದಿನದಲ್ಲಿ ಏಳನೇ ಗ್ಯಾರಂಟಿ ಕೂಡಾ ಜಾರಿಯಾಗುತ್ತೆ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಕೆಲವೇ ದಿನದಲ್ಲಿ ಏಳನೇ ಗ್ಯಾರಂಟಿ ಕೂಡಾ ಜಾರಿಯಾಗುತ್ತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

ರಾಜ್ಯದಲ್ಲಿ ಕೆಲವೇ ದಿನದಲ್ಲಿ ಏಳನೇ ಗ್ಯಾರಂಟಿ ಕೂಡಾ ಜಾರಿಯಾಗುತ್ತೆ ಎಂದ ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 11, 2023 | 3:44 PM

ಕಲಬುರಗಿ: ಕಾಂಗ್ರೆಸ್​​ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಮ್ಮ ಆರನೇ ಗ್ಯಾರಂಟಿಯನ್ನು ಇತ್ತೀಚೆಗೆ ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಕೆಲವೇ ದಿನದಲ್ಲಿ ಏಳನೇ ಗ್ಯಾರಂಟಿ ಕೂಡಾ ಜಾರಿಯಾಗುತ್ತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಜೆಡಿಎಸ್​ಗೆ ಪಾರದರ್ಶಕತೆ ಬೇಡವಾ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ನಗರದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಹಾರಾಡುವವರ ವಿರುದ್ದ ಮತ್ತು ಸುಳ್ಳು ಸುದ್ದಿ ಹರಿಬಿಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಕಾಂಗ್ರೆಸ್ ಸರ್ಕಾರ 45 ಪರ್ಸೆಂಟ್ ಸರ್ಕಾರ ಎನ್ನುವ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರು ದಾಖಲಾತಿ ನೀಡಲಿ. ಕಾಮಗಾರಿ ನಿಲ್ಲಿಸಲು ಕಾರಣ ಚುನಾವಣೆ ಸಮಯದಲ್ಲಿ ನಡೆದ ತರಾತುರಿ ಕಾಮಗಾರಿಗಳು. ಜೆಡಿಎಸ್​ಗೆ ಪಾರದರ್ಶಕತೆ ಬೇಡವಾ? ಭ್ರಷ್ಟಾಚಾರ ವಿರುದ್ಧ ಕ್ರಮ ಕೈಗೊಳ್ಳುವುದು ಬೇಡವಾ? ಈ ಸಿಸ್ಟಮ್ ಕ್ಲೀನ್ ಮಾಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಒನ್ ಟು ತ್ರಿಬಲ್ ವಿದ್ಯುತ್ ದರ ಹೆಚ್ಚಿಸಿದ್ಯಾರು? ಎಲ್ಲಾ ಗೊಂದಲಗಳಿಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ನಾನು ಚುನಾಯಿತ ಪ್ರತಿನಿಧಿ

ಪ್ರಿಯಾಂಕ್ ಖರ್ಗೆ ವಿದ್ಯಾರ್ಹತೆ ಬಗ್ಗೆ ತೇಜಸ್ವಿ ಸೂರ್ಯ ಪ್ರಶ್ನೆ ವಿಚಾರವಾಗಿ ಮಾತನಾಡಿ, ನನ್ನ ವಿದ್ಯಾರ್ಹತೆ ನನ್ನ ಅಫಿಡವಿಟ್​ನಲ್ಲಿದೆ. ನಾನು ಮಾಡಿರುವ ವಿದ್ಯಾಭ್ಯಾಸ ಅವರಿಗೆ ತಿಳಿಯದೇ ಇರಬಹುದು. ನನ್ನ ಬಗ್ಗೆ ಕಾಳಜಿ ಇರೋರು ಅವರ ಸುಪ್ರೀಂ ಲೀಡರ್ ವಿದ್ಯಾರ್ಹತೆ ಬಗ್ಗೆ ತಿಳಿದುಕೊಳ್ಳಲಿ. ಯಾರಾದರೂ ಪ್ರಧಾನಿ ಡಿಗ್ರಿ ಬಗ್ಗೆ ಆರ್​ಟಿಐನಲ್ಲಿ ಕೇಳಿದರೆ ಕೊಡಬೇಡಿ ಅಂತ ಹೇಳಿದ್ದಾರೆ. ನಾನು ಚುನಾಯಿತ ಪ್ರತಿನಿಧಿ, ಜನ ಆಯ್ಕೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ವಿರೋಧ ಪಕ್ಷದವರಿಗೆ ಇದೀಗ ಕೆಲಸವಿಲ್ಲ

