Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ, ಮುನಿಸಿಕೊಂಡ ರಾಮಲಿಂಗಾರೆಡ್ಡಿ ಮನವೊಲಿಕೆಗೆ ಡಿಕೆ ಬ್ರದರ್ಸ್ ಕಸರತ್ತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟವೇನೋ ಭರ್ತಿಯಾಗಿದೆ. ಆದ್ರೆ, ಇದೀಗ ಖಾತೆ ಹಂಚಿಕೆ ಸಂಬಂಧ ಅಸಮಾಧಾನ ಸ್ಫೋಟಗೊಂಡಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ, ಮುನಿಸಿಕೊಂಡ ರಾಮಲಿಂಗಾರೆಡ್ಡಿ ಮನವೊಲಿಕೆಗೆ ಡಿಕೆ ಬ್ರದರ್ಸ್ ಕಸರತ್ತು
ರಾಮಲಿಂಗಾರೆಡ್ಡಿ
Follow us
ರಮೇಶ್ ಬಿ. ಜವಳಗೇರಾ
|

Updated on:May 28, 2023 | 3:41 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Result 2023) ಹೊರ ಬಿದ್ದ 15 ದಿನಗಳ ಬಳಿಕ ಸಿದ್ದರಾಮಯ್ಯ  ಸಂಪುಟ (Siddaramaiah Cabinet)ಫುಲ್ ಫಿಲ್ ಆಗಿದೆ. ಸಿಎಂ, ಡಿಸಿಎಂ ಸೇರಿ ಒಟ್ಟು 34 ಸಚಿವರಿದ್ದಾರೆ. ಆದ್ರೆ, ಇದೀಗ ಸಚಿವರ ಖಾತೆ ಕ್ಯಾತೆ(Ministers portfolio) ಶುರುವಾಗಿದೆ. ಅದರಲ್ಲೂ ಹಿರಿಯ ನಾಯಕ ರಾಮಲಿಂಗರೆಡ್ಡಿ9ramalinga reddy) ಅವರು ಖಾತೆಗೆ ಸಂಬಂಧ ಮುನಿಸಿಕೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಹಾಗೂ ಸಂಸದ ಡಿಕೆ ಸುರೇಶ್ ಮನವೊಲಿಸುವ ಕಸರತ್ತು ನಡೆಸಿದ್ದಾರೆ.

ಇದನ್ನೂ ಓದಿ: ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾಯ್ತು, ಖಾತೆ ಹಂಚಿಕೆ ಕಸರತ್ತು ಶುರು: ಸೀನಿಯರ್ಸ್​ಗೆ ಪ್ರಬಲ ಖಾತೆ ಭಾಗ್ಯ!

ಹೌದು….ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮುಂದಾಗಿದ್ದಾರೆ. ಆದ್ರೆ, ರಾಮಲಿಂಗರೆಡ್ಡಿ ಅವರು ಸಾರಿಗೆ ಖಾತೆ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದು, ಬೇರೆ ಖಾತೆ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ತಮಗೆ ಸಾರಿಗೆ ಇಲಾಖೆ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳುತ್ತಿರುವ ರಾಮಲಿಂಗರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಖಾತೆ ಸಂಬಂಧ ಮುನಿಸಿಕೊಂಡಿರುವ ರಾಮಲಿಂಗರೆಡ್ಡಿ ಅವರನ್ನು ಮನವೊಲಿಸಲು ಡಿಕೆ ಬ್ರದರ್ಸ್ ಮುಂದಾಗಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಯಿಂದಲೂ ಬೆಂಗಳೂರಿನ ಲಕ್ಕಸಂದ್ರ ಬಡಾವಣೆಯಲ್ಲಿರುವ ನಿವಾಸದಲ್ಲಿ  ರಾಮಲಿಂಗರೆಡ್ಡಿ ಜೊತೆಗೆ ಡಿಕೆ ಸುರೇಶ್ ನಿರಂತರ ಮಾತುಕತೆ ನಡೆಸಿದ್ದು, ಮನವೊಲಿಕೆಗೆ ಪ್ರಯತ್ನಿಸುತ್ತಿದ್ದಾರೆ. ಆದರೂ ರಾಮಲಿಂಗರೆಡ್ಡಿ ಮಾತ್ರ ಬಗ್ಗುತ್ತಿಲ್ಲ. ಇದರಿಂದ ಅಂತಿಮವಾಗಿ ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಫೀಲ್ಡ್​ಗೆ ಇಳಿದಿದ್ದು, ದಿಢೀರ್ ರಾಮಲಿಂಗರೆಡ್ಡಿ ನಿವಾಸಕ್ಕೆ ತೆರಳಿದ್ದು, ಮನವೊಲಿಕೆಗೆ ಯತ್ನಿಸುತ್ತಿದ್ದಾರೆ.

Published On - 3:30 pm, Sun, 28 May 23

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್