ಶಕ್ತಿ ಯೋಜನೆಗೆ ಬಗ್ಗೆ ಮಾತನಾಡಿ, ಮಹಿಳಾ ಸಬಲೀಕರಣದ ದೃಷ್ಟಿಯಿಂದ ಈ ದಿನ ಐತಿಹಾಸಿಕ ದಿನವಾಗಿದೆ. ಬಸ್ ದರ ಹೆಚ್ಚಾಗಿದ್ದರಿಂದ ಎಲ್ಲಾ ಕಾರ್ಯಕ್ರಮಕ್ಕೆ ಪುರುಷರೇ ಹೋಗುತ್ತಿದ್ದರು. ನಾಮಕರಣ ಕಾರ್ಯಕ್ರಮಕ್ಕೆ, ಕುಬಸದ ಕಾರ್ಯಕ್ರಮಕ್ಕೂ ಗಂಡಸರೇ ಹೋಗಿ ಬರುತ್ತಿದ್ದರು. ವಿರೋಧ ಪಕ್ಷದವರಿಗೆ ಇದೀಗ ಕೆಲಸವಿಲ್ಲಾ. ಮತದಾರರು ನಮಗೆ ಯಾವಾಗ ಗ್ಯಾರಂಟಿ ಕೊಡುತ್ತೀರಿ ಅಂತ ಕೇಳುತ್ತಿಲ್ಲ. ಆದರೆ ವಿರೋಧ ಪಕ್ಷದವರು ಕೇಳುತ್ತಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರದಲ್ಲೇ ಬಿಜೆಪಿ, ಜೆಡಿಎಸ್​ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್

ಜನರಿಗಿಂತ ವಿರೋಧ ಪಕ್ಷದವರಿಗೇನೆ ಗ್ಯಾರಂಟಿ ಯೋಜನೆ ಮೊದಲು ಬೇಕಾಗಿರಬಹುದು. ಬಿಜೆಪಿಯವರು ನಾಲ್ಕು ವರ್ಷ ಏನು ಮಾಡಲಿಲ್ಲಾ. ಆರ್ಥಿಕ ಹೊರೆ ಹೊರವಷ್ಟು ಸಾಮರ್ಥ್ಯ ಸಿಎಂಗೆ ಇದೆ. ಹತ್ತು ಲಕ್ಷ ಕೋಟಿ ಹಣವನ್ನು ದೊಡ್ಡ ಉದ್ಯಮಿದಾರರ ಸಾಲ ಮನ್ನಾ ಮಾಡಿದ್ದಾರೆ. ಆ ಹಣ ಎಲ್ಲಿಂದ ಬಿಜೆಪಿಯವರಿಗೆ ಬಂತು. ಆದರೆ ಬಡವರು, ಮಹಿಳೆಯರು, ರೈತರಿಗೆ ಅನಕೂಲ ಮಾಡಲು ಹೊರಟಾಗ ಹಣ ಎಲ್ಲಿಂದ ತರುತ್ತೀರಿ ಅಂತ ನಮಗೆ ಕೇಳುತ್ತಾರೆ ಎಂದು ವಾಗ್ದಾಳಿ ಮಾಡುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:40 pm, Sun, 11 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